Maharaja Trophy 2024: ಭುವನ್ ರಾಜು ಸಿಡಿಲಬ್ಬರ: ಬೆಂಗಳೂರು ಬ್ಲಾಸ್ಟರ್ಸ್​ಗೆ ಭರ್ಜರಿ ಜಯ

Maharaja Trophy 2024: ಮಹಾರಾಜ ಟ್ರೋಫಿಯ ಮೊದಲ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ನೇತೃತ್ವದ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಗೆದ್ದು ಬೀಗಿದ್ದ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಇದೀಗ ಮೈಸೂರು ವಾರಿಯರ್ಸ್ ತಂಡಕ್ಕೆ ಸೋಲುಣಿಸಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Maharaja Trophy 2024: ಭುವನ್ ರಾಜು ಸಿಡಿಲಬ್ಬರ: ಬೆಂಗಳೂರು ಬ್ಲಾಸ್ಟರ್ಸ್​ಗೆ ಭರ್ಜರಿ ಜಯ
Bhuvan Raju
Follow us
ಝಾಹಿರ್ ಯೂಸುಫ್
|

Updated on: Aug 17, 2024 | 8:12 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 4ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. 18 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಯಾಂಕ್ ಅಗರ್ವಾಲ್ ಮೈಸೂರು ವಾರಿಯರ್ಸ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಮೈಸೂರು ವಾರಿಯರ್ಸ್ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು.

ಎಸ್ ಕಾರ್ತಿಕ್ 12 ರನ್​ಗಳಿಸಿ ಔಟಾದರೆ, ಅಜಿತ್ ಕಾರ್ತಿಕ್ 27 ರನ್​ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದ್ದರು. ಇನ್ನು ನಾಯಕ ಕರುಣ್ ನಾಯರ್ 14 ರನ್​ಗಳಿಸಲಷ್ಟೇ ಶಕ್ತರಾದರು. ಆ ಬಳಿಕ ಬಂದ ಸಮಿತ್ ದ್ರಾವಿಡ್ 7 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ಹರ್ಷಿಲ್ ಧರ್ಮನಿ 32 ಎಸೆತಗಳಲ್ಲಿ 50 ರನ್ ಬಾರಿಸಿದರೆ, ಮನೋಜ್ ಭಾಂಡಗೆ 33 ಎಸೆತಗಳಲ್ಲಿ 5 ಫೋರ್ ಹಾಗೂ 3 ಸಿಕ್ಸ್​ನೊಂದಿಗೆ 58 ರನ್ ಚಚ್ಚಿದರು. ಈ ಅರ್ಧಶತಕಗಳ ನೆರವಿನಿಂದ ಮೈಸೂರು ವಾರಿಯರ್ಸ್ ತಂಡವು 18 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು.

183 ರನ್​ಗಳ ಕಠಿಣ ಗುರಿ:

18 ಓವರ್​ಗಳಲ್ಲಿ 183 ರನ್​ಗಳ ಕಠಿಣ ಗುರಿ ಪಡೆದ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಯಾಂಕ್ ಅಗರ್ವಾಲ್ ಕೇವಲ 1 ರನ್​ಗಳಿಸಿ ಕಾರ್ತಿಕ್​ ಸಿಎಗೆ ವಿಕೆಟ್ ಒಪ್ಪಿಸಿದ್ದರು. ಮತ್ತೊಂದೆಡೆ ಎಲ್​ಆರ್ ಚೇತನ್ 25 ಎಸೆತಗಳಲ್ಲಿ 33 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ದಾಂಡಿಗ ಭುವನ್ ರಾಜು ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಭುವನ್ ಮೈಸೂರು ವಾರಿಯರ್ಸ್ ಬೌಲರ್​ಗಳ ಬೆಂಡೆತ್ತಿದರು.

ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ಭುವನ್ ರಾಜು 24 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 51 ರನ್ ಚಚ್ಚಿದರು. ಈ ಹಂತದಲ್ಲಿ ರನ್ ಕದಿಯುವ ಯತ್ನದಲ್ಲಿ ರನೌಟ್ ಆದರು. ಇನ್ನು ಆ ಬಳಿಕ ಬಂದ ಶುಭಾಂಗ್ ಹೆಗ್ಡೆ ಅಜೇಯ 27 ರನ್ ಬಾರಿಸಿದರೆ, ಸೂರಜ್ ಅಹುಜಾ 39 ರನ್​ಗಳ ಕೊಡುಗೆ ನೀಡಿದರು.

ಈ ಮೂಲಕ ಬೆಂಗಳೂರು ಬ್ಲಾಸ್ಟರ್ಸ್ ತಂಡವು 17.1 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಬೆಂಗಳೂರು ಬ್ಲಾಸ್ಟರ್ಸ್ ಪ್ಲೇಯಿಂಗ್ 11: ಎಲ್​ಆರ್​ ಚೇತನ್ , ಮಯಾಂಕ್ ಅಗರ್ವಾಲ್ (ನಾಯಕ) , ಭುವನ್ ರಾಜು , ಸೂರಜ್ ಅಹುಜಾ (ವಿಕೆಟ್ ಕೀಪರ್) , ಅನಿರುದ್ಧ್ ಜೋಶಿ , ಶುಭಾಂಗ್ ಹೆಗ್ಡೆ , ಕ್ರಾಂತಿ ಕುಮಾರ್ , ಆದಿತ್ಯ ಗೋಯಲ್ , ನವೀನ್, ಮೊಹ್ಸಿನ್ ಖಾನ್ , ಲವಿಶ್ ಕೌಶಲ್.

ಇದನ್ನೂ ಓದಿ: ICC Rankings: ಐಸಿಸಿ ರ‍್ಯಾಕಿಂಗ್ ಪ್ರಕಟ: ಟಾಪ್-10 ನಲ್ಲಿ 6 ಭಾರತೀಯರು

ಮೈಸೂರು ವಾರಿಯರ್ಸ್ ಪ್ಲೇಯಿಂಗ್ 11: ಕೋದಂಡ ಅಜಿತ್ ಕಾರ್ತಿಕ್ , ಎಸ್​ ಕಾರ್ತಿಕ್ , ಕರುಣ್ ನಾಯರ್ (ನಾಯಕ) , ಸಮಿತ್ ದ್ರಾವಿಡ್ , ಹರ್ಷಿಲ್ ಧರ್ಮನಿ , ಸುಮಿತ್ ಕುಮಾರ್ ( ವಿಕೆಟ್ ಕೀಪರ್) , ಜಗದೀಶ ಸುಚಿತ್ , ಕೃಷ್ಣಪ್ಪ ಗೌತಮ್ , ಮನೋಜ್ ಭಾಂಡಗೆ , ವಿದ್ಯಾಧರ್ ಪಾಟೀಲ್ , ಗೌತಮ್ ಮಿಶ್ರಾ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ