AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಮೈಸೂರು ವಾರಿಯರ್ಸ್​ಗೆ ಶಿವಮೊಗ್ಗ ಲಯನ್ಸ್ ಸವಾಲು

Mysore Warriors vs Shivamogga Lions: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (KSCA) ಆಯೋಜಿಸುತ್ತಿರುವ ಮಹಾರಾಜ ಟ್ರೋಫಿಯ ಇಂದಿನ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ ಮೈಸೂರು ವಾರಿಯರ್ಸ್ ತಂಡವು ನಿಹಾಲ್ ಉಳ್ಳಾಲ್ ನೇತೃತ್ವದ ಶಿವಮೊಗ್ಗ ಲಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಗೆದ್ದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

Maharaja Trophy 2024: ಮೈಸೂರು ವಾರಿಯರ್ಸ್​ಗೆ ಶಿವಮೊಗ್ಗ ಲಯನ್ಸ್ ಸವಾಲು
Mysore Warriors vs Shivamogga Lions
ಝಾಹಿರ್ ಯೂಸುಫ್
|

Updated on: Aug 22, 2024 | 10:19 AM

Share

ಮಹಾರಾಜ ಟ್ರೋಫಿ ಟಿ20 ಟೂರ್ನಿಯ 15ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಶಿವಮೊಗ್ಗ ಲಯನ್ಸ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈವರೆಗೆ ಆಡಿದ 5 ಪಂದ್ಯಗಳಲ್ಲೂ ಶಿವಮೊಗ್ಗ ತಂಡ ಸೋಲನುಭವಿಸಿದೆ. ಹೀಗಾಗಿ ಇಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ನಿಹಾಲ್ ಉಳ್ಳಾಲ್ ನೇತೃತ್ವದ ಶಿವಮೊಗ್ಗ ಪಡೆ.

ಮತ್ತೊಂದೆಡೆ ಭರ್ಜರಿ ಪ್ರದರ್ಶನದೊಂದಿಗೆ ಮಿಂಚುತ್ತಿರುವ ಮೈಸೂರು ವಾರಿಯರ್ಸ್ ತಂಡವು 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಒಂದು ವೇಳೆ ಇಂದಿನ ಮ್ಯಾಚ್​ನಲ್ಲಿ ಮೈಸೂರು ವಾರಿಯರ್ಸ್ ಗೆದ್ದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ. ಹೀಗಾಗಿ ಕರುಣ್ ನಾಯರ್ ಪಡೆಯಿಂದ ಇಂದು ಸಹ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಎಷ್ಟು ಗಂಟೆಗೆ ಪಂದ್ಯ ಶುರು?

ಮೈಸೂರು ವಾರಿಯರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ನಡುವಣ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಏಕೆಂದರೆ ಇಂದು ಎರಡು ಪಂದ್ಯಗಳಿದ್ದು, ಮೊದಲ ಪಂದ್ಯದಲ್ಲಿ ಮೈಸೂರು-ಶಿವಮೊಗ್ಗ ಮುಖಾಮುಖಿಯಾದರೆ, ಸಂಜೆ 7 ಗಂಟೆಯಿಂದ ಆರಂಭವಾಗಲಿರುವ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಂಗಳೂರು ಡ್ರಾಗನ್ಸ್ ತಂಡಗಳು ಸೆಣಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಮಹಾರಾಜ ಟ್ರೋಫಿ 2024ರ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಕನ್ನಡ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಫ್ಯಾನ್ ಕೋಡ್ ಆ್ಯಪ್​ನಲ್ಲೂ ಈ ಪಂದ್ಯಗಳನ್ನು ವೀಕ್ಷಿಸಬಹುದು.

ಉಭಯ ತಂಡಗಳು:

ಶಿವಮೊಗ್ಗ ಲಯನ್ಸ್ ತಂಡ: ಬಿ. ಮೋಹಿತ್, ನಿಹಾಲ್ ಉಳ್ಳಾಲ್ (ನಾಯಕ), ರೋಹಿತ್ ಕೆ, ಹಾರ್ದಿಕ್ ರಾಜ್, ಧ್ರುವ ಪ್ರಭಾಕರ್, ಅಭಿನವ್ ಮನೋಹರ್, ಎಸ್ ಶಿವರಾಜ್, ಅವಿನಾಶ್ ಡಿ, ಆದಿತ್ಯ ಮಣಿ, ಪ್ರದೀಪ್ ಟಿ, ವಾಸುಕಿ ಕೌಶಿಕ್, ಎಚ್ ಎಸ್ ಶರತ್, ಭರತ್ ಧುರಿ, ಆನಂದ್ ದೊಡ್ಡಮನಿ , ರಾಜವೀರ್ ವಾಧ್ವಾ, ರೋಹನ್ ನವೀನ್, ಡಿ ಅಶೋಕ್, ಧೀರಜ್ ಮೋಹನ್, ಆದಿತ್ಯ ವಿಶ್ವ ಕರ್ಮ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಮೈಸೂರು ವಾರಿಯರ್ಸ್ ತಂಡ: ಕೋದಂಡ ಅಜಿತ್ ಕಾರ್ತಿಕ್, ಎಸ್‌ಯು ಕಾರ್ತಿಕ್, ಕರುಣ್ ನಾಯರ್ (ನಾಯಕ), ಸಮಿತ್ ದ್ರಾವಿಡ್, ಸುಮಿತ್ ಕುಮಾರ್, ಮನೋಜ್ ಭಾಂಡಗೆ, ಹರ್ಷಿಲ್ ಧರ್ಮಾನಿ, ಜಗದೀಶ ಸುಚಿತ್, ಕೃಷ್ಣಪ್ಪ ಗೌತಮ್, ವಿದ್ಯಾಧರ್ ಪಾಟೀಲ್, ಧನುಷ್ ಗೌಡ, ದೀಪಕ್ ದೇವಾಡಿಗ, ಸ್ಮಯನ್ ಶ್ರೀವಾಸ್ತವ, ಇಜೆ ಜಾಸ್ಪರ್, ಗೌತಮ್ ಮಿಶ್ರಾ, ಕಿಶನ್ ಬೇಡರೆ, ಮುರಳೀಧರ ವೆಂಕಟೇಶ್, ಪ್ರಸಿದ್ಧ್ ಕೃಷ್ಣ, ಸರ್ಫರಾಝ್ ಅಶ್ರಫ್.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ