IPL 2022: ಹೊಸ ಐಪಿಎಲ್ ತಂಡ ಖರೀದಿಗೆ ಮುಂದಾದ ಜನಪ್ರಿಯ ಫುಟ್​ಬಾಲ್ ಕ್ಲಬ್

IPL 2022 New Teams: ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ.

IPL 2022: ಹೊಸ ಐಪಿಎಲ್ ತಂಡ ಖರೀದಿಗೆ ಮುಂದಾದ ಜನಪ್ರಿಯ ಫುಟ್​ಬಾಲ್ ಕ್ಲಬ್
IPL 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 21, 2021 | 12:43 PM

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 15ನಲ್ಲಿ (IPL 2022) ಎರಡು ಹೊಸ ತಂಡಗಳು ಕಾಣಿಸಿಕೊಳ್ಳಲಿದೆ. ಇದೇ ತಿಂಗಳು ಹೊಸ ತಂಡಗಳ ಹರಾಜು ನಡೆಯುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ವಿಶ್ವದ ಅತ್ಯಂತ ಜನಪ್ರಿಯ ಫುಟ್ಬಾಲ್ ಕ್ಲಬ್ ಮ್ಯಾಂಚೆಸ್ಟರ್ ಯುನೈಟೆಡ್ (Manchester United) ಕೂಡ ಬಿಡ್ಡಿಂಗ್​ನಲ್ಲಿ ಕಾಣಿಸಿಕೊಳ್ಳಲಿದೆ ಎಂಬ ವರದಿಯೊಂದು ಹೊರಬಿದ್ದಿದೆ. ಮ್ಯಾಂಚೆಸ್ಟರ್ ಯುನೈಟೆಡ್‌ನ ಮಾಲೀಕರಾದ ಗ್ಲೇಜರ್ ಕುಟುಂಬವು ಹೊಸ ಫ್ರಾಂಚೈಸ್ ಪಡೆಯಲು ಆಸಕ್ತಿಯನ್ನು ಹೊಂದಿದೆ. ಇದಕ್ಕಾಗಿ ಈಗಾಗಲೇ ಟೆಂಡರ್ ಆಹ್ವಾನವನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ.

ಸ್ಪೋರ್ಟ್ಸ್​ ನೆಟ್​ವರ್ಕ್​ ಮೂಲಗಳ ಮಾಹಿತಿ ಪ್ರಕಾರ , ಮ್ಯಾಂಚೆಸ್ಟರ್ ಯುನೈಟೆಡ್‌ನ ಮಾಲೀಕರು ಐಪಿಎಲ್‌ನಲ್ಲಿ ತಂಡ ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಆದರೆ ವಿದೇಶಿ ಕ್ಲಬ್​ಗೆ ನೇರವಾಗಿ ಬಿಡ್ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಥರ್ಡ್​ ಪಾರ್ಟಿ ಮೂಲಕ ಹರಾಜು ನಡೆಸಿ ಆ ಬಳಿಕ ಭಾರತದಲ್ಲಿ ತಮ್ಮ ಕ್ಲಬ್​ ಅನ್ನು ರಿಜಿಸ್ಟರ್ ಮಾಡಿಕೊಳ್ಳುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ಹೀಗಾಗಿ ಹರಾಜಿನ ವೇಳೆ ಮ್ಯಾಚೆಂಸ್ಟರ್​ ಯುನೈಟೆಡ್ ಮಾಲೀಕರು ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ. ಥರ್ಡ್​ ಪಾರ್ಟಿ ಮೂಲಕ ಟೆಂಡರ್ ಗೆದ್ದರೆ ಆ ಬಳಿಕ ಮ್ಯಾಂಚೆಸ್ಟರ್ ಯುನೈಟೆಡ್​ ತಂಡ ಐಪಿಎಲ್​ನಲ್ಲಿ ಇರಲಿದೆಯಾ ಎಂಬುದು ಬಹಿರಂಗವಾಗಲಿದೆ ಎಂದು ಹೇಳಲಾಗಿದೆ.

ಇತ್ತ ಹೊಸ ಎರಡು ತಂಡಗಳ ಖರೀದಿಗಾಗಿ ಅದಾನಿ ಗ್ರೂಪ್, ಟೊರೆಂಟ್ ಫಾರ್ಮಾ, ಅರಬಿಂದೋ ಫಾರ್ಮಾ, ಆರ್​ಪಿ-ಸಂಜೀವ್ ಗೋಯೆಂಕಾ ಗ್ರೂಪ್, ಹಿಂದೂಸ್ತಾನ್ ಟೈಮ್ಸ್ ಮೀಡಿಯಾ, ಜಿಂದಾಲ್ ಸ್ಟೀಲ್ (ನವೀನ್ ಜಿಂದಾಲ್ ನೇತೃತ್ವದಲ್ಲಿ), ಉದ್ಯಮಿ ರೋನಿ ಸ್ಕ್ರೂವಾಲಾ ಸೇರಿದಂತೆ ಹಲವು ಕಂಪನಿಗಳು ಆಸಕ್ತಿ ತೋರಿಸಿವೆ. ಈ ಪಟ್ಟಿಯಲ್ಲಿ ಅಂತಿಮ ಕ್ಷಣದಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ಹೆಸರು ಕೂಡ ಕಾಣಿಸಿಕೊಂಡಿರುವುದು ಕುತೂಹಲ ಮೂಡಿಸಿದೆ.

ಇನ್ನು ಐಪಿಎಲ್​ ತಂಡಗಳ ಬಿಡ್ಡಿಂಗ್​ಗಾಗಿ ಭಾರತೀಯ ಕ್ರಿಕೆಟ್ ಮಂಡಳಿಯು ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ಹೊಂದಿದೆ. ಉದಾಹರಣೆಗೆ, ಬಿಡ್ಡಿಂಗ್ ಮಾಡಲು ಮುಂದಾಗುವ ಕಂಪೆನಿಯು ಅಥವಾ ಉದ್ಯಮಿ ಸರಾಸರಿ ರೂ 3,000 ಕೋಟಿ ವಹಿವಾಟು ಅಥವಾ ರೂ 2,500 ಕೋಟಿ ವೈಯಕ್ತಿಕ ನಿವ್ವಳ ಮೌಲ್ಯ ಹೊಂದಿದ್ದರೆ ಮಾತ್ರ ತಂಡಗಳ ಹರಾಜಿನಲ್ಲಿ ಪಾಲ್ಗೊಳ್ಳಬಹುದು. ಹೀಗಾಗಿ ದೊಡ್ಡ ಉದ್ಯಮಿಗಳು ಮತ್ತು ಕಂಪೆನಿಗಳು ಮಾತ್ರ ಈ ಬಾರಿ ಬಿಡ್ಡಿಂಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ.

ಇದನ್ನೂ ಓದಿ: T20 World Cup 2021: ಟಿ20 ಕ್ರಿಕೆಟ್​ನಲ್ಲಿ ನಂಬರ್ 1 ಬ್ಯಾಟರ್ ಯಾರು ಗೊತ್ತಾ​?

ಇದನ್ನೂ ಓದಿ:T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು? 

ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್​ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ

(Manchester United owners show interest in acquiring new IPL franchise for next season)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ