Maharaja Trophy 2025: ದಿನಕ್ಕೆರಡು ಪಂದ್ಯಗಳು; ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್ನಲ್ಲಿ ನೇರಪ್ರಸಾರ?
Maharaja Trophy 2025: ಆಗಸ್ಟ್ 11 ರಿಂದ ಮೈಸೂರಿನಲ್ಲಿ ನಡೆಯಲಿರುವ ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಲೀಗ್‌ನಲ್ಲಿ ಕರ್ನಾಟಕದ ಅನೇಕ ಪ್ರಸಿದ್ಧ ಆಟಗಾರರು ಭಾಗವಹಿಸಲಿದ್ದಾರೆ. 33 ಪಂದ್ಯಗಳ ಈ ಟೂರ್ನಿಯನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು FanCode ನಲ್ಲಿ ನೇರ ಪ್ರಸಾರ ಮಾಡಲಾಗುವುದು. ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾವಳಿಯನ್ನು ಅಭಿಮಾನಿಗಳು ಕ್ರೀಡಾಂಗಣದಲ್ಲಿ ವೀಕ್ಷಿಸಲು ಸಾಧ್ಯವಿಲ್ಲ.

ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿ (Maharaja Trophy) ಇದೇ ಆಗಸ್ಟ್ 11 ರಿಂದ ಅಂದರೆ ನಾಳೆಯಿಂದ ಆರಂಭವಾಗಲಿದೆ. ಕಳೆದ ಬಾರಿ ಈ ಪಂದ್ಯಾವಳಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಆದರೆ ಈ ಬಾರಿಯ ಪಂದ್ಯಾವಳಿ ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಗೊಂಡಿದೆ. ಆದಾಗ್ಯೂ ಇಡೀ ಟೂರ್ನಿ ಅಭಿಮಾನಿಗಳಿಲ್ಲದೆ ನಡೆಯುತ್ತಿರುವುದು ಆಯೋಜಕರಿಗೆ ದೊಡ್ಡ ತಲೆನೋವಾಗಿದೆ. ಅಂದರೆ ಮಹಾರಾಜ ಟ್ರೋಫಿಯನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ. ಅಂದರೆ ಈ ಟೂರ್ನಿಯ ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಎಂಟ್ರಿ ಇರುವುದಿಲ್ಲ.
ಆದಾಗ್ಯೂ ಈ ಪಂದ್ಯಾವಳಿಯನ್ನು ಟಿವಿಯಲ್ಲಿ ನೇರವಾಗಿ ವೀಕ್ಷಿಸಬಹುದಾಗಿದ್ದು, ಆಗಸ್ಟ್ 25 ರಂದು ನಡೆಯಲ್ಲಿರುವ ಫೈನಲ್ ಪಂದ್ಯದವರೆಗೆ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ಸಿಗಲಿದೆ. ಇನ್ನು ಈ ಟಿ20 ಲೀಗ್‌ನಲ್ಲಿ ಕರ್ನಾಟಕದ ಅನೇಕ ಸ್ಟಾರ್ ಆಟಗಾರರು ಆಡಲಿದ್ದಾರೆ. ಇವರಲ್ಲಿ ಹಾಲಿ ಚಾಂಪಿಯನ್ ಮೈಸೂರು ವಾರಿಯರ್ಸ್ ತಂಡದ ನಾಯಕ ಕರುಣ್ ನಾಯರ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್, ಪ್ರಸಿದ್ಧ್ ಕೃಷ್ಣ, ಮನೀಶ್ ಪಾಂಡೆ, ದೇವದತ್ ಪಡಿಕ್ಕಲ್ ಸೇರಿದಂತೆ ಹಲವು ಆಟಗಾರರು ಕಣಕ್ಕಿಳಿಯಲಿದ್ದಾರೆ.
4ನೇ ಸೀಸನ್‌ನಲ್ಲಿ ಒಟ್ಟು 33 ಪಂದ್ಯಗಳು
ಆಗಸ್ಟ್ 11 ರಿಂದ ಪ್ರಾರಂಭವಾಗುವ ಮಹಾರಾಜ ಟ್ರೋಫಿಯ ನಾಲ್ಕನೇ ಆವೃತ್ತಿಯ ಲೀಗ್ ಹಂತದಲ್ಲಿ ಒಟ್ಟು 30 ಪಂದ್ಯಗಳು ನಡೆಯಲಿವೆ. ಇದರ ನಂತರ, ಆಗಸ್ಟ್ 26 ರಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸುತ್ತದೆ. ಅದೇ ಸಮಯದಲ್ಲಿ, ಆಗಸ್ಟ್ 26 ರಂದು ಮೂರನೇ ಮತ್ತು ನಾಲ್ಕನೇ ಶ್ರೇಯಾಂಕಿತ ತಂಡಗಳ ನಡುವೆ ಎಲಿಮಿನೇಟರ್ ಪಂದ್ಯವೂ ನಡೆಯಲಿದ್ದು, ಇದರಲ್ಲಿ ವಿಜೇತ ತಂಡವು ಕ್ವಾಲಿಫೈಯರ್ -1 ಪಂದ್ಯದಲ್ಲಿ ಸೋತ ತಂಡದ ವಿರುದ್ಧ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆಡಬೇಕಾಗುತ್ತದೆ. ನಾಲ್ಕನೇ ಸೀಸನ್‌ನ ಪ್ರಶಸ್ತಿ ಪಂದ್ಯ ಆಗಸ್ಟ್ 28 ರಂದು ನಡೆಯಲಿದೆ. ಈ ಬಾರಿ ಮಹಾರಾಜ ಟ್ರೋಫಿಯ ಎಲ್ಲಾ ಪಂದ್ಯಗಳು ಮೈಸೂರಿನಲ್ಲಿರುವ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯಲಿವೆ.
ಕಾಲ್ತುಳಿತ ದುರಂತ: ಮಹಾರಾಜ ಟಿ20 ಲೀಗ್ ಬೆಂಗಳೂರಿನಿಂದ ಮೈಸೂರಿಗೆ ಶಿಫ್ಟ್
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿ ಯಾವಾಗ ಆರಂಭವಾಗಲಿದೆ?
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿ ಆಗಸ್ಟ್ 11 ರಿಂದ ಆರಂಭವಾಗಲಿದೆ.
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿಯ ಎಲ್ಲಾ ಪಂದ್ಯಗಳು ಎಲ್ಲಿ ನಡೆಯಲಿವೆ?
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿಯ ಎಲ್ಲಾ ಪಂದ್ಯಗಳು ಮೈಸೂರಿನಲ್ಲಿರುವ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯಲಿವೆ.
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿಯ ಮೊದಲ ಪಂದ್ಯ ಯಾವೆರಡು ತಂಡಗಳ ನಡುವೆ ನಡೆಯಲಿದೆ?
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿಯ ಮೊದಲ ಪಂದ್ಯ ಗುಲ್ಬರ್ಗ ಮಿಸ್ಟಿಕ್ಸ್ ಮತ್ತು ಮಂಗಳೂರು ಡ್ರಾಗನ್ಸ್ ನಡುವೆ ನಡೆಯಲಿದೆ.
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿಯ ಪಂದ್ಯಗಳು ಎಷ್ಟು ಗಂಟೆಗೆ ಆರಂಭ?
ಮಹಾರಾಜ ಟ್ರೋಫಿಯ ಲೀಗ್ ಹಂತದಲ್ಲಿ ಪ್ರತಿ ದಿನ 2 ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಮಧ್ಯಾಹ್ನ 3.15 ಕ್ಕೆ ಆರಂಭವಾದರೆ, ಎರಡನೇ ಪಂದ್ಯ ರಾತ್ರಿ 7.15 ಕ್ಕೆ ಆರಂಭವಾಗಲಿದೆ.
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿ ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ನಾಲ್ಕನೇ ಆವೃತ್ತಿಯ ಮಹಾರಾಜ ಟ್ರೋಫಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಅದೇ ಸಮಯದಲ್ಲಿ, ಪಂದ್ಯಗಳ ನೇರ ಪ್ರಸಾರವನ್ನು ಫ್ಯಾನ್‌ಕೋಡ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಎರಡರಲ್ಲೂ ಮಾಡಲಾಗುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
