Manish Pandey: ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು?

Manish Pandey - Ashrita Shetty: ಕರ್ನಾಟಕದ ಆಟಗಾರ ಮನೀಶ್ ಪಾಂಡೆ ವೈವಾಹಿಕ ಜೀವನದಲ್ಲಿ ವೈಮನಸ್ಯ ಮೂಡಿದೆ. ನಟಿ ಆಶ್ರಿತಾ ಜೊತೆಗಿನ ಐದು ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಅತ್ತ ಆಶ್ರಿತಾ ಕೂಡ ಪಾಂಡೆ ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಿಂದ ಡಿಲೀಟ್ ಮಾಡಿದ್ದಾರೆ.

Manish Pandey: ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು?
Manish Pandey - Ashrita Shetty
Follow us
ಝಾಹಿರ್ ಯೂಸುಫ್
|

Updated on: Jun 22, 2024 | 10:18 AM

ಟೀಮ್ ಇಂಡಿಯಾ ಆಟಗಾರ ಮನೀಶ್ ಪಾಂಡೆ (Manish Pandey) ಹಾಗೂ ಆಶ್ರಿತಾ ಶೆಟ್ಟಿ (Ashrita Shetty) ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. 2019 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿಯ ನಡುವೆ ವೈಮನಸ್ಸು ಮೂಡಿದ್ದು, ಹೀಗಾಗಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಈ ಸುದ್ದಿಯನ್ನು ಪುಷ್ಠೀಕರಿಸುವಂತೆ ಕರ್ನಾಟಕದ ಕ್ರಿಕೆಟಿಗ ಮನೀಶ್ ಪಾಂಡೆ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಿಂದ ಪತ್ನಿಯ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಅತ್ತ ಆಶ್ರಿತಾ ಶೆಟ್ಟಿ ಕೂಡ ಪತಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾ ಖಾತೆಯಿಂದ ಅಳಿಸಿ ಹಾಕಿದ್ದಾರೆ.

ಐದು ವರ್ಷಗಳ ಹಿಂದೆ ಮನೀಶ್ ಪಾಂಡೆ ನಟಿ ಆಶ್ರಿತಾ ಶೆಟ್ಟಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಕಳೆದ ವರ್ಷದವರೆಗೂ ಅನೋನ್ಯವಾಗಿದ್ದ ದಂಪತಿ ಇದೀಗ ದೂರವಾಗಲು ನಿರ್ಧರಿಸುವ ಸುದ್ದಿಗೆ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಯಾರು ಈ ಆಶ್ರಿತಾ ಶೆಟ್ಟಿ:

ಆಶ್ರಿತಾ ಶೆಟ್ಟಿ ಮಂಗಳೂರು ಮೂಲದ ಮಾಡೆಲ್ ಕಮ್ ನಟಿ. 2012 ರಲ್ಲಿ ತುಳು ಚಿತ್ರ ತೆಲಿಕೆದ ಬೊಳ್ಳಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಆಶ್ರಿತಾ ಆ ಬಳಿಕ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.

ತಮಿಳಿನಲ್ಲಿ ಉದಯಂ NH4, ಒರು ಕಣ್ಣಿಯುಂ ಮೂನು ಕಲವಾನಿಕಲುಂ ಮತ್ತು ಇಂದ್ರಜಿತ್ ಚಿತ್ರಗಳಲ್ಲಿ ಆಶ್ರಿತಾ ನಟಿಸಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಬಣ್ಣದ ಲೋಕದಿಂದ ದೂರ ಉಳಿದಿದ್ದ ಆಶ್ರಿತಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದರು.

ಅಲ್ಲದೆ ಪತಿ ಮನೀಶ್ ಪಾಂಡೆ ಜೊತೆಗಿನ ಹಲವು ಫೋಟೋಗಳೊಂದಿಗೆ ಅಪ್​ಡೇಟ್​ಗಳನ್ನು ನೀಡುತ್ತಿದ್ದರು. ಆದರೀಗ ಆಶ್ರಿತಾ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪಾಂಡೆಯ ಒಂದೇ ಒಂದು ಫೋಟೋ ಇಲ್ಲ ಎಂಬುದೇ ಅಚ್ಚರಿ.

ಅತ್ತ ಮನೀಶ್ ಪಾಂಡೆ ಕೂಡ ಪತ್ನಿ ಜೊತೆಗಿನ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಹೀಗಾಗಿಯೇ ಮನೀಶ್-ಆಶ್ರಿತಾ ಜೋಡಿ ಬೇರೆಯಾಗುತ್ತಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿದೆ.

ಮನೀಶ್ ಪಾಂಡೆ ವೃತ್ತಿಜೀವನ:

ಟೀಮ್ ಇಂಡಿಯಾ 29 ಏಕದಿನ ಪಂದ್ಯಗಳನ್ನಾಡಿರುವ ಮನೀಶ್ ಪಾಂಡೆ 1 ಶತಕ ಹಾಗೂ 2 ಅರ್ಧಶತಕಗಳೊಂದಿಗೆ ಒಟ್ಟು 566 ರನ್ ಕಲೆಹಾಕಿದ್ದಾರೆ. ಹಾಗೆಯೇ 39 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ಪಾಂಡೆ 3 ಅರ್ಧಶತಕಗಳೊಂದಿಗೆ ಒಟ್ಟು 709 ರನ್​ಗಳಿಸಿದ್ದಾರೆ.

ಇದನ್ನೂ ಓದಿ: T20 World Cup 2024: ಭಾರತದ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯಾ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ, ಪುಣೆ ವಾರಿಯರ್ಸ್, ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿರುವ ಮನೀಶ್ ಪಾಂಡೆ 171 ಪಂದ್ಯಗಳಲ್ಲಿ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಒಟ್ಟು 3850 ರನ್ ಕಲೆಹಾಕಿದ್ದಾರೆ.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು