ಮ್ಯಾಚ್ ಫಿಕ್ಸಿಂಗ್ ಆರೋಪ: ಐಎಎಸ್ ಅಧಿಕಾರಿ ವಿರುದ್ಧ ಧೋನಿ ಸಲ್ಲಿಸಿದ ಅರ್ಜಿ ವಿಚಾರಣೆ

MS Dhoni: 2 ವರ್ಷಗಳ ನಿಷೇಧದ ಬಳಿಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಕಂಬ್ಯಾಕ್ ಮಾಡಿತ್ತು.

ಮ್ಯಾಚ್ ಫಿಕ್ಸಿಂಗ್ ಆರೋಪ: ಐಎಎಸ್ ಅಧಿಕಾರಿ ವಿರುದ್ಧ ಧೋನಿ ಸಲ್ಲಿಸಿದ ಅರ್ಜಿ ವಿಚಾರಣೆ
MS Dhoni
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 13, 2023 | 10:56 PM

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ವಿರುದ್ಧ ಸ್ಪಾಟ್ ಫಿಕ್ಸಿಂಗ್ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಂಭೀರ ಆರೋಪ ಮಾಡಿದ್ದ ಐಎಎಸ್ ಅಧಿಕಾರಿ ವಿರುದ್ಧ ಧೋನಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಈ ಪ್ರಕರಣದ ವಿಚಾರಣೆಯನ್ನು ನಡೆಸಲು ಮದ್ರಾಸ್ ಹೈಕೋರ್ಟ್ ನಿರ್ಧರಿಸಿದೆ. ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ವಿರುದ್ಧ ಧೋನಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. ಅದರಂತೆ ನ್ಯಾಯಾಲಯವು ಜೂನ್ 15 ರಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.

ಏನಿದು ಪ್ರಕರಣ:

2013ರಲ್ಲಿ ಐಎಎಸ್ ಅಧಿಕಾರಿ ಸಂಪತ್ ಕುಮಾರ್ ಅವರು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸುತ್ತಿದ್ದರು. ಆ ವೇಳೆ ಧೋನಿ ವಿರುದ್ಧ ಹೇಳಿಕೆ ನೀಡಿದಲ್ಲದೆ, ಮ್ಯಾಚ್ ಫಿಕ್ಸಿಂಗ್ ಆರೋಪವನ್ನೂ ಮಾಡಿದ್ದರು. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್‌ ತಂಡಗಳನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ತನ್ನದೇನು ಪಾತ್ರವಿಲ್ಲ ಎಂಬ ವಾದವನ್ನು ಧೋನಿ ಮುಂದಿಟ್ಟಿದ್ದಾರೆ.

100 ಕೋಟಿ ರೂ. ಮಾನನಷ್ಟ ಮೊಕದ್ದಮೆ:

ಈ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ತಾನು ಇಲ್ಲದಿದ್ದರೂ, ಗಂಭೀರ ಆರೋಪ ಮಾಡಿದ್ದ ಐಎಎಸ್ ಅಧಿಕಾರಿ ಸಂಪತ್ ಕುಮಾರ್ ವಿರುದ್ಧ 2014 ರಲ್ಲಿ ಮಹೇಂದ್ರ ಸಿಂಗ್ ಧೋನಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದೀಗ ಈ ಸಂಬಂಧ ವಿಚಾರಣೆ ನಡೆಸಲು ತಮಿಳುನಾಡು ಹೈಕೋರ್ಟ್ ಮುಂದಾಗಿದೆ.

ಸಿಎಸ್​ಕೆ ಭರ್ಜರಿ ಕಂಬ್ಯಾಕ್:

2 ವರ್ಷಗಳ ನಿಷೇಧದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಕಂಬ್ಯಾಕ್ ಮಾಡಿತ್ತು. 2018 ರಲ್ಲಿ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಸಿಎಸ್​ಕೆ ತಂಡವು, ಆ ಬಳಿಕ 2021 ರಲ್ಲಿ ಹಾಗೂ 2023 ರಲ್ಲಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

Published On - 10:55 pm, Tue, 13 June 23