AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs DC, IPL 2022: ಐಪಿಎಲ್​ನಲ್ಲಿಂದು ಲಖನೌ-ಡೆಲ್ಲಿ ಮುಖಾಮುಖಿ: ವಾರ್ನರ್ ಮೇಲೆ ಎಲ್ಲರ ಕಣ್ಣು

Lucknow vs Delhi: ಇಂದಿನ ಪಂದ್ಯದ ಪ್ರಮುಖ ಹೈಲೇಟ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಡೇವಿಡ್ ವಾರ್ನರ್ ಆಗಿದ್ದಾರೆ. ಹೌದು, ಇಂದಿನ ಪಂದ್ಯಕ್ಕೆ ಎನ್ರಿಚ್ ನಾರ್ಕಿಯಾ ಮತ್ತು ಡೇವಿಡ್ ವಾರ್ನರ್ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಲಭ್ಯವಾಗಲಿದ್ದು ಲಖನೌ ಸೂಪರ್ ಜೇಂಟ್ಸ್ ತಂಡದಲ್ಲಿ ಮಾರ್ಕಸ್ ಸ್ಟೋಯಿನಿಸ್ ಕಾಣಿಸಿಕೊಳ್ಳಲಿದ್ದಾರೆ.

LSG vs DC, IPL 2022: ಐಪಿಎಲ್​ನಲ್ಲಿಂದು ಲಖನೌ-ಡೆಲ್ಲಿ ಮುಖಾಮುಖಿ: ವಾರ್ನರ್ ಮೇಲೆ ಎಲ್ಲರ ಕಣ್ಣು
LSG vs DC IPL 2022
TV9 Web
| Updated By: Vinay Bhat|

Updated on: Apr 07, 2022 | 8:44 AM

Share

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಕೆಎಲ್ ರಾಹುಲ್ (KL Rahul) ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ಮತ್ತು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (LSG vs DC) ತಂಡ ಮುಖಾಮುಖಿ ಆಗುತ್ತಿದೆ. ಐಪಿಎಲ್ 2022 ರಲ್ಲಿ ಈವರೆಗೆ ಒಟ್ಟು 3 ಪಂದ್ಯಗಳನ್ನಾಡಿರುವ ಲಖನೌ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದೊಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇತ್ತ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಒಂದು ಪಂದ್ಯದಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದ ಪ್ರಮುಖ ಹೈಲೇಟ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಡೇವಿಡ್ ವಾರ್ನರ್ ಆಗಿದ್ದಾರೆ. ಹೌದು, ಇಂದಿನ ಪಂದ್ಯಕ್ಕೆ ಎನ್ರಿಚ್ ನಾರ್ಕಿಯಾ ಮತ್ತು ಡೇವಿಡ್ ವಾರ್ನರ್ (David Warner) ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಲಭ್ಯವಾಗಲಿದ್ದು ಲಖನೌ ಸೂಪರ್ ಜೇಂಟ್ಸ್ ತಂಡದಲ್ಲಿ ಮಾರ್ಕಸ್ ಸ್ಟೋಯಿನಿಸ್ ಕಾಣಿಸಿಕೊಳ್ಳಲಿದ್ದಾರೆ.

ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಬಳಿಕ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಎದುರು ಆಘಾತಕಾರಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಎಡವುತ್ತಿದೆ. ಇದೀಗ ವಾರ್ನರ್ ಆಗಮನದ ಬಳಿಕ ಈ ತೊಂದರೆ ತಲಗುತ್ತಾ ಎಂಬುದು ನೋಡಬೇಕದೆ. ಪೃಥ್ವಿ ಶಾ, ಮಂದೀಪ್ ಸಿಂಗ್, ಲಲಿತ್ ಯಾದವ್‌ ವೈಫಲ್ಯ ಅನುಭವಿಸುತ್ತಿರುವುದು ತಲೆನೋವಾಗಿದೆ. ಅಲ್ಲದೆ ಭರವಸೆಯ ಶಾರ್ದೂಲ್ ಠಾಕೂರ್ ಎರಡೂ ವಿಭಾಗಗಳಲ್ಲೂ ನಿರಾಸೆ ಮೂಡಿಸುತ್ತಿದ್ದರೆ, ಮುಸ್ತಾಫಿಜರ್, ಖಲೀಲ್ ಅಹ್ಮದ್, ಕುಲ್ದೀಪ್ ಬೌಲಿಂಗ್‌ ಇನ್ನಷ್ಟು ಪರಿಣಾಮಕಾರಿ ಆಗಬೇಕಿದೆ.

ಇತ್ತ ಲಖನೌ ತಂಡದ ಆಡಳಿತವು ಆಲ್‌ರೌಂಡರ್ ಸ್ಟೋಯಿನಿಸ್‌ಗಾಗಿ ಆಯಂಡ್ರ್ಯೂ ಟೈ ಅಥವಾ ಎವಿನ್ ಲೂಯಿಸ್ ಅವರನ್ನು ಹೊರಗಿಡುವುದು ಖಚಿತ. ಬ್ಯಾಟರ್ ಮನೀಷ್ ಪಾಂಡೆ ಇದುವರೆಗೆ ಸ್ಫೋಟಿಸದಿರುವುದು ಲಖನೌಗೆ ಹಿನ್ನಡೆ ತಂದಿದೆ. ಉಳಿದಂತೆ ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ ಹಾಗೂ ಆಯುಷ್ ಬಡೋನಿ ಆಸರೆಯಾಗುತ್ತಿದ್ದಾರೆ. ಆಲ್ರೌಂಡರ್ ಜೇಸನ್ ಹೋಲ್ಡರ್ ಈಗಾಗಲೆ ತಂಡದ ಬಲ ಹೆಚ್ಚಿಸಿದ್ದಾರೆ. ನಾಯಕ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದರೆ ತಂಡ ದೊಡ್ಡ ಮೊತ್ತ ಕಲೆಹಾಕುವುದು ಖಚಿತ.

ಪಿಚ್ ವರದಿ: ಬ್ರಬೌರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್‌ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ನಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿನ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ. ಹೀಗಾಗಿ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ.

ಲಖನೌ ಸಂಭಾವ್ಯ ಪ್ಲೇಯಿಂಗ್ XI: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ಮಾರ್ಕಸ್ ಸ್ಟೋಯಿನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಅವೇಶ್ ಖಾನ್.

ಡೆಲ್ಲಿ ಸಂಭಾವ್ಯ ಪ್ಲೇಯಿಂಗ್ XI:  ಪೃಥ್ವಿ ಶಾ, ಡೇವಿಡ್ ವಾರ್ನರ್, ಟಿಮ್ ಸೀಫರ್ಟ್, ಶ್ರೀಕರ್ ಭರತ್, ರಿಷಭ್ ಪಂತ್, ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಯಾದವ್, ಮುಸ್ತಾಫಿಜುರ್ ರೆಹಮಾನ್.

Pat Cummins: ಮೊದಲ ಪಂದ್ಯದಲ್ಲೇ ಕಮಿನ್ಸ್​ ಸ್ಫೋಟಕ ಆಟ: ಕೇವಲ 14 ಎಸೆತಗಳಲ್ಲಿ ಅರ್ಧಶತಕದ ದಾಖಲೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?