ತೀಕ್ಷಣ… ಅತೀ ತೀಕ್ಷಣ: ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಮಹೀಶ್ ತೀಕ್ಷಣ

New Zealand vs Sri Lanka: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಆತಿಥೇಯ ನ್ಯೂಝಿಲೆಂಡ್ ತಂಡವು 9 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಉಭಯ ತಂಡಗಳು ದ್ವಿತೀಯ ಏಕದಿನ ಪಂದ್ಯವನ್ನು ಆಡುತ್ತಿದ್ದು, ಈ ಪಂದ್ಯದಲ್ಲಿ ಶ್ರೀಲಂಕಾ ತಂಡದ ಸ್ಪಿನ್ನರ್ ಮಹೀಶ್ ತೀಕ್ಷಣ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ತೀಕ್ಷಣ... ಅತೀ ತೀಕ್ಷಣ: ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಮಹೀಶ್ ತೀಕ್ಷಣ
Maheesh Theekshana
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 08, 2025 | 12:54 PM

ಹ್ಯಾಮಿಲ್ಟನ್​ನ ಸೆಡನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಆತಿಥೇಯ ನ್ಯೂಝಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಮಹೀಶ್ ತೀಕ್ಷಣ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಬೌಲಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡಕ್ಕೆ ಆರಂಭಿಕ ಆಟಗಾರ ರಚಿನ್ ರವೀಂದ್ರ ಭರ್ಜರಿ ಆರಂಭ ಒದಗಿಸಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ರಚಿನ್ 63 ಎಸೆತಗಳಲ್ಲಿ 9 ಫೋರ್​​ ಹಾಗೂ 1 ಸಿಕ್ಸ್​ನೊಂದಿಗೆ 79 ರನ್ ಬಾರಿಸಿದರು.

ಆ ಬಳಿಕ ಬಂದ ಮಾರ್ಕ್​ ಚಾಪ್ಮನ್ 52 ಎಸೆತಗಳಲ್ಲಿ 2 ಸಿಕ್ಸ್​ ಹಾಗೂ 5 ಫೋರ್​​ಗಳೊಂದಿಗೆ 62 ರನ್ ಬಾರಿಸಿದರು. ಪರಿಣಾಮ 23 ಓವರ್​ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ 3 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು.

ತೀಕ್ಷಣ… ಅತೀ ತೀಕ್ಷಣ:

ಈ ಹಂತದಲ್ಲಿ ದಾಳಿಗಿಳಿಸಿದ ಮಹೀಶ್ ತೀಕ್ಷಣ ಇಡೀ ಪಂದ್ಯದ ಚಿತ್ರಣ ಬದಲಿಸಿದರು. 35ನೇ ಓವರ್​ನ 5ನೇ ಎಸೆತದಲ್ಲಿ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ (20) ವಿಕೆಟ್ ಕಬಳಿಸಿದ ತೀಕ್ಷಣ ಮರು ಎಸೆತದಲ್ಲಿ ನಾಥನ್ ಸ್ಮಿತ್ (0) ವಿಕೆಟ್ ಪಡೆದರು.

ಈ ಓವರ್​ ಬಳಿಕ 37ನೇ ಓವರ್​ನ ಮೊದಲ ಎಸೆತದಲ್ಲಿ ಮ್ಯಾಟ್ ಹೆನ್ರಿಯನ್ನು ಔಟ್ ಮಾಡಿದ ಮಹೀಶ್ ತೀಕ್ಷಣ ಹ್ಯಾಟ್ರಿಕ್ ವಿಕೆಟ್​​ಗಳ ಸಾಧನೆ ಮಾಡಿದರು. ಈ ಮೂಲಕ ಶ್ರೀಲಂಕಾ ಪರ ಏಕದಿನ ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ 7ನೇ ಬೌಲರ್ ಎನಿಸಿಕೊಂಡರು.

37 ಓವರ್​​ಗಳ ಪಂದ್ಯ:

ಮಳೆಯ ಕಾರಣ ಈ ಪಂದ್ಯವನ್ನು 37 ಓವರ್​ಗಳಿಗೆ ಸೀಮಿತಗೊಳಿಸಲಾಗಿದೆ. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 37 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ಇದೀಗ ಬ್ಯಾಟಿಂಗ್ ಮಾಡುತ್ತಿರುವ ಶ್ರೀಲಂಕಾ ತಂಡವು 6 ಓವರ್​​ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 22 ರನ್ ಗಳಿಸಿದೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ವಿಲ್ ಯಂಗ್ , ರಚಿನ್ ರವೀಂದ್ರ , ಮಾರ್ಕ್ ಚಾಪ್ಮನ್ , ಡೇರಿಲ್ ಮಿಚೆಲ್ , ಟಾಮ್ ಲ್ಯಾಥಮ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಮಿಚೆಲ್ ಸ್ಯಾಂಟ್ನರ್ (ನಾಯಕ) ನಾಥನ್ ಸ್ಮಿತ್ , ಮ್ಯಾಟ್ ಹೆನ್ರಿ , ಜಾಕೋಬ್ ಡಫ್ಫಿ , ವಿಲಿಯಂ ಒರೋಕ್.

ಇದನ್ನೂ ಓದಿ: ಬರೋಬ್ಬರಿ 8 ಶತಕಗಳು: ದೇಶೀಯ ಅಂಗಳದಲ್ಲಿ ಕನ್ನಡಿಗರ ಕಮಾಲ್

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ , ಅವಿಷ್ಕ ಫೆರ್ನಾಂಡೋ , ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್) , ಕಾಮಿಂದು ಮೆಂಡಿಸ್ , ಚರಿತ್ ಅಸಲಂಕಾ (ನಾಯಕ) , ಜನಿತ್ ಲಿಯಾನಗೆ , ಚಾಮಿಂದು ವಿಕ್ರಮಸಿಂಘೆ , ವನಿಂದು ಹಸರಂಗ , ಮಹೀಶ್ ತೀಕ್ಷಣ , ಈಶಾನ್ ಮಾಲಿಂಗ , ಅಸಿತ ಫರ್ನಾಂಡೋ.

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!