India vs New Zealand: ಭಾರತ ವಿರುದ್ಧದ ಟಿ20, ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟ: ಇಬ್ಬರು ಸ್ಟಾರ್ ಪ್ಲೇಯರ್ಸ್​ಗೆ ಕೊಕ್

New Zealand's T20I and ODI squad against India: ಕಿವೀಸ್ ನಾಡಿಗೆ ಟೀಮ್ ಇಂಡಿಯಾ ತಲುಪಿದ್ದು, ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿದೆ. ಇದೀಗ ಭಾರತ ವಿರುದ್ಧದ ಈ ಸರಣಿಗೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟ ಮಾಡಿದೆ.

India vs New Zealand: ಭಾರತ ವಿರುದ್ಧದ ಟಿ20, ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟ: ಇಬ್ಬರು ಸ್ಟಾರ್ ಪ್ಲೇಯರ್ಸ್​ಗೆ ಕೊಕ್
IND vs NZ 2nd T20I
Follow us
| Updated By: Vinay Bhat

Updated on:Nov 15, 2022 | 10:35 AM

ಐಸಿಸಿ ಟಿ20 ವಿಶ್ವಕಪ್ (T20 World Cup) ಸೆಮಿ ಫೈನಲ್​ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಎರಡು ತಂಡಗಳಾದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಕಾಳಗಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಿವೀಸ್ ನಾಡಿಗೆ ಟೀಮ್ ಇಂಡಿಯಾ ತಲುಪಿದ್ದು, ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿದೆ. ಇದೀಗ ಭಾರತ ವಿರುದ್ಧದ ಈ ಸರಣಿಗೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟ ಮಾಡಿದೆ. ಕೆಲ ಅಚ್ಚರಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು ತಂಡದ ಸ್ಟಾರ್ ಆಟಗಾರರಾದ ಟ್ರೆಂಟ್ ಬೌಲ್ಟ್ (Trent Boult) ಹಾಗೂ ಮಾರ್ಟಿನ್ ಗಪ್ಟಿಲ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ.

”ಟ್ರೆಂಟ್ ಬೌಲ್ಟ್ ವಿಶ್ವಶ್ರೇಷ್ಠ ಬೌಲರ್. ಇದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಈ ಬಾರಿ ಇತರೆ ಆಟಗಾರರಿಗೆ ಅವಕಾಶ ಹಾಗೂ ಅನುಭವ ಆಗಲಿ ಎಂಬ ಕಾರಣಕ್ಕೆ ಅವರನ್ನು ಕೈಬಿಡಲಾಗಿದೆ,” ಎಂದು ನ್ಯೂಜಿಲೆಂಡ್ ಕ್ರಿಕೆಟ್ ಆಯ್ಕೆ ಸಮಿತಿ ಹೇಳಿದೆ. ಅಂತೆಯೆ ಮಾರ್ಟಿನ್ ಗಪ್ಟಿಲ್ ಅವರ ಜಾಗಕ್ಕೆ ಯುವ ಬ್ಯಾಟರ್ ಫಿನ್ ಅಲೆನ್ ಆಯ್ಕೆಯಾಗಿದ್ದಾರೆ. ಅಲೆನ್ ಇದೇ ಮೊದಲ ಬಾರಿಗೆ ಭಾರತ ವಿರುದ್ಧ ಆಡಲಿದ್ದಾರೆ. ಇವರು ಎಂಟು ಏಕದಿನ ಮತ್ತು 23 ಟಿ20 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಪರ ಕಣಕ್ಕಿಳಿದಿದ್ದಾರೆ.

ಭಾರತ- ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿ ಆಯೋಜಿಸಲಾಗಿದೆ. ಭಾರತ ಪರ ಕೂಡ ಕೆಲ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಟಿ20 ಸರಣಿಯನ್ನು ಹಾರ್ದಿಕ್ ಪಾಂಡ್ಯ ನಾಯಕನಾಗಿ ಮುನ್ನಡೆಸಲಿದ್ದಾರೆ. ಶಿಖರ್ ಧವನ್ ಏಕದಿನ ಸರಣಿಗೆ ಕ್ಯಾಪ್ಟನ್ ಆಗಿದ್ದಾರೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅವರಿಗೆ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ.

ಇದನ್ನೂ ಓದಿ
Image
IPL 2023 Auction: ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಐಪಿಎಲ್ 2023 ಹರಾಜಿಗೆ ಹೆಸರು ಸೂಚಿಸಿದ ಇಬ್ಬರು ಸ್ಟಾರ್ ಇಂಗ್ಲೆಂಡ್ ಪ್ಲೇಯರ್ಸ್
Image
IPL 2023: ಐಪಿಎಲ್ 2023 ಹರಾಜಿಗೂ ಮುನ್ನ ಎಲ್ಲ 10 ಫ್ರಾಂಚೈಸಿ ಬಿಡುಗಡೆ ಮಾಡಲಿರುವ ಆಟಗಾರರ ಪಟ್ಟಿ ಇಲ್ಲಿದೆ
Image
ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನ್ನಿಸ್ ಆಟಗಾರ ಶರತ್ ಕಮಲ್ ಅಚಂತ್‌ ಆಯ್ಕೆ, ನವೆಂಬರ್ 30ರಂದು ಪ್ರಶಸ್ತಿ ಪ್ರದಾನ
Image
ಪಂಜಾಬ್ ತಂಡದಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಔಟ್..! ಆಂಗ್ಲ ಆಟಗಾರರ ಮೇಲೆ ಕಿಂಗ್ಸ್ ಕಣ್ಣು

ನ್ಯೂಜಿಲೆಂಡ್ ಏಕದಿನ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಡೇರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮ್ಯಾಟ್ ಹೆನ್ರಿ.

ನ್ಯೂಜಿಲೆಂಡ್ ಟಿ20 ತಂಡ: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.

ಏಕದಿನ ಸರಣಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಶಹಬಾಝ್ ಅಹ್ಮದ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹರ್, ಕುಲ್ದೀಪ್ ಸೇನ್, ಉಮ್ರಾನ್ ಮಲಿಕ್.

ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಭಾರತದ- ನ್ಯೂಜಿಲೆಂಡ್ ಪ್ರವಾಸದ ಸಂಪೂರ್ಣ ವೇಳಾಪಟ್ಟಿ:

ಟಿ20 ಸರಣಿ: ಮಧ್ಯಾಹ್ನ 12 ಗಂಟೆಗೆ ಆರಂಭ

1ನೇ T20I – ನವೆಂಬರ್ 18, ವೆಲ್ಲಿಂಗ್ಟನ್‌

2ನೇ T20I – ನವೆಂಬರ್ 20, ಮೌಂಟ್ ಮೌಂಗನು

3ನೇ T20I – ನವೆಂಬರ್ 22, ನೇಪಿಯರ್‌

ಏಕದಿನ ಸರಣಿ: ಬೆಳಗ್ಗೆ 7 ಗಂಟೆಗೆ ಆರಂಭ

ಮೊದಲ ODI – ನವೆಂಬರ್ 25, ಆಕ್ಲೆಂಡ್‌

ಎರಡನೇ ODI – ನವೆಂಬರ್ 27, ಹ್ಯಾಮಿಲ್ಟನ್‌

ಮೂರನೇ ODI – ನವೆಂಬರ್ 30, ಕ್ರೈಸ್ಟ್‌ಚರ್ಚ್‌

Published On - 10:35 am, Tue, 15 November 22