AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣರೋಚಕ ಪಂದ್ಯ: ಮಯಾಂಕ್ ಭರ್ಜರಿ ಶತಕ, ರೋಹನ್ ಸ್ಪೋಟಕ ಸೆಂಚುರಿ..!

Maharaja Trophy 2022:

ರಣರೋಚಕ ಪಂದ್ಯ: ಮಯಾಂಕ್ ಭರ್ಜರಿ ಶತಕ, ರೋಹನ್ ಸ್ಪೋಟಕ ಸೆಂಚುರಿ..!
Mayank Agarwal
TV9 Web
| Edited By: |

Updated on: Aug 24, 2022 | 10:25 AM

Share

ಮಹಾರಾಜ ಟಿ20 ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಲ್ಬಾರ್ಗ ಮಿಸ್ಟಿಕ್ಸ್ ತಂಡವನ್ನು ಮಣಿಸಿ ಬೆಂಗಳೂರು ಬ್ಲಾಸ್ಟರ್ಸ್​ ತಂಡವು ಫೈನಲ್​ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮನೀಷ್ ಪಾಂಡೆ ನಾಯಕತ್ವದ ಗುಲ್ಬಾರ್ಗ ಮಿಸ್ಟಿಕ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್​ ಪರ ಎಲ್​ಆರ್​ ಚೇತನ್ ಹಾಗೂ ಮಯಾಂಕ್ ಅಗರ್ವಾಲ್ ಸ್ಪೋಟಕ ಬ್ಯಾಟಿಂಗ್ ನಡೆಸಿದರು.

ಮೊದಲ ವಿಕೆಟ್​ಗೆ 162 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವೇಳೆ 48 ಎಸೆತಗಳಲ್ಲಿ 80 ರನ್ ಬಾರಿಸಿದ್ದ ಚೇತನ್ ವಿದ್ವತ್ ಕಾವೇರಪ್ಪಗೆ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಭರ್ಜರಿ ಇನಿಂಗ್ಸ್​ ಮುಂದುವರೆಸಿದ ಮಯಾಂಕ್ ಅಗರ್ವಾಲ್ 61 ಎಸೆತಗಳಲ್ಲಿ 6 ಸಿಕ್ಸ್​ ಹಾಗೂ 9 ಫೋರ್​ನೊಂದಿಗೆ ಅಜೇಯ 112 ರನ್​ ಬಾರಿಸಿದರು. ಈ ಭರ್ಜರಿ ಶತಕದ ನೆರವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ತಂಡವು 3 ವಿಕೆಟ್ ನಷ್ಟಕ್ಕೆ 227 ರನ್​ ಕಲೆಹಾಕಿತು.

228 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಲ್ಬರ್ಗಾ ಪರ ರೋಹನ್ ಪಾಟೀಲ್ ಭರ್ಜರಿಯಾಗಿ ಬ್ಯಾಟ್​ ಬೀಸಿದ್ದರು. ಬೆಂಗಳೂರು ಬ್ಲಾಸ್ಟರ್ಸ್​ ಬೌಲರುಗಳ ಬೆಂಡೆತ್ತಿದ ಯುವ ಆಟಗಾರ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 42 ಎಸೆತಗಳಲ್ಲಿ ಭರ್ಜರಿ ಶತಕ ಬಾರಿಸಿದರು. ಆದರೆ ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಇದಾಗ್ಯೂ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ್ದ ರೋಹನ್ ಪಾಟೀಲ್ 49 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 10 ಫೋರ್​ನೊಂದಿಗೆ 108 ರನ್​ ಬಾರಿಸಿದ್ದರು. 13 ಎಸೆತಗಳಲ್ಲಿ 45 ರನ್​ಗಳ ಅವಶ್ಯಕತೆಯಿದ್ದ ವೇಳೆ ರೋಹನ್ ಪಾಟೀಲ್ ರನೌಟ್​ಗೆ ಬಲಿಯಾದರು.

ಇತ್ತ ರೋಹನ್ ವಿಕೆಟ್ ಸಿಗುತ್ತಿದ್ದಂತೆ ಇತ್ತ ಬೆಂಗಳೂರು ಬ್ಲಾಸ್ಟರ್ಸ್​ ತಂಡವು ಗೆಲುವನ್ನು ಖಚಿತಪಡಿಸಿಕೊಂಡಿತು. ಅದರಂತೆ 18.2 ಓವರ್​ಗಳಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ತಂಡವನ್ನು 183 ರನ್​ಗಳಿಗೆ ಆಲೌಟ್ ಮಾಡಿ ಬೆಂಗಳೂರು ಬ್ಲಾಸ್ಟರ್ಸ್​ 44 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್​ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ಸೋತಿರುವ ಮನೀಷ್ ಪಾಂಡೆ ನಾಯಕತ್ವದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್