AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಅಭಿಮಾನಿಗಳಿಗೆ 3 ಗುಡ್ ನ್ಯೂಸ್… ಒಂದು ಬ್ಯಾಡ್ ನ್ಯೂಸ್

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡು ತವರು ಮೈದಾನದಲ್ಲಿ ಕಣಕ್ಕಿಳಿಯಲಿದೆ. ಅಂದರೆ ಐದು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದರೆ, ಇನ್ನೆರಡು ಮ್ಯಾಚ್​ಗಳನ್ನು ರಾಯ್​ಪುರದಲ್ಲಿ ಆಡಲು ನಿರ್ಧರಿಸಲಾಗಿದೆ. ಇದಾಗ್ಯೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳು ಜರುಗಲಿದೆ.

IPL 2026: RCB ಅಭಿಮಾನಿಗಳಿಗೆ 3 ಗುಡ್ ನ್ಯೂಸ್... ಒಂದು ಬ್ಯಾಡ್ ನ್ಯೂಸ್
RCB Fans
ಝಾಹಿರ್ ಯೂಸುಫ್
|

Updated on: Mar 04, 2026 | 10:53 AM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಕಲರವ ಶುರುವಾಗಲಿದೆ. ಕಳೆದ ಕೆಲ ತಿಂಗಳುಗಳಿಂದ ನಿಷೇಧಕ್ಕೆ ಒಳಗಾಗಿದ್ದ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಖಚಿತತೆಯೊಂದಿಗೆ ಆರ್​ಸಿಬಿ ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್ ಕೂಡ ಸಿಕ್ಕಿದೆ. ಇದರ ಜೊತೆಗೆ ಒಂದು ಬ್ಯಾಡ್ ನ್ಯೂಸ್ ಕೂಡ ಇದೆ.

ಇಲ್ಲಿ ಗುಡ್ ನ್ಯೂಸ್ ಏನೆಂದರೆ… ಈ ಬಾರಿಯ ಐಪಿಎಲ್​ನ ಪ್ರಮುಖ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಖಚಿತಪಡಿಸಿದ್ದಾರೆ. ಅದರಂತೆ ಐಪಿಎಲ್​ 2026ರ ಮೂರು ಪ್ರಮುಖ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಆ ಪಂದ್ಯಗಳಾವುವು ಎಂದರೆ…

  • ಉದ್ಘಾಟನಾ ಪಂದ್ಯ: ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ಕೆಎಸ್​ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ತಿಳಿಸಿದ್ದಾರೆ. ಅಂದರೆ ಈ ಭಅರಿಯ ಐಪಿಎಲ್ ಶುರುವಾಗುವುದು ಬೆಂಗಳೂರಿನಲ್ಲಿ.
  • ಪ್ಲೇಆಫ್ ಪಂದ್ಯ: ಉದ್ಘಾಟನಾ ಪಂದ್ಯವಲ್ಲದೇ, ಪ್ಲೇಆಫ್ ಸುತ್ತಿನ ಒಂದು ಪಂದ್ಯ ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ. ಅದು ಎಲಿಮಿನೇಟರ್ ಪಂದ್ಯ ಆಗಿರಬಹುದು ಇಲ್ಲಾ ಮೊದಲ ಕ್ವಾಲಿಫೈಯರ್ ಮ್ಯಾಚ್ ಆಗಿರಬಹುದು.
  • ಫೈನಲ್ ಪಂದ್ಯ: ಈ ಬಾರಿಯ ಐಪಿಎಲ್​ನ ಫೈನಲ್ ಪಂದ್ಯ ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಐಪಿಎಲ್ 2026ರ ಕೊನೆಯ ಪಂದ್ಯ ಕೂಡ ಬೆಂಗಳೂರಿನಲ್ಲೇ ನಡೆಯಲಿದೆ.

ಆರ್​ಸಿಬಿ ತಂಡದ 5 ಪಂದ್ಯಗಳೊಂದಿಗೆ ಈ ಬಾರಿ ಹೆಚ್ಚುವರಿ 2 ಮ್ಯಾಚ್​ಗಳೂ ಕೂಡ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಗುಡ್ ನ್ಯೂಸ್ ಎಂದೇ ಹೇಳಬಹುದು. ಇನ್ನು ಬ್ಯಾಡ್ ನ್ಯೂಸ್ ಯಾವುದು ಎಂದರೆ…

  • ಪ್ರೇಕ್ಷಕರ ಮಿತಿ: ಈ ಬಾರಿಯ ಐಪಿಎಲ್ ಪಂದ್ಯಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಮಿತಿ ಇರಲಿದೆ. ಅಂದರೆ ಕ್ರೀಡಾಂಗಣದ ಸುರಕ್ಷತೆಯ ದೃಷ್ಟಿಯಿಂದ ಪ್ರೇಕ್ಷಕರ ಸಂಖ್ಯೆಯನ್ನು 30 ರಿಂದ 35 ಸಾವಿರಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಅಂದರೆ ಈ ಬಾರಿ ಸಂಪೂರ್ಣ ಸೀಟಿಂಗ್ ಟಿಕೆಟ್​ಗಳನ್ನು ಮಾರಾಟ ಮಾಡುವುದಿಲ್ಲ. ಹೀಗಾಗಿ ಸೀಮಿತ ಪ್ರೇಕ್ಷಕರಿಗೆ ಮಾತ್ರ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸಲು ಅವಕಾಶ ದೊರೆಯಲಿದೆ ಎಂದು ತಿಳಿದು ಬಂದಿದೆ.

ಆರ್​ಸಿಬಿ 5+2 ಪಂದ್ಯ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ 2 ಹೋಮ್​ ಗ್ರೌಂಡ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಲೀಗ್ ಹಂತದ 7 ಪಂದ್ಯಗಳಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 5 ಮ್ಯಾಚ್​ಗಳನ್ನು ಮಾತ್ರ ಆಡಲಿದೆ.

ಇನ್ನುಳಿದ ಎರಡು ಪಂದ್ಯಗಳನ್ನು ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಶಾಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡಲಿದೆ.

ಇದನ್ನೂ ಓದಿ: RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

ಇದಾಗ್ಯೂ ಪ್ಲೇಆಫ್ ಪಂದ್ಯ ಹಾಗೂ ಫೈನಲ್ ಪಂದ್ಯ ಬೆಂಗಳೂರಿನಲ್ಲೇ ಜರುಗುತ್ತಿರುವುದರಿಂದ ಆರ್​ಸಿಬಿ ಅಭಿಮಾನಿಗಳಿಗೆ ಒಟ್ಟು 7 ಪಂದ್ಯಗಳನ್ನು ವೀಕ್ಷಿಸಲು ಅವಕಾಶ ದೊರೆಯಲಿದೆ.

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ