ಮಹಾರಾಜ ಟ್ರೋಫಿ 2023: ಬೆಂಗಳೂರು ಬ್ಲಾಸ್ಟರ್ಸ್​ ವಿರುದ್ಧ ಗುಲ್ಬರ್ಗ ಮಿಸ್ಟಿಕ್ಸ್ ತಂಡಕ್ಕೆ ಭರ್ಜರಿ ಜಯ

Maharaja Trophy KSCA T20 2023: ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್​ 2 ಹಾಗೂ ಸ್ಟಾರ್ ಸ್ಪೋರ್ಟ್ಸ್​ 1 ಕನ್ನಡ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಫ್ಯಾನ್ ಕೋಡ್ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದಾಗಿದೆ.

ಮಹಾರಾಜ ಟ್ರೋಫಿ 2023: ಬೆಂಗಳೂರು ಬ್ಲಾಸ್ಟರ್ಸ್​ ವಿರುದ್ಧ ಗುಲ್ಬರ್ಗ ಮಿಸ್ಟಿಕ್ಸ್ ತಂಡಕ್ಕೆ ಭರ್ಜರಿ ಜಯ
Maharaja Trophy 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 13, 2023 | 5:02 PM

Maharaja Trophy T20 2023: ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗ ಮಿಸ್ಟಿಕ್ಸ್ ತಂಡದ ನಾಯಕ ವಿಜಯಕುಮಾರ್ ವೈಶಾಕ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ (4) ಅಭಿಲಾಷ್ ಶೆಟ್ಟಿ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು.

ಇದರ ಬೆನ್ನಲ್ಲೇ ಡಿ.ನಿಶ್ಚಲ್ ವಿಕೆಟ್ ಪಡೆದು ಅಭಿಲಾಷ್ ಗುಲ್ಬರ್ಗ ತಂಡಕ್ಕೆ 2ನೇ ಯಶಸ್ಸು ತಂದುಕೊಟ್ಟರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೆಶ್ವತ್ ಆಚಾರ್ಯ 29 ರನ್​ಗಳಿಸಿದರೆ, ಪವನ್ ದೇಶಪಾಂಡೆ ಇನಿಂಗ್ಸ್​ 14 ರನ್​ಗಳೊಂದಿಗೆ ಕೊನೆಗೊಂಡಿತು.

ಆದರೆ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಸೂರಜ್ ಅಹುಜಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ತಂಡಕ್ಕೆ ಆಸರೆಯಾದ ಸೂರಜ್ 44 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 62 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 137 ರನ್​ ಕಲೆಹಾಕಿತು. ಗುಲ್ಬರ್ಗ ಮಿಸ್ಟಿಕ್ಸ್ ಪರ 4 ಓವರ್​ಗಳಲ್ಲಿ 25 ರನ್ ನೀಡಿ 3 ವಿಕೆಟ್ ಕಬಳಿಸಿದ ಶುಭಾಂಗ್ ಹೆಗ್ಡೆ ಯಶಸ್ವಿ ಬೌಲರ್ ಎನಿಸಿಕೊಂಡರು.

138 ರನ್​ಗಳ ಗುರಿ ಬೆನ್ನತ್ತಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡಕ್ಕೆ ಎಲ್​.ಆರ್ ಚೇತನ್ (36) ಹಾಗೂ ಆದರ್ಶ್ ಪ್ರಜ್ವಲ್ (31) ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 63 ರನ್​ಗಳ ಜೊತೆಯಾಟವಾಡಿದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಕೊನೆಗೂ ಶುಭಾಂಗ್ ಹೆಗ್ಡೆ ಯಶಸ್ವಿಯಾದರು.

ಆ ಬಳಿಕ ಬಂದ ಅನೀಶ್ ಕೆ.ವಿ ಅಜೇಯ 29 ರನ್ ಬಾರಿಸಿದರೆ, ಅಮಿತ್ ವರ್ಮಾ 28 ರನ್​ಗಳ ಕೊಡುಗೆ ನೀಡಿದರು. ಪರಿಣಾಮ 17.3 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಬೆಂಗಳೂರು ಬ್ಲಾಸ್ಟರ್ಸ್​ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇಗಾ ನಿಶ್ಚಲ್ , ಜೆಸ್ವತ್ ಆಚಾರ್ಯ , ಪವನ್ ದೇಶಪಾಂಡೆ , ಸೂರಜ್ ಅಹುಜಾ (ವಿಕೆಟ್ ಕೀಪರ್) , ಶುಭಾಂಗ್ ಹೆಗ್ಡೆ , ರಿಷಿ ಬೋಪಣ್ಣ , ಪ್ರದೀಪ್ ಟಿ , ಲೋಚನ್ ಅಪ್ಪಣ್ಣ , ಎಲ್ ಆರ್ ಕುಮಾರ್ , ಗೌರವ್ , ಸರ್ಫರಾಝ್ ಅಶ್ರಫ್.

ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಗುಲ್ಬರ್ಗ ಮಿಸ್ಟಿಕ್ಸ್​ ಪ್ಲೇಯಿಂಗ್ 11: ವಿಜಯ್‌ಕುಮಾರ್ ವೈಶಾಕ್ (ನಾಯಕ) , ಆದರ್ಶ್ ಪ್ರಜ್ವಲ್ (ವಿಕೆಟ್ ಕೀಪರ್) , ಎಲ್​ಆರ್​ ಚೇತನ್ , ಸ್ಮರಣ್ ಆರ್​, ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ , ಅವಿನಾಶ್. ಡಿ , ಶರಣ್ ಗೌಡ , ಕೆ.ಪಿ ಅಪ್ಪಣ್ಣ , ಅನೀಶ್ ಕೆ.ವಿ , ಅಭಿಲಾಷ್ ಶೆಟ್ಟಿ , ಅಮಿತ್ ವರ್ಮಾ , ಸೌರಭ್ ಮುತ್ತೂರ್.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್​ 2 ಹಾಗೂ ಸ್ಟಾರ್ ಸ್ಪೋರ್ಟ್ಸ್​ 1 ಕನ್ನಡ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಫ್ಯಾನ್ ಕೋಡ್ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದಾಗಿದೆ.

Published On - 5:00 pm, Sun, 13 August 23

ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ
ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ
ಚಿಕ್ಕಂದಿನಲ್ಲಿ ಅಪ್ಪನ ಕಳೆದುಕೊಂಡಿದ್ದ ವಿಕ್ರಂಗೌಡ ತಂಗಿಯ ಮದುವೆ ಮಾಡಿಸಿದ್ದ
ಚಿಕ್ಕಂದಿನಲ್ಲಿ ಅಪ್ಪನ ಕಳೆದುಕೊಂಡಿದ್ದ ವಿಕ್ರಂಗೌಡ ತಂಗಿಯ ಮದುವೆ ಮಾಡಿಸಿದ್ದ
ಶೋರೂಮಲ್ಲಿದ್ದ ಬ್ಯಾಟರಿಗಳು ಸ್ಪೋಟಗೊಂಡ ಕಾರಣ ಹೆಚ್ಚಿದ ಬೆಂಕಿ ಪ್ರಮಾಣ
ಶೋರೂಮಲ್ಲಿದ್ದ ಬ್ಯಾಟರಿಗಳು ಸ್ಪೋಟಗೊಂಡ ಕಾರಣ ಹೆಚ್ಚಿದ ಬೆಂಕಿ ಪ್ರಮಾಣ
ರಾಯಚೂರಿನಲ್ಲಿ ಮಧ್ಯರಾತ್ರಿ ಜೆಸಿಬಿ ಘರ್ಜನೆ: ಶಿವ, ಗಣೇಶನ ಗುಡಿ ತೆರವು
ರಾಯಚೂರಿನಲ್ಲಿ ಮಧ್ಯರಾತ್ರಿ ಜೆಸಿಬಿ ಘರ್ಜನೆ: ಶಿವ, ಗಣೇಶನ ಗುಡಿ ತೆರವು
ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು