Maharaja Trophy 2024: ಮೈಸೂರಿಗೆ ಸೋಲುಣಿಸಿ ಮತ್ತೆ ಅಗ್ರಸ್ಥಾನಕ್ಕೇರಿದ ಬೆಂಗಳೂರು
Maharaja Trophy 2024: ಮಹಾರಾಜ ಟ್ರೋಫಿಯಲ್ಲಿ ಇಂದು ನಡೆದ 21ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮೈಸೂರು ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಬಲಿಷ್ಠ ತಂಡಗಳ ಈ ಮುಖಾಮುಖಿಯಲ್ಲಿ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿತ್ತು. ಆದರೆ ಆರಂಭದಿಂದಲೂ ಪಂದ್ಯದಲ್ಲಿ ಹಿಡಿತ ಸಾಧಿಸಿದ ಬೆಂಗಳೂರು ತಂಡ, ಮೈಸೂರು ತಂಡವನ್ನು 56 ರನ್ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು.
ಮಹಾರಾಜ ಟ್ರೋಫಿಯಲ್ಲಿ ಇಂದು ನಡೆದ 21ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮೈಸೂರು ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಬಲಿಷ್ಠ ತಂಡಗಳ ಈ ಮುಖಾಮುಖಿಯಲ್ಲಿ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿತ್ತು. ಆದರೆ ಆರಂಭದಿಂದಲೂ ಪಂದ್ಯದಲ್ಲಿ ಹಿಡಿತ ಸಾಧಿಸಿದ ಬೆಂಗಳೂರು ತಂಡ, ಮೈಸೂರು ತಂಡವನ್ನು 56 ರನ್ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು. ಈ ಗೆಲುವಿನೊಂದಿಗೆ ಬೆಂಗಳೂರು ತಂಡ ಮತ್ತೆ ಅಗ್ರಸ್ಥಾನಕ್ಕೇರಿದರೆ, ಮೈಸೂರು ತಂಡ ನಾಲ್ಕನೇ ಸ್ಥಾನದಲ್ಲೇ ಉಳಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮೈಸೂರು ತಂಡ ಪೂರ್ಣ 20 ಓವರ್ಗಳನ್ನು ಆಡಲಾಗದೆ 17.5 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 133 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ದೇಗಾ ನಿಶ್ಚಲ್ ಮೊದಲ ಎಸೆತದಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ನಂತರ ಬಂದ ನಿರಂಜನ್ ಕೂಡ 3 ರನ್ಗಳಿಗೆ ಬ್ಯಾಟ್ ಎತ್ತಿಟ್ಟರು. ಆದರೆ ಆ ಬಳಿಕ ಆರಂಭಿಕ ಚೇತನ್ ಜೊತೆಯಾದ ರಕ್ಷಿತ್ ಅರ್ಧಶತಕದ ಜೊತೆಯಾಟ ಆಡಿದರು. ಈ ವೇಳೆ ರಕ್ಷಿತ್ ಅವರ ಇನ್ನಿಂಗ್ಸ್ 29 ರನ್ಗಳಿಗೆ ಅಂತ್ಯವಾಯಿತು. ಐದನೇ ಕ್ರಮಾಂಕದಲ್ಲಿ ಬಂದ ಸೂರಜ್ ಕೂಡ 16 ಎಸೆತಗಳಲ್ಲಿ 32 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.
ಮೈಸೂರು ವಾರಿಯರ್ಸ್ ವಿರುದ್ಧ ದೊಡ್ಡ ಗೆಲುವನ್ನು ಸಾಧಿಸಿದ ಬೆಂಗಳೂರು ಬ್ಲಾಸ್ಟರ್ಸ್! 🫡🔥#MaharajaTrophyOnStar #StarSportsKannada @maharaja_t20 pic.twitter.com/ubvAFLviXY
— Star Sports Kannada (@StarSportsKan) August 25, 2024
ಆದರೆ ತಂಡದ ಪರ ಆರಂಭದಿಂದಲೂ ಏಕಾಂಗಿ ಹೋರಾಟ ನಡೆಸಿದ ಎಲ್ ಆರ್ ಶರತ್ ಸಿಡಿಲಬ್ಬರದ ಆಟ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 53 ಎಸೆತಗಳನ್ನು ಎದುರಿಸಿದ ಶರತ್ 9 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 88 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಈ ಮೂವರ ಆಟದಿಂದಾಗಿ ಬೆಂಗಳೂರು ತಂಡ 189 ರನ್ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು.
ಈ ಗುರಿ ಬೆನ್ನಟ್ಟಿದ ಮೈಸೂರು ತಂಡಕ್ಕೆ ಮೊದಲ ವಿಕೆಟ್ಗೆ 31 ರನ್ಗಳ ಜೊತೆಯಾಟ ಸಿಕ್ಕಿತು. ಈ ವೇಳೆ ಕಾರ್ತಿಕ್ 17 ಬಾರಿಸಿ ಪೆವಿಲಿಯನ್ ಸೇರಿಕೊಂಡರೆ ಮತ್ತೊಬ್ಬ ಆರಂಭಿಕ ಕಾರ್ತಿಕ್ ಅವರ ಇನ್ನಿಂಗ್ಸ್ ಕೂಡ 26 ರನ್ಗಳಿಗೆ ಅಂತ್ಯವಾಯಿತು. ಈ ಪಂದ್ಯದಲ್ಲೂ ದಯನೀಯವಾಗಿ ವಿಫಲರಾದ ಸಮಿತ್ ದ್ರಾವಿಡ್ 5 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ತಂಡದ ಆಧಾರಸ್ತಂಭವಾದ ನಾಯಕ ಕರುಣ್ ಅವರ ಇನ್ನಿಂಗ್ಸ್ ಕೂಡ 13 ರನ್ ದಾಟಿ ಮುಂದಕ್ಕೆ ಹೋಗಲಿಲ್ಲ. ಇವರನ್ನು ಹೊರತುಪಡಿಸಿ ಹರ್ಷಿತ್ 20 ರನ್ ಬಾರಿಸಿದರೆ, ಸುಚಿತ್ 16 ರನ್ ಸುಮಿತ್ 18 ರನ್ ಕಲೆಹಾಕಲಷ್ಟೇ ಶಕ್ತರಾದರು. ಉಳಿದಂತೆ ತಂಡದ ಪರ ಯಾರಿಂದಲೂ ಗೆಲುವಿನ ಇನ್ನಿಂಗ್ಸ್ ಕಂಡುಬರಲಿಲ್ಲ. ಹೀಗಾಗಿ ತಂಡ 133 ರನ್ಗಳಿಗೆ ಆಲೌಟ್ ಆಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Sun, 25 August 24