ಬರ್ತ್​ ಡೇ ಪಾರ್ಟಿಯಲ್ಲಿ ಕಾಲು ಮುರಿದುಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾದ ಆರ್​ಸಿಬಿ ಆಲ್​ರೌಂಡರ್..!

Glenn Maxwell: ಮೆಲ್ಬೋರ್ನ್‌ನಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯಗೊಂಡಿದ್ದು, ವರದಿಯ ಪ್ರಕಾರ ಅವರು ಮುಂದಿನ ಮೂರು ತಿಂಗಳು ಕ್ರಿಕೆಟ್​ನಿಂದ ದೂರವಿರಲಿದ್ದಾರೆ.

ಬರ್ತ್​ ಡೇ ಪಾರ್ಟಿಯಲ್ಲಿ ಕಾಲು ಮುರಿದುಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾದ ಆರ್​ಸಿಬಿ ಆಲ್​ರೌಂಡರ್..!
ಗ್ಲೆನ್ ಮ್ಯಾಕ್ಸ್‌ವೆಲ್
Follow us
TV9 Web
| Updated By: ಪೃಥ್ವಿಶಂಕರ

Updated on:Nov 13, 2022 | 12:41 PM

ಟಿ20 ವಿಶ್ವಕಪ್ 2022 (T20 World Cup 2022)ರಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾದ ಆಟ ಸೂಪರ್-12 ನಲ್ಲಿಯೇ ಕೊನೆಗೊಂಡಿತು. ಆದಾಗ್ಯೂ, ಈ ಟೂರ್ನಿಯ ನಂತರ ಆಸ್ಟ್ರೇಲಿಯಾ ನವೆಂಬರ್ 17 ರಿಂದ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಆಡಬೇಕಾಗಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಕ್ಕೆ ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಗಾಯದ ಕಾರಣದಿಂದ ಸರಣಿಯಿಂದ ಹೊರಗುಳಿದಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯಗೊಂಡಿದ್ದು, ವರದಿಯ ಪ್ರಕಾರ ಅವರು ಮುಂದಿನ ಮೂರು ತಿಂಗಳು ಕ್ರಿಕೆಟ್​ನಿಂದ ದೂರವಿರಲಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಗ್ಲೆನ್ ಮ್ಯಾಕ್ಸ್‌ವೆಲ್ ಶನಿವಾರ ರಾತ್ರಿ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದರು. ಅಲ್ಲಿ ತನ್ನ ಸ್ನೇಹಿತನೊಂದಿಗೆ ಟೆನ್ನಿಸ್ ಅಂಕಣದಲ್ಲಿ ರನ್ನಿಂಗ್ ಮಾಡುವ ವೇಳೆ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ. ಇದರಲ್ಲಿ ಮ್ಯಾಕ್ಸ್‌ವೆಲ್‌ ಅವರ ಎಡಗಾಲಿನ ಮೇಲೆ ಅವರ ಸ್ನೇಹಿತ ಕಾಲಿಟ್ಟಿದ್ದಾರೆ. ಹೀಗಾಗಿ ಮ್ಯಾಕ್ಸ್‌ವೆಲ್‌ ಅವರ ಎಡಗಾಲು ಮುರಿದಿದ್ದು, ಈ ಗಾಯವು ತುಂಬಾ ಗಂಭೀರವಾಗಿದ್ದರಿಂದ ಮರುದಿನ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈಗ ಅವರು ಮುಂದಿನ 12 ವಾರಗಳ ಕಾಲ ಕ್ರಿಕೆಟ್‌ನಿಂದ ದೂರವಿರಲಿದ್ದಾರೆ ಎಂದು ವರದಿಯಾಗಿದೆ.

ಮ್ಯಾಕ್ಸ್‌ವೆಲ್ ಬದಲಿಗೆ ಸೀನ್ ಅಬಾಟ್‌ಗೆ ಅವಕಾಶ

ಮ್ಯಾಕ್ಸ್‌ವೆಲ್ ಅವರ ಗಾಯ ದುರದೃಷ್ಟಕರ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ. ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥ ಜಾರ್ಜ್ ಬೈಲಿ ಈ ಬಗ್ಗೆ ಮಾತನಾಡಿದ್ದು, ಮ್ಯಾಕ್ಸ್‌ವೆಲ್ ಉತ್ತಮ ಫಾರ್ಮ್​ನಲ್ಲಿದ್ದರು ಆದರೆ ಈಗ ಅವರು ಗಾಯದ ಕಾರಣದಿಂದ ಸರಣಿಯಿಂದ ಹೊರಗುಳಿದಿದ್ದಾರೆ. ಅವರಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಸಂಪೂರ್ಣ ಸಹಾಯ ಮಾಡಲಿದೆ. ಮ್ಯಾಕ್ಸ್‌ವೆಲ್ ಬದಲಿಗೆ ಶಾನ್ ಅಬಾಟ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: RCB 2023: ಐಪಿಎಲ್ 2023 ಹರಾಜಿಗೂ ಮುನ್ನ 4 ಆಟಗಾರರನ್ನು ರಿಲೀಸ್ ಮಾಡಿದ ಆರ್​ಸಿಬಿ: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಜೋಶ್ ಇಂಗ್ಲಿಸ್ ಕೂಡ ಇಂಜುರಿ

ಟಿ20 ವಿಶ್ವಕಪ್ ಸಮಯದಲ್ಲಿ, ಆಸ್ಟ್ರೇಲಿಯಾದ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಕೂಡ ಗಾಲ್ಫ್ ಕ್ಲಬ್‌ನಲ್ಲಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟು ಅವರ ಬದಲಿಗೆ ಕ್ಯಾಮೆರಾನ್ ಗ್ರೀನ್ ಅವರನ್ನು ಆಯ್ಕೆ ಮಾಡಲಾಗಿತ್ತು.

ಆಸ್ಟ್ರೇಲಿಯಾ-ಇಂಗ್ಲೆಂಡ್ ಏಕದಿನ ಸರಣಿ

ಟಿ20 ವಿಶ್ವಕಪ್ ನಂತರ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ಪಂದ್ಯ ನವೆಂಬರ್ 17 ರಂದು ನಡೆಯಲಿದ್ದು, 19 ರಂದು ಎರಡನೇ ಪಂದ್ಯ ಹಾಗೂ ನವೆಂಬರ್ 22 ರಂದು ಮೂರನೇ ಪಂದ್ಯ ನಡೆಯಲಿದೆ. ಮೊದಲ ಪಂದ್ಯ ಅಡಿಲೇಡ್‌ನಲ್ಲಿ, ಎರಡನೇ ಪಂದ್ಯ ಸಿಡ್ನಿಯಲ್ಲಿ ಮತ್ತು ಮೂರನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sun, 13 November 22

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ