AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2025: 4.3 ಓವರ್​ಗಳಲ್ಲಿ ಪಂದ್ಯ ಗೆದ್ದ ಬೆಂಗಳೂರಿಗೆ ಸತತ 2ನೇ ಜಯ

Maharaja Trophy 2025: ಮೈಸೂರಿನಲ್ಲಿ ನಡೆದ ಮಹಾರಾಜ ಟಿ20 ಟ್ರೋಫಿಯ 9ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಶಿವಮೊಗ್ಗ ತಂಡವನ್ನು ಸೋಲಿಸಿದೆ. ಮಳೆಯಿಂದಾಗಿ ಪಂದ್ಯವನ್ನು 6 ಓವರ್‌ಗಳಿಗೆ ಇಳಿಸಲಾಯಿತು. ಶಿವಮೊಗ್ಗ ತಂಡ 62 ರನ್ ಗಳಿಸಿದರೆ ಬೆಂಗಳೂರು ತಂಡ 9 ಎಸೆತಗಳು ಉಳಿದಿರುವಾಗಲೇ ಗುರಿ ತಲುಪಿತು. ನಿಹಾಲ್ ಉಪ್ಪಾಳ್ (31) ಶಿವಮೊಗ್ಗ ಪರ ಅತ್ಯುತ್ತಮ ಆಟವಾಡಿದರು, ಆದರೆ ಬೆಂಗಳೂರು ಪರ ಶುಭಾಂಗ್ ಹೆಗ್ಡೆ 3 ವಿಕೆಟ್ ಪಡೆದರು.

Maharaja Trophy 2025: 4.3 ಓವರ್​ಗಳಲ್ಲಿ ಪಂದ್ಯ ಗೆದ್ದ ಬೆಂಗಳೂರಿಗೆ ಸತತ 2ನೇ ಜಯ
Bengaluru Blasters
ಪೃಥ್ವಿಶಂಕರ
|

Updated on:Aug 15, 2025 | 7:37 PM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಟ್ರೋಫಿಯ (Maharaja T20 Trophy) 9ನೇ ಪಂದ್ಯ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ನಮ್ಮ ಶಿವಮೊಗ್ಗ (Shivamogga vs Bengaluru Blasters) ತಂಡಗಳ ನಡುವೆ ನಡೆಯಿತು. ಮಳೆ ಪೀಡಿತ ಈ ಪಂದ್ಯವನ್ನು ತಲಾ 6 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನಮ್ಮ ಶಿವಮೊಗ್ಗ ತಂಡ 6 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 62 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಕೇವಲ 2 ವಿಕೆಟ್ ಕಳೆದುಕೊಂಡು ಇನ್ನು 9 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು.

6 ಓವರ್​ಗಳಿಗೆ ಪಂದ್ಯ ಸೀಮಿತ

ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ತಂಡ ಮೂರನೇ ಓವರ್​ನಲ್ಲಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಗೌತಮ್ ಕೇವಲ 1 ರನ್​ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಹಾರ್ದಿಕ್ ರಾಜ್ 3 ರನ್​ಗೆ ಸುಸ್ತಾದರೆ, ಅನುಭವಿ ಅನಿರುದ್ಧ ಜೋಶಿ ಅವರ ಆಟ ಕೂಡ 4 ರನ್​ಗೆ ಅಂತ್ಯವಾಯಿತು.

ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ನಿಹಾಲ್ ಉಪ್ಪಾಳ್ 12 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 31 ರನ್​ಗಳ ಇನ್ನಿಂಗ್ಸ್ ಆಡಿದರು. ಇವರನ್ನು ಹೊರತುಪಡಿಸಿ 8ನೇ ಕ್ರಮಾಂಕದಲ್ಲಿ ಬಂದ ದರ್ಶನ್ 14 ರನ್​ಗಳ ಕಾಣಿಕೆ ನೀಡಿದರು. ಇವರಿಬ್ಬರನ್ನು ಬಿಟ್ಟರೆ ಉಳಿದವರ್ಯಾರು ಎರಡಂಕಿ ಮೊತ್ತ ದಾಟಲಿಲ್ಲ. ಇತ್ತ ಬೆಂಗಳೂರು ಪರ ನಾಯಕ ಶುಭಾಂಗ್ ಹೆಗ್ಡೆ 3 ವಿಕೆಟ್ ಪಡೆದರು.

ಬೆಂಗಳೂರಿಗೆ ಸತತ 2ನೇ ಜಯ

ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಮೊದಲ ವಿಕೆಟ್​ಗೆ 25 ರನ್ ಕಲೆಹಾಕಿತು. ಆರಂಭಿಕ ಚೇತನ್ 16 ರನ್ ಬಾರಿಸಿ ಔಟಾದರೆ, ಮತ್ತೊಬ್ಬ ರೋಹನ್ ಪಾಟೀಲ್ ಅವರ ಇನ್ನಿಂಗ್ಸ್ ಕೂಡ 12 ರನ್​ಗಳಿಗೆ ಅಂಗತ್ಯವಾಯಿತು. ಕೊನೆಯಲ್ಲಿ ಅನುಭವಿ ಮಯಾಂಕ್ ಅಗರ್ವಾಲ್ ಹಾಗೂ ನಾಯಕ ಶುಭಾಂಗ್ ಅಜೇಯ ಇನ್ನಿಂಗ್ಸ್ ಅಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇವರಿಬ್ಬರು ಕ್ರಮವಾಗಿ 18 ಮತ್ತು 14 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಗೆಲುವಿನೊಂದಿಗೆ ಬೆಂಗಳೂರು ತಂಡ ಈ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದರೆ, ನಮ್ಮ ಶಿವಮೊಗ್ಗ ತಂಡ ಇದುವರೆಗೆ ತನ್ನ ಗೆಲುವಿನ ಖಾತೆಯನ್ನು ತೆರೆಯಲು ಕಸರತ್ತು ಪಡೆಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Fri, 15 August 25

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ