IPL 2023 Points Table: ಲಖನೌ ವಿರುದ್ಧ ಸೋತ ಆರ್​ಸಿಬಿ ಎಷ್ಟನೇ ಸ್ಥಾನದಲ್ಲಿದೆ?: ಆರೆಂಜ್, ಪರ್ಪಲ್ ಕ್ಯಾಪ್​ನಲ್ಲಿ ಮಹತ್ವದ ಬದಲಾವಣೆ

IPL 2023: ಬೆಂಗಳೂರು ಹಾಗೂ ಲಖನೌ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: ಲಖನೌ ವಿರುದ್ಧ ಸೋತ ಆರ್​ಸಿಬಿ ಎಷ್ಟನೇ ಸ್ಥಾನದಲ್ಲಿದೆ?: ಆರೆಂಜ್, ಪರ್ಪಲ್ ಕ್ಯಾಪ್​ನಲ್ಲಿ ಮಹತ್ವದ ಬದಲಾವಣೆ
RCB vs LSG
Follow us
Vinay Bhat
|

Updated on:Apr 11, 2023 | 1:06 PM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 15 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಸೋಮವಾರ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೇಂಟ್ಸ್ (RCB vs LSG) ನಡುವಣ ಪಂದ್ಯ ಕೊನೆಯ ಎಸೆತದ ವರೆಗೂ ನಡೆದು ಎಲ್​ಎಸ್​ಜಿ ರೋಚಕ ಜಯ ಸಾಧಿಸಿತು. ಇದೀಗ ಬೆಂಗಳೂರು ಹಾಗೂ ಲಖನೌ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಆರ್​ಸಿಬಿ ವಿರುದ್ಧ ರೋಚಕ ಜಯ ಸಾಧಿಸಿರುವ ಲಖನೌ ಸೂಪರ್ ಜೇಂಟ್ಸ್ ತಂಡ ಮೂರನೇ ಸ್ಥಾನದಿಂದ ಅಗ್ರಸ್ಥಾನಕ್ಕೇರಿದೆ. +1.048 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು ಆರ್​ಆರ್​ ಟೇಬಲ್ ಟಾಪ್​ನಲ್ಲಿದೆ. +2.067 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಸ್ಥಾನದಲ್ಲಿದ್ದು ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು +1.375 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಗುಜರಾತ್ ಟೈಟಾನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದ್ದು ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು +0.431 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಸ್ಥಾನದಲ್ಲಿದೆ. +0.356 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಪಂಜಾಬ್ ಕಿಂಗ್ಸ್ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ 4 ಅಂಕ ಹೊಂದಿ +0.235ರನ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಸೋಲು ಒಂದು ಗೆಲುವು ಕಂಡು 2 ಅಂಕ ಸಂಪಾದಿಸಿ -0.800 ರನ್​ರೇಟ್ ಹೊಂದಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಖಾತೆ ತೆರೆದು ಎಂಟನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯದಲ್ಲಿ ಎರಡರಲ್ಲೂ ಸೋಲು ಒಂದರಲ್ಲಿ ಜಯ ಕಂಡು 1 ಅಂಕ ಸಂಪಾದಿಸಿ -1.502 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ಒಂಬತ್ತನೆ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -1.394 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಮೂರೂ ಪಂದ್ಯಗಳಲ್ಲಿ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -2.092 ರನ್​ರೇಟ್ ಹೊಂದಿದೆ.

DC vs MI, IPL 2023: ಐಪಿಎಲ್​ನಲ್ಲಿಂದು ಸೋತವರ ಕಾಳಗ: ಮೊದಲ ಗೆಲುವಿಗೆ ಡೆಲ್ಲಿ-ಮುಂಬೈ ಸೆಣೆಸಾಟ

ಆರೆಂಜ್ ಕ್ಯಾಪ್:

ಇದನ್ನೂ ಓದಿ
Image
Avesh Khan: ರೋಚಕ ಜಯ ಸಾಧಿಸುತ್ತಿದ್ದಂತೆ ಹೆಲ್ಮೆಟ್ ತೆಗೆದು ಮೈದಾನಕ್ಕೆ ಎಸೆದ ಆವೇಶ್ ಖಾನ್: ಬಿಸಿಸಿಯಿಂದ ಬಂತು ಪತ್ರ
Image
Amit Mishra: ವಿವಾದಕ್ಕೆ ಕಾರಣವಾಯಿತು ಆರ್​ಸಿಬಿ-ಎಲ್​ಎಸ್​ಜಿ ನಡುವಣ ರೋಚಕ ಪಂದ್ಯ: ಫಲಿತಾಂಶದಲ್ಲಿ ಆಗುತ್ತಾ ಬದಲಾವಣೆ?
Image
RCB vs LSG, IPL 2023: ಕೊನೆಯ 1 ಬಾಲ್​ನಲ್ಲಿ 1 ರನ್: ಆರ್​ಸಿಬಿ-ಎಲ್​ಎಸ್​ಜಿ ಪಂದ್ಯ ರೋಚಕ ಫೋಟೋಗಳು ಇಲ್ಲಿದೆ ನೋಡಿ
Image
Faf Duplessis: ಪಂದ್ಯ ಮುಗಿದ ಬಳಿಕ ಬೇಸರದ ಮಾತುಗಳನ್ನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್: ಏನು ಹೇಳಿದ್ರು ನೋಡಿ

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಲ್ಲಿ ಎರಡು ಅರ್ಧಶತಕ ಸಿಡಿಸಿ ಒಟ್ಟು 255 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಸಿಎಸ್​ಕೆ ತಂಡದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಇದ್ದು 189 ರನ್ ಕಲೆಹಾಕಿದ್ದಾರೆ. ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ತೃತೀಯ ಸ್ಥಾನಕ್ಕೆ ಜಿಗಿದಿದ್ದಾರೆ. ಇವರು ಮೂರು ಪಂದ್ಯಗಳಲ್ಲಿ 175 ರನ್ ಕಲೆಹಾಕಿದ್ದಾರೆ.

ಪರ್ಪಲ್ ಕ್ಯಾಪ್:

ಲಖನೌ ತಂಡದ ಮಾರ್ಕ್ ವುಡ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಿಂದ 9 ವಿಕೆಟ್ ಕಬಳಿಸಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ ಮೂರು ಪಂದ್ಯಗಳಿಂದ ಒಟ್ಟು 8 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಯುಜ್ವೇಂದ್ರ ಚಹಲ್ ಕೂಡ ಆಡಿದ ಮೂರು ಪಂದ್ಯಗಳಿಂದ 8 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Tue, 11 April 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ