AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs PBKS: ಡೆಲ್ಲಿ ಬೌಲರ್​ ಲುಂಗಿ ಎನ್​ಗಿಡಿಗೆ ಗಂಭೀರ ಗಾಯ; ಆಸ್ಪತ್ರೆಗೆ ರವಾನೆ

Lungi Ngidi Suffers Serious Head Injury: ದೆಹಲಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ವೇಗಿ ಲುಂಗಿ ಎನ್​ಗಿಡಿ ಕ್ಯಾಚ್ ಹಿಡಿಯುವಾಗ ತಲೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಮೈದಾನದಲ್ಲೇ ಪ್ರಜ್ಞೆ ತಪ್ಪಿ ಬಿದ್ದ ಅವರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಐಪಿಎಲ್ ಭವಿಷ್ಯ ಅನಿಶ್ಚಿತವಾಗಿದೆ. ಇದು ಡೆಲ್ಲಿ ತಂಡಕ್ಕೆ 24 ಗಂಟೆಗಳಲ್ಲಿ ಎರಡನೇ ಆಘಾತವಾಗಿದೆ. ಅಭಿಮಾನಿಗಳು ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

DC vs PBKS: ಡೆಲ್ಲಿ ಬೌಲರ್​ ಲುಂಗಿ ಎನ್​ಗಿಡಿಗೆ ಗಂಭೀರ ಗಾಯ; ಆಸ್ಪತ್ರೆಗೆ ರವಾನೆ
Lungi Ngidi
ಪೃಥ್ವಿಶಂಕರ
|

Updated on:Apr 25, 2026 | 6:29 PM

Share

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ (IPL 2026) ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ (DC vs PBKS) ನಡುವಿನ ಪಂದ್ಯದಲ್ಲಿ ಮಹಾ ಅವಘಡವೊಂದು ಸಂಭವಿಸಿದೆ. ಕ್ಯಾಚ್ ಹಿಡಿಯುವ ಯತ್ನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗದ ಬೌಲರ್ ಲುಂಗಿ ಎನ್​ಗಿಡಿ (Lungi Ngidi) ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್​ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್​ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು.

ಎನ್​ಗಿಡಿ ಆಸ್ಪತ್ರೆಗೆ ರವಾನೆ

ಎನ್​ಗಿಡಿ ಅವರ ಗಾಯದ ತೀವ್ರತೆ ಎಷ್ಟಿತ್ತೆಂದರೆ ಅವರಿಗೆ ಮೇಲೇಳಲು ಸಾಧ್ಯವಾಗಲಿಲ್ಲ. ಕೂಡಲೇ ಮೈದಾನಕ್ಕೆ ಆಗಮನಿಸಿದ ಡೆಲ್ಲಿ ತಂಡದ ಫಿಸಿಯೋ ಎನ್​ಗಿಡಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೂ ಎನ್​ಗಿಡಿ ಚೇತರಿಸಿಕೊಳ್ಳುವಂತೆ ಕಾಣಲಿಲ್ಲ. ಕೂಡಲೇ ಸ್ಟ್ರೆಚರ್ ಮೂಲಕ ಎನ್​ಗಿಡಿ ಅವರನ್ನು ಡಗೌಟ್​ಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಗಾಯದ ಗಂಭೀರತೆಯನ್ನು ಅರಿತು ಕೂಡಲೇ ಆಂಬುಲೆನ್ಸ್ ಅನ್ನು ಮೈದಾನಕ್ಕೆ ಕರೆತರಲಾಯಿತು. ನಂತರ ಅವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಪ್ರಸ್ತುತ ಎನ್​ಗಿಡಿ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಬಳಿಕವಷ್ಟೇ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂದು ತಿಳಿಯಲಿದೆ. ಎನ್​ಗಿಡಿ ಅವರನ್ನು ಸ್ಕ್ಯಾನಿಂಗ್​ ಒಳಪಡಿಸುವ ಸಾಧ್ಯತೆ ಇದ್ದು, ಅದರ ವರದಿ ಬಂದ ಬಳಿಕವಷ್ಟೇ ಅವರ ಚೇತರಿಕೆಯ ಬಗ್ಗೆ ಹಾಗೂ ಅವರ ಲಭ್ಯತೆಯ ಬಗ್ಗೆ ಮಾಹಿತಿ ತಿಳಿಯಲಿದೆ. ಸದ್ಯದ ಪರಿಸ್ಥಿತಿಯನ್ನು ನೋಡಿದರೆ, ಎನ್​ಗಿಡಿ ಚೇತರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕಾಗಬಹುದು. ಇದರಿಂದ ಅವರು ಐಪಿಎಲ್​ನಿಂದ ಹೊರಬೀಳುವ ಸಾಧ್ಯತೆಗಳೆ ಹೆಚ್ಚಿವೆ. ಅದೇನೆ ಆಗಲಿ ಎನ್​ಗಿಡಿ ಬೇಗ ಗುಣಮುಖರಾಗಿ ಆಟಕ್ಕೆ ಮರಳುವಂತ್ತಾಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಡೆಲ್ಲಿಗೆ 2ನೇ ಆಘಾತ

ವಾಸ್ತವವಾಗಿ ಕಳೆದ 24 ಗಂಟೆಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದು ಎರಡನೇ ಆಘಾತವಾಗಿದೆ. ಈ ಪಂದ್ಯಕ್ಕೂ ಒಂದು ದಿನ ಮೊದಲು ಅಭ್ಯಾಸದ ವೇಳೆ ತಂಡದ ಯುವ ಆಟಗಾರ ಮುಖಕ್ಕೆ ಚೆಂಡು ಬಡಿದು ತೀವ್ರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಕೂಡ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎನ್​ಗಿಡಿ ಹೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿಕೊಂಡಿದ್ದಾರೆ. ಇವರಿಬ್ಬರ ಗಾಯದ ತೀವ್ರತೆ ಎಷ್ಟಿದೆ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sat, 25 April 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!