AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja T20 Trophy: ಬರೋಬ್ಬರಿ 412 ರನ್; ಮೈಸೂರು ಮಣಿಸಿ ಕೊನೆಯ ಎಸೆತದಲ್ಲಿ ಗೆದ್ದ ಗುಲ್ಬರ್ಗಾ

Maharaja T20 Trophy: ಮೈಸೂರಿನಲ್ಲಿ ನಡೆದ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳ ನಡುವಿನ ಪಂದ್ಯ ಅತ್ಯಂತ ರೋಮಾಂಚಕವಾಗಿತ್ತು. ಮೈಸೂರು ತಂಡ 210 ರನ್ ಗಳಿಸಿತು. ಆದರೆ ಗುಲ್ಬರ್ಗಾ ತಂಡ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿ ರೋಮಾಂಚಕ ಗೆಲುವು ಸಾಧಿಸಿತು. ಪ್ರವೀಣ್ ದುಬೆ ಅವರ ಅದ್ಭುತ ಅರ್ಧಶತಕ ಈ ಗೆಲುವಿಗೆ ಪ್ರಮುಖ ಕಾರಣ.

Maharaja T20 Trophy: ಬರೋಬ್ಬರಿ 412 ರನ್; ಮೈಸೂರು ಮಣಿಸಿ ಕೊನೆಯ ಎಸೆತದಲ್ಲಿ ಗೆದ್ದ ಗುಲ್ಬರ್ಗಾ
Gulbarga Mystics
ಪೃಥ್ವಿಶಂಕರ
|

Updated on:Aug 20, 2025 | 8:43 PM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಟ್ರೋಫಿಯ (Maharajah T20 Trophy) 19ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ (Mysuru-W vs Gulbarga Mystics) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ತಂಡ 20 ಓವರ್​ಗಳಲ್ಲಿ ಬರೋಬ್ಬರಿ 210 ರನ್ ಕಲೆಹಾಕಿತು. ಈ ಬೃಹತ್ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಪ್ರವೀಣ್ ದುಬೆ ಕೇವಲ 19 ಎಸೆತಗಳಲ್ಲಿ 7 ಸಿಕ್ಸರ್‌ಗಳ ಸಹಿತ ಅಜೇಯ 53 ರನ್ ಬಾರಿಸಿದರು. ಈ ಗೆಲುವಿನೊಂದಿಗೆ ಗುಲ್ಬರ್ಗಾ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಮೈಸೂರು ತಂಡ ನಾಲ್ಕನೇ ಸ್ಥಾನದಲ್ಲಿದೆ.

ಮೈಸೂರಿಗೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ತಂಡಕ್ಕೆ ಮೊದಲ ಓವರ್​ನಲ್ಲೇ ಆಘಾತ ಎದುರಾಯಿತು. ಆರಂಭಿಕ ಕಾರ್ತಿಕ್ 1 ರನ್​ಗೆ ವಿಕೆಟ್ ಒಪ್ಪಿಸಿದರು. ಆ ನಂತರ ಮತ್ತೊಬ್ಬ ಆರಂಭಿಕ ಅಜಿತ್ ಕಾರ್ತಿಕ್ ಕೂಡ 17 ರನ್ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು. ಮೂರನೇ ವಿಕೆಟ್ ಕೂಡ 37 ರನ್​ಗಳಿಗೆ ಪತವಾಯಿತು. ಆದರೆ ಇಲ್ಲಿಂದ ಜೊತೆಯಾದ ವೆಂಕಟೇಶ್ ಹಾಗೂ ನಾಯಕ ಮನೀಶ್ ಪಾಂಡೆ ತಂಡವನ್ನು ನೂರು ರನ್​ಗಳ ಗಡಿ ದಾಟಿಸಿದಲ್ಲದೆ ಅರ್ಧಶತಕದ ಜೊತೆಯಾಟವನ್ನು ಪೂರ್ಣಗೊಳಿಸಿದರು.

ವೆಂಕಟೇಶ್ ಅಜೇಯ 93 ರನ್

ಆದಾಗ್ಯೂ ನಾಯಕ ಮನೀಶ್ ಇನ್ನಿಂಗ್ಸ್ 29 ರನ್​ಗಳಿಗೆ ಅಂತ್ಯವಾಯಿತು. 6ನೇ ಕ್ರಮಾಂಕದಲ್ಲಿ ಬಂದ ಪರಂತಪ್, ವೆಂಕಟೇಶ್ ಜೊತೆಗೂಡಿ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರು ತಂಡವನ್ನು 200 ರನ್​ಗಳ ಗಡಿ ದಾಟಿಸಿದರು. ಈ ವೇಲೆ ಪರಂತಪ್ 24 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 48 ರನ್ ಬಾರಿಸಿ ಔಟಾದರೆ, ಅಜೇಯರಾಗಿ ಉಳಿದ ವೆಂಕಟೇಶ್ 53 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 93 ರನ್​ಗಳ ಇನ್ನಿಂಗ್ಸ್ ಆಡಿದರು.

ಲವ್ನಿತ್ ಸ್ಫೋಟಕ ಬ್ಯಾಟಿಂಗ್

ಈ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡಕ್ಕೆ ಸ್ಫೋಟಕ ಆರಂಭ ಸಿಕ್ಕಿತು. ಆರಂಭಿಕ ಲವ್ನಿತ್ ಮೊದಲ ಓವರ್​ನಲ್ಲೇ ಸತತ 4 ಸಿಕ್ಸರ್ ಬಾರಿಸಿ ಉತ್ತಮ ಆರಂಭ ಒದಗಿಸಿಕೊಟ್ಟರು. ಹೀಗಾಗಿ ತಂಡ 4 ಓವರ್​ಗಳ ಅಂತ್ಯಕ್ಕೆ 50 ರನ್​ಗಳ ಗಡಿ ದಾಟುವುದರ ಜೊತೆಗೆ ಲವ್ನಿತ್ ರೂಪದಲ್ಲಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಮುರನೇ ಕ್ರಮಾಂಕದಲ್ಲಿ ಬಂದ ಪವನ್ ಕೂಡ 7 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಈ ವೇಳೆ ನಿಖಿನ್ ಜೋಶ್ ಕೂಡ ರಿಟೈರ್ಡ್​ ಹರ್ಟ್​ ಆದರು. ಈ ಹಂತದಲ್ಲಿ ಜೊತೆಯಾದ ಸ್ಮರಣ್ ಹಾಗೂ ಸಿದ್ಧಾರ್ಥ್​ ಅರ್ಧಶತಕದ ಜೊತೆಯಾಟವನ್ನಾಡಿ ತಂಡವನ್ನು ಗೆಲುವಿನ ಹಾದಿಗೆ ಮರಳಿಸಿದರು.

ಪಂದ್ಯ ಗೆಲ್ಲಿಸಿದ ಪ್ರವೀಣ್

ಆದರೆ ಇದೇ ವೇಳೆ ಹರ್ಷಿಲ್ ಹಿಡಿದ ಅತ್ಯದ್ಭುತ ಕ್ಯಾಚ್​ನಿಂದಾಗಿ ಸ್ಮರಣ್ ಇನ್ನಿಂಗ್ಸ್ 38 ರನ್​ಗಳಿಗೆ ಅಂತ್ಯವಾಯಿತು. ಆದಾಗ್ಯೂ ಸಿದ್ಧಾರ್ಥ್ ಜೊತೆಯಾದ ಪ್ರವೀಣ್ ಸಿಕ್ಸರ್‌ಗಳ ಮಳೆಗರೆಯುವ ಮೂಲಕ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. 18ನೇ ಓವರ್​ನಲ್ಲಿ ಪಂದ್ಯದ ದಿಕ್ಕು ಬದಲಿಸಿದ ಪ್ರವೀಣ್ 3 ಸಿಕ್ಸರ್ ಬಾರಿಸಿದರು. ಹೀಗಾಗಿ ಕೊನೆಯ ಓವರ್​ನಲ್ಲಿ ತಂಡದ ಗೆಲುವಿಗೆ 11 ರನ್​ಗಳು ಬೇಕಾಗಿದ್ದವು. ಈ ವೇಳೆ ದಾಳಿಗಿಳಿದ ಕುಮಾರ್ ಮೊದಲ ಐದು ಎಸೆತಗಳಲ್ಲಿ 7 ರನ್​ಗಳನ್ನು ಬಿಟ್ಟುಕೊಟ್ಟರು. ಹೀಗಾಗಿ ಕೊನೆಯ ಎಸೆತದಲ್ಲಿ ಮೂರು ರನ್ ಬೇಕಿದ್ದವು. ಸ್ಟ್ರೈಕ್​ನಲ್ಲಿದ್ದ ಪ್ರವೀಣ್ ಕೊನೆಯ ಎಸೆತವನ್ನು ಸಿಕ್ಸರ್​ಗಟ್ಟಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಪ್ರವೀಣ್​ಗೆ ಸಾಥ್ ನೀಡಿದ ಸಿದ್ಧಾರ್ಥ್ 49 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Wed, 20 August 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ