IPL 2021: ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿರುವ ಬಗ್ಗೆ ಮೌನ ಮುರಿದ ಮುಂಬೈ ತಂಡದ ಕೋಚ್

IPL 2021: ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಂಡ್ಯ ಬೌಲಿಂಗ್‌ಗೆ ಹೆಚ್ಚಿನ ಒತ್ತು ನೀಡುತ್ತಿಲ್ಲ ಏಕೆಂದರೆ ಅದು ಅವರ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಬಹುದು ಎಂದು ಮಹೇಲಾ ಹೇಳಿದರು.

IPL 2021: ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿರುವ ಬಗ್ಗೆ ಮೌನ ಮುರಿದ ಮುಂಬೈ ತಂಡದ ಕೋಚ್
ಹಾರ್ದಿಕ್ ಪಾಂಡ್ಯ
Follow us
TV9 Web
| Updated By: ಪೃಥ್ವಿಶಂಕರ

Updated on: Oct 01, 2021 | 5:11 PM

ಹಾರ್ದಿಕ್ ಪಾಂಡ್ಯ ದೀರ್ಘಕಾಲ ಬೌಲಿಂಗ್ ಮಾಡದಿರುವುದು ಚರ್ಚೆಯ ವಿಷಯವಾಗಿದೆ. ಅವರು ದೀರ್ಘಕಾಲದಿಂದ ಬೌಲಿಂಗ್ ಮಾಡುವುದನ್ನು ನೋಡಿಲ್ಲ. ಟೀಂ ಇಂಡಿಯಾದಲ್ಲಿದ್ದಾಗಲೂ ಕೂಡ ಅವರು ಬೌಲಿಂಗ್ ಮಾಡುತ್ತಿರಲಿಲ್ಲ. ಐಪಿಎಲ್ 2021 ರಲ್ಲಿ ಕೂಡ ಅವರು ಮುಂಬೈ ಇಂಡಿಯನ್ಸ್ ಪರ ಬೌಲಿಂಗ್ ಮಾಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಮುಂದಿನ ತಿಂಗಳು ಆರಂಭವಾಗಲಿರುವ ಟಿ 20 ವಿಶ್ವಕಪ್​ನಲ್ಲಿ ಪಾಂಡ್ಯ ಯಾವ ಪಾತ್ರದಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳುತ್ತಾರೆ ಎಂಬ ಬಗ್ಗೆ ಎಲ್ಲರೂ ಚಿಂತಿತರಾಗಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ತರಬೇತುದಾರ ಮಹೇಲಾ ಜಯವರ್ಧನೆ ಈ ಬಗ್ಗೆ ಮೌನ ಮುರಿದಿದ್ದು, ನಾವು ಪಾಂಡ್ಯಗೆ ಬೌಲಿಂಗ್ ಮಾಡುವಂತೆ ಒತ್ತಡ ಹಾಕುತ್ತಿಲ್ಲ. ಏಕೆಂದರೆ ಇದು ಅವರಿಗೆ ತೊಂದರೆ ಉಂಟುಮಾಡಬಹುದು, ಇದು ಮುಂಬರುವ ಟಿ 20 ವಿಶ್ವಕಪ್‌ನಲ್ಲಿ ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ.

ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಂಡ್ಯ ಬೌಲಿಂಗ್‌ಗೆ ಹೆಚ್ಚಿನ ಒತ್ತು ನೀಡುತ್ತಿಲ್ಲ ಏಕೆಂದರೆ ಅದು ಅವರ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಬಹುದು ಎಂದು ಮಹೇಲಾ ಹೇಳಿದರು. ಹಾರ್ದಿಕ್ ದೀರ್ಘಕಾಲ ಬೌಲಿಂಗ್ ಮಾಡಿಲ್ಲ. ಹಾಗಾಗಿ ನಾವು ಹಾರ್ದಿಕ್‌ಗಾಗಿ ನಮ್ಮ ಕೈಲಾದಷ್ಟು ಮಾಡಲು ಪ್ರಯತ್ನಿಸುತ್ತಿದ್ದೇವೆ. ಅವರು ಟೀಮ್ ಇಂಡಿಯಾ ನಿರ್ವಹಣೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಅವರಿಗೆ ಸಾಧ್ಯವಿದೆಯೇ ಎಂದು ನೋಡಲು ನಾವು ಡೆಲ್ ಬಾಸಿಸ್ ಮೇಲೆ ಕಣ್ಣಿಟ್ಟಿದ್ದೇವೆ. ನಾವು ಪಾಂಡ್ಯಗೆ ಬೌಲಿಂಗ್ ಮಾಡಲು ಒತ್ತಾಯಿಸಿದರೆ, ಅವರು ತೊಂದರೆ ಅನುಭವಿಸುವ ಸಾಧ್ಯತೆಯಿದೆ ಎಂದಿದ್ದಾರೆ.

ಶ್ರೀಲಂಕಾ ಪ್ರವಾಸದಲ್ಲಿ ಬೌಲ್ ಮಾಡಿದ್ದಾರೆ ಹಾರ್ದಿಕ್ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಟೀಮ್ ಇಂಡಿಯಾದ ಭಾಗವಾಗಿದ್ದರು. ಈ ಪ್ರವಾಸದಲ್ಲೂ ಅವರು ಬೌಲಿಂಗ್ ಮಾಡಿದರು. ಅವರು ಮೂರು ಪಂದ್ಯಗಳ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಬೌಲಿಂಗ್ ಮಾಡಿದರು. ಈ ಮೂರು ಪಂದ್ಯಗಳಲ್ಲಿ, ಅವರು ಮೊದಲ ಮತ್ತು ಮೂರನೇ ಪಂದ್ಯಗಳಲ್ಲಿ ತಲಾ ಒಂದು ವಿಕೆಟ್ ಪಡೆದರು. ಅದೇ ಸಮಯದಲ್ಲಿ, ಅವರು ಮೂರು ಪಂದ್ಯಗಳ ಟಿ 20 ಸರಣಿಯ ಮೊದಲ ಪಂದ್ಯದಲ್ಲೂ ಬೌಲಿಂಗ್ ಮಾಡಿದರು. ಈ ಪಂದ್ಯದಲ್ಲಿ ಅವರು ಒಂದು ವಿಕೆಟ್ ಕೂಡ ಪಡೆದರು.

ಇದರ ನಂತರ ಅವರು ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ನಡೆಯಲಿರುವ ಟಿ 20 ವಿಶ್ವಕಪ್‌ಗೆ ಆಯ್ಕೆಯಾದರು. ತಂಡವನ್ನು ಪ್ರಕಟಿಸಿದ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ, ಪಾಂಡ್ಯ ಬೌಲಿಂಗ್ ಮಾಡಲು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಹೇಳಿದ್ದರು. ಆದಾಗ್ಯೂ, ಐಪಿಎಲ್ 2021 ರ ಎರಡನೇ ಹಂತದ ಮೊದಲ ಪಂದ್ಯದಲ್ಲಿ ಅವರು ಮುಂಬೈನ ಕೊನೆಯ -11 ರಲ್ಲಿ ಇರಲಿಲ್ಲ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಿದ ಪಂದ್ಯದಲ್ಲಿ ತಂಡದಲ್ಲಿದ್ದರು ಆದರೆ ಅವರು ಬೌಲಿಂಗ್ ಮಾಡಲಿಲ್ಲ. ಅದೇ ಸಮಯದಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ, ಪಾಂಡ್ಯ ಅಜೇಯ 40 ರನ್ ಗಳಿಸಿ ಮಿಂಚಿದರು.

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?