AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2022: ಏಷ್ಯಾಕಪ್​ ತಂಡದಲ್ಲಿಲ್ಲ ಸ್ಥಾನ: ಟಿ20 ಕ್ರಿಕೆಟ್​ನಲ್ಲಿ ಕನ್ನಡಿಗನ ಸಿಡಿಲಬ್ಬರ

Maharaja Trophy KSCA T20 2022: ಬೆಂಗಳೂರು ಬ್ಲಾಸ್ಟರ್ಸ್​ ಪರ ರೋನಿತ್ ಮೋರೆ 4 ವಿಕೆಟ್ ಕಬಳಿಸಿದರೆ, ಎಲ್ ಕುಮಾರ್ ಹಾಗೂ ರಿಷಿ ಬೋಪಣ್ಣ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

Maharaja Trophy 2022: ಏಷ್ಯಾಕಪ್​ ತಂಡದಲ್ಲಿಲ್ಲ ಸ್ಥಾನ: ಟಿ20 ಕ್ರಿಕೆಟ್​ನಲ್ಲಿ ಕನ್ನಡಿಗನ ಸಿಡಿಲಬ್ಬರ
Mayank Agarwal
TV9 Web
| Edited By: |

Updated on: Aug 09, 2022 | 2:30 PM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿಯಲ್ಲಿ (Maharaja Trophy 2022) ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal )ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡದ ನಾಯಕ ಮನೀಷ್ ಪಾಂಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಬೆಂಗಳೂರು ಬ್ಲಾಸ್ಟರ್ಸ್ ಪರ ಇನಿಂಗ್ಸ್ ಆರಂಭಿಸಿದ ಮಯಾಂಕ್ ಹಾಗೂ ಆರ್​ ಚೇತನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 61 ರನ್​ಗಳ ಜೊತೆಯಾಟವಾಡುವ ಮೂಲಕ ಈ ಜೋಡಿಯು ಬೆಂಗಳೂರು ಬ್ಲಾಸ್ಟರ್ಸ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು.

ಈ ಹಂತದಲ್ಲಿ 25 ರನ್​ಗಳಿಸಿ ಚೇತನ್ ಔಟಾದರು. ಆದರೆ ಮತ್ತೊಂದೆಡೆ ನಾಯಕನ ಆಟ ಪ್ರದರ್ಶಿಸಿದ ಮಯಾಂಕ್ ಅಗರ್ವಾಲ್ ಸ್ಪೋಟಕ ಇನಿಂಗ್ಸ್ ಆಡಿದರು. ಪರಿಣಾಮ ಕೇವಲ 25 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 52 ರನ್​ ಚಚ್ಚಿದರು. ಅರ್ಧಶತಕದ ಬೆನ್ನಲ್ಲೇ ರನೌಟ್ ಆಗುವ ಮೂಲಕ ಮಯಾಂಕ್ ಕೂಡ ನಿರ್ಗಮಿಸಿದರು. ಮತ್ತೊಂದೆಡೆ ಅನೀಶ್ (44) ಹಾಗೂ ಕ್ರಾಂತಿ ಕುಮಾರ್ (22) ಅವರ ಉತ್ತಮ ಕಾಣಿಕೆಯೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್​ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 189 ರನ್​ ಕಲೆಹಾಕಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಗುಲ್ಬರ್ಗಾ ಮಿಸ್ಟಿಕ್ಸ್ ಪರ ದೇವದತ್ ಪಡಿಕ್ಕಲ್ (18), ಶ್ರೀಜಿತ್ (25) ಹಾಗೂ ಮನೋಜ್ ಭಂಡಗೆ (35) ರನ್​ಗಳಿಸಿದ್ದು ಬಿಟ್ಟರೆ ಉಳಿದವರಿಂದ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19.1 ಓವರ್​ಗಳಲ್ಲಿ ಗುಲ್ಬಾರ್ಗ ತಂಡವು 135 ರನ್​ಗಳಿಸಿ ಸರ್ವಪತನ ಕಂಡಿತು. ಇದರೊಂದಿಗೆ ಮಯಾಂಕ್ ಅಗರ್ವಾಲ್ ಪಡೆಯು 54 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಬೆಂಗಳೂರು ಬ್ಲಾಸ್ಟರ್ಸ್​ ಪರ ರೋನಿತ್ ಮೋರೆ 4 ವಿಕೆಟ್ ಕಬಳಿಸಿದರೆ, ಎಲ್ ಕುಮಾರ್ ಹಾಗೂ ರಿಷಿ ಬೋಪಣ್ಣ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದ ಮಯಾಂಕ್ ಅಗರ್ವಾಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ವಿಶೇಷ ಎಂದರೆ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಮಯಾಂಕ್ ಅಗರ್ವಾಲ್ ಹಲವು ಬಾರಿ ಟೀಮ್ ಇಂಡಿಯಾ ಟಿ20 ತಂಡದಿಂದ ಅವಕಾಶ ವಂಚಿತರಾಗಿದ್ದಾರೆ. ಇದೀಗ ಏಷ್ಯಾಕಪ್ ತಂಡದ ಆಯ್ಕೆಯ ಬೆನ್ನಲ್ಲೇ ದೇಶೀಯ ಅಂಗಳದಲ್ಲಿ ಅಬ್ಬರಿಸುವ ಮೂಲಕ ಮಯಾಂಕ್ ಅಗರ್ವಾಲ್ ಎಲ್ಲರ ಗಮನ ಸೆಳೆದಿರುವುದು ವಿಶೇಷ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ