AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ತಂಡದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಅವಕಾಶ

Mayank Agarwal's England Challenge: ಕಳೆದ ಎರಡು ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗಿರುವ ಕನ್ನಡಿಗ ಮಯಾಂಕ್ ಅಗರ್ವಾಲ್, ಇದೀಗ ಇಂಗ್ಲೆಂಡ್‌ನ ಡರ್ಹಾಮ್ ಕೌಂಟಿ ಕ್ಲಬ್ ಸೇರಿಕೊಂಡಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಇಂಗ್ಲೆಂಡ್‌ನ ಪರಿಸ್ಥಿತಿಗಳಲ್ಲಿ ಆಡುವ ಅವಕಾಶ ಮಯಾಂಕ್‌ಗೆ ಲಭಿಸಿದೆ. ಭಾರತ ತಂಡಕ್ಕೆ ಮರಳಲು ಇದು ಮಹತ್ವದ ವೇದಿಕೆಯಾಗಿದ್ದು, ತಮ್ಮ ಕ್ರಿಕೆಟ್ ಭವಿಷ್ಯಕ್ಕೆ ಹೊಸ ಆಯಾಮ ನೀಡಲು ಸಜ್ಜಾಗಿದ್ದಾರೆ.

ಇಂಗ್ಲೆಂಡ್ ತಂಡದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಅವಕಾಶ
Mayank Agarwal
ಪೃಥ್ವಿಶಂಕರ
|

Updated on: Aug 31, 2026 | 8:37 PM

Share

ಕನ್ನಡಿಗ ಮಯಾಂಕ್ ಅಗರ್ವಾಲ್ ( Mayank Agarwal) ಟೀಂ ಇಂಡಿಯಾದಲ್ಲಿ ವರ್ಷಗಳೇ ಕಳೆದಿವೆ. 2022 ರ ಮಾರ್ಚ್​ನಲ್ಲಿ ಮಯಾಂಕ್ ಶ್ರೀಲಂಕಾ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅದಾದ ಬಳಿಕ ಮಯಾಂಕ್​ಗೆ ಭಾರತ ತಂಡದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಆದಾಗ್ಯೂ ತಮ್ಮ ಹೋರಾಟ ಬಿಡಿದ ಮಯಾಂಕ್ ದೇಶಿ ಕ್ರಿಕೆಟ್​ನಲ್ಲಿ ಆಡುವುದನ್ನು ಮುಂದುವರೆಸಿದ್ದಾರೆ. ಇದೀಗ ಇಂಗ್ಲೆಂಡ್‌ ನೆಲದಲ್ಲೂ ತಮ್ಮ ಛಾಪು ಮೂಡಿಸಲು ಸಜ್ಜಾಗಿದ್ದಾರೆ.

ಕೌಂಟಿ ಕ್ರಿಕೆಟ್‌ನಲ್ಲಿ ಮಯಾಂಕ್

ವಾಸ್ತವವಾಗಿ ಮಯಾಂಕ್ ಅಗರ್ವಾಲ್ ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್‌ನಲ್ಲಿ ಆಡಲು ಅವಕಾಶ ಪಡೆದಿದ್ದಾರೆ. 35 ವರ್ಷದ ಮಯಾಂಕ್ ಡರ್ಹಾಮ್ ಕ್ರಿಕೆಟ್ ಕ್ಲಬ್‌ನೊಂದಿಗೆ ಸಹಿ ಹಾಕಿದ್ದಾರೆ. ಈ ಆವೃತ್ತಿಯ ಕೌಂಟಿ ಚಾಂಪಿಯನ್‌ಶಿಪ್​ನ ಉಳಿದ ಪಂದ್ಯಗಳಲ್ಲಿ ಮಯಾಂಕ್ ತಂಡದ ಪರ ಆಡಲಿದ್ದಾರೆ. ಡರ್ಹಾಮ್ ಪ್ರಸ್ತುತ ಕೌಂಟಿ ಚಾಂಪಿಯನ್‌ಶಿಪ್‌ನ ಡಿವಿಷನ್ ಟುನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ತಂಡವು ಇಲ್ಲಿಯವರೆಗೆ ಆಡಿದ 10 ಪಂದ್ಯಗಳಲ್ಲಿ ಏಳನ್ನು ಗೆದ್ದಿದ್ದು, ಮೂರು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.

ಬದಲಿಯಾಗಿ ಮಯಾಂಕ್​ಗೆ ಅವಕಾಶ

ದಕ್ಷಿಣ ಆಫ್ರಿಕಾದ ರೆಡ್-ಬಾಲ್ ಸೀಸನ್‌ನಿಂದಾಗಿ ಈ ವಾರ ತವರಿಗೆ ಮರಳುತ್ತಿರುವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಡೇವಿಡ್ ಬೆಡಿಂಗ್‌ಹ್ಯಾಮ್ ಬದಲಿಗೆ ಮಾಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮಯಾಂಕ್ ಈ ಹಿಂದೆ ಇಂಗ್ಲಿಷ್ ಕೌಂಟಿ ಕ್ರಿಕೆಟ್‌ನಲ್ಲಿ ಆಡಿದ ಅನುಭವ ಹೊಂದಿದ್ದಾರೆ. 2025 ರ ಆವೃತ್ತಿಯ ಕೊನೆಯ ಮೂರು ಪಂದ್ಯಗಳಲ್ಲಿ ಅವರು ಯಾರ್ಕ್‌ಷೈರ್ ತಂಡವನ್ನು ಪ್ರತಿನಿಧಿಸಿದ್ದಾರೆ. ಆದ್ದರಿಂದ, ಇಂಗ್ಲಿಷ್ ಪರಿಸ್ಥಿತಿಗಳು ಅವರಿಗೆ ಸಂಪೂರ್ಣವಾಗಿ ಹೊಸದಲ್ಲ.

Ranji Final: ಗಂಡು ಮೆಟ್ಟಿದ ನಾಡಿನಲ್ಲಿ ಕೆಚ್ಚೆದೆಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್

ಟೀಂ ಇಂಡಿಯಾದಲ್ಲಿ ಮಯಾಂಕ್ ಪ್ರದರ್ಶನ

ಇನ್ನು ಟೀಂ ಇಂಡಿಯಾ ಪರ 2018 ಮತ್ತು 2021 ರ ನಡುವೆ ಮಯಾಂಕ್ 21 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ, ಅವರು ನಾಲ್ಕು ಶತಕಗಳು ಸೇರಿದಂತೆ 41.33 ರ ಸರಾಸರಿಯಲ್ಲಿ 1,488 ರನ್ ಗಳಿಸಿದ್ದಾರೆ. ಇದರಲ್ಲಿ ಅವರ ಅತ್ಯುತ್ತಮ ಸ್ಕೋರ್ 243 ರನ್ ಆಗಿದೆ. ಈ ಮೊತ್ತವನ್ನು ಮಯಾಂಕ್ 2019 ರಲ್ಲಿ ಇಂದೋರ್ ಟೆಸ್ಟ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಕಲೆಹಾಕಿದ್ದರು. ಮಯಾಂಕ್ ಇತ್ತೀಚೆಗೆ ದೇಶೀಯ ಕ್ರಿಕೆಟ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಪ್ರಸ್ತುತ ರಣಜಿ ಟ್ರೋಫಿಯಲ್ಲಿ ಮಯಾಂಕ್ ಕರ್ನಾಟಕ ಪರ ಒಂದು ಶತಕ ಸೇರಿದಂತೆ 678 ರನ್ ಕಲೆಹಾಕಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ