AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6: ಜೋಶ್ ಬ್ರೌನ್ ಸಿಡಿಲಬ್ಬರ: ಕೆರಿಬಿಯನ್ ಟೈಗರ್ಸ್ ಚಾಂಪಿಯನ್ಸ್

MAX60: ಕೇಮನ್ ಐಲ್ಯಾಂಡ್​ನಲ್ಲಿ ನಡೆದ ಮ್ಯಾಕ್ಸ್​60 ಟಿ10 ಟೂರ್ನಿಯ ಚೊಚ್ಚಲ ಚಾಂಪಿಯನ್ ಆಗಿ ಕೆರಿಬಿಯನ್ ಟೈಗರ್ಸ್ ತಂಡ ಹೊರಹೊಮ್ಮಿದೆ. 5 ತಂಡಗಳ ನಡುವಣ ಈ ಕದನದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಯಾರ್ಕ್ ಸ್ಟ್ರೈಕರ್ಸ್ ತಂಡವನ್ನು 56 ರನ್​ಗಳಿಂದ ಮಣಿಸಿ ಮ್ಯಾಕ್ಸ್​60 ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

6,6,6,6,6,6: ಜೋಶ್ ಬ್ರೌನ್ ಸಿಡಿಲಬ್ಬರ: ಕೆರಿಬಿಯನ್ ಟೈಗರ್ಸ್ ಚಾಂಪಿಯನ್ಸ್
Josh Brown
ಝಾಹಿರ್ ಯೂಸುಫ್
|

Updated on: Aug 26, 2024 | 2:40 PM

Share

ವೆಸ್ಟ್ ಇಂಡೀಸ್​ನಲ್ಲಿ ನಡೆದ ಮ್ಯಾಕ್ಸ್​60 ಟಿ10 ಟೂರ್ನಿಯಲ್ಲಿ ಕೆರಿಬಿಯನ್ ಟೈಗರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಗೆಲುವಿನ ರೂವಾರಿ ಆಸ್ಟ್ರೇಲಿಯಾದ ಕ್ರಿಕೆಟಿಗ ಜೋಶ್ ಬ್ರೌನ್. ನ್ಯೂಯಾರ್ಕ್ ಸ್ಟ್ರೈಕರ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕೆರಿಬಿಯನ್ ಟೈಗರ್ಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆರಿಬಿಯನ್ ಟೈಗರ್ಸ್ ಜೋಶ್ ಬ್ರೌನ್ ಸಿಡಿಲಬ್ಬರದ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಬ್ರೌನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಮತ್ತೊಂದೆಡೆ ಜೋಶ್ ಬ್ರೌನ್​ಗೆ ಉತ್ತಮ ಸಾಥ್ ನೀಡಿದ ಕ್ರಿಸ್ ಲಿನ್ ಕೂಡ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 16 ಎಸೆತಗಳಲ್ಲಿ 35 ರನ್ ಚಚ್ಚಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಏಕಾಂಗಿಯಾಗಿ ಅಬ್ಬರ ಮುಂದುವರೆಸಿದ ಜೋಶ್ ಬ್ರೌನ್ ಇಸುರು  ಉಡಾನ ಅವರ ಒಂದೇ ಓವರ್​ನಲ್ಲಿ 26 ರನ್ ಚಚ್ಚಿದರು. ಈ ಮೂಲಕ ಕೇವಲ 18 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 60 ರನ್​ ಸಿಡಿಸಿದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಕೆರಿಬಿಯನ್ ಟೈಗರ್ಸ್ ತಂಡವು 10 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 125 ರನ್ ಕಲೆಹಾಕಿತು.

60 ಎಸೆತಗಳಲ್ಲಿ 126 ರನ್​ಗಳ ಗುರಿ ಪಡೆದ ನ್ಯೂಯಾರ್ಕ್ ಸ್ಟ್ರೈಕರ್ಸ್ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಕೇವಲ 29 ರನ್​ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ತಿಸಾರ ಪೆರೇರಾ 11 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 25 ರನ್ ಬಾರಿಸಿದರು.

ಇದಾಗ್ಯೂ ನ್ಯೂಯಾರ್ಕ್ ಸ್ಟ್ರೈಕರ್ಸ್ ತಂಡವನ್ನು 8.1 ಓವರ್​ಗಳಲ್ಲಿ 69 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಕೆರಿಬಿಯನ್ ಟೈಗರ್ಸ್ ತಂಡ ಯಶಸ್ವಿಯಾಗಿದೆ. ಈ ಮೂಲಕ ಕೆರಿಬಿಯನ್ ಟೈಗರ್ಸ್ 56 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಚೊಚ್ಚಲ ಮ್ಯಾಕ್ಸ್​60 ಟಿ10 ಟೂರ್ನಿಯಲ್ಲಿ ಕೆರಿಬಿಯನ್ ಟೈಗರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಮ್ಯಾಕ್ಸ್​60 ಟೂರ್ನಿಯ ಫೈನಲ್ ಪಂದ್ಯದ ಹೈಲೆಟ್ಸ್:

ಮ್ಯಾಕ್ಸ್​60 ಟೂರ್ನಿಯಲ್ಲಿ ಒಟ್ಟು 5 ತಂಡಗಳು ಕಣಕ್ಕಿಳಿದಿದ್ದವು. ಗ್ರ್ಯಾಂಡ್ ಕೇಮನ್ ಜಾಗ್ವಾರ್ಸ್, ಬೊಕಾ ರಾಟನ್ ಟ್ರೈಲ್ಬ್ಲೇಜರ್ಸ್, ನ್ಯೂಯಾರ್ಕ್ ಸ್ಟ್ರೈಕರ್ಸ್, ಮಿಯಾಮಿ ಲಯನ್ಸ್ ನಡುವಣ ಕದನದಲ್ಲಿ ಅಂತಿಮವಾಗಿ ಕೆರಿಬಿಯನ್ ಟೈಗರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ