16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿಯಲ್ಲಿ 15 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಸೋಮವಾರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೇಂಟ್ಸ್ (RCB vs LSG) ನಡುವಣ ಪಂದ್ಯ ಕೊನೆಯ ಎಸೆತದ ವರೆಗೂ ನಡೆದು ಎಲ್ಎಸ್ಜಿ ರೋಚಕ ಜಯ ಸಾಧಿಸಿತು. ಇದೀಗ ಬೆಂಗಳೂರು ಹಾಗೂ ಲಖನೌ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
DC vs MI, IPL 2023: ಐಪಿಎಲ್ನಲ್ಲಿಂದು ಸೋತವರ ಕಾಳಗ: ಮೊದಲ ಗೆಲುವಿಗೆ ಡೆಲ್ಲಿ-ಮುಂಬೈ ಸೆಣೆಸಾಟ
ಆರೆಂಜ್ ಕ್ಯಾಪ್:
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಲ್ಲಿ ಎರಡು ಅರ್ಧಶತಕ ಸಿಡಿಸಿ ಒಟ್ಟು 255 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಸಿಎಸ್ಕೆ ತಂಡದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಇದ್ದು 189 ರನ್ ಕಲೆಹಾಕಿದ್ದಾರೆ. ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ತೃತೀಯ ಸ್ಥಾನಕ್ಕೆ ಜಿಗಿದಿದ್ದಾರೆ. ಇವರು ಮೂರು ಪಂದ್ಯಗಳಲ್ಲಿ 175 ರನ್ ಕಲೆಹಾಕಿದ್ದಾರೆ.
ಪರ್ಪಲ್ ಕ್ಯಾಪ್:
ಲಖನೌ ತಂಡದ ಮಾರ್ಕ್ ವುಡ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಿಂದ 9 ವಿಕೆಟ್ ಕಬಳಿಸಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ ಮೂರು ಪಂದ್ಯಗಳಿಂದ ಒಟ್ಟು 8 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಯುಜ್ವೇಂದ್ರ ಚಹಲ್ ಕೂಡ ಆಡಿದ ಮೂರು ಪಂದ್ಯಗಳಿಂದ 8 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:06 pm, Tue, 11 April 23