ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್

DPL 2024 Final: ಡೆಲ್ಲಿ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 180 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
|

Updated on:Sep 09, 2024 | 2:34 PM

ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗೆ ಚಾಂಪಿಯನ್ ಪಟ್ಟಕ್ಕೇರಲು ನಿರ್ಣಾಯಕವಾಗಿದ್ದು ಕೇವಲ 3 ರನ್​ಗಳು ಎಂಬುದು ವಿಶೇಷ. ಅಂದರೆ ಸೌತ್ ಡೆಲ್ಲಿ ಸೂಪರ್​ ಸ್ಟಾರ್ಸ್ ತಂಡದ ವಿರುದ್ಧ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇಲ್ಲಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಮಯಾಂಕ್ ರಾವತ್ ಎಂಬುದು ವಿಶೇಷ. ಅದು ಸಹ ಕೊನೆಯ ಓವರ್​ನಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ಉತ್ತಮ ಬ್ಯಾಟಿಂಗ್​ಗೇನು ಪ್ರದರ್ಶಿಸಿರಲಿಲ್ಲ. ಇದಾಗ್ಯೂ ಕೆಲ ಕ್ರಮಾಂಕದಲ್ಲಿ ಕಣಕ್ಕಿಳಿದ ಮಯಾಂಕ್ ರಾವತ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 78 ರನ್ ಚಚ್ಚಿದ್ದರು.

ಈ ಆರು ಸಿಕ್ಸ್​ಗಳಲ್ಲಿ 5 ಸಿಕ್ಸ್ ಮೂಡಿಬಂದಿರುವುದು ಕೊನೆಯ ಓವರ್​ನಲ್ಲಿ. ಅಂದರೆ ಈಸ್ಟ್ ಡೆಲ್ಲಿ ರೈಡರ್ಸ್ ತಂಡದ ಇನಿಂಗ್ಸ್​ನ ಕೊನೆಯ ಓವರ್​ನಲ್ಲಿ ಮಯಾಂಕ್ ರಾವತ್ ಬ್ಯಾಕ್ ಟು ಬ್ಯಾಕ್ ಐದು ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದರು.

ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡದ ನಾಯಕ ಆಯುಷ್ ಬದೋನಿ ಎಸೆದ ಈ ಓವರ್​ನಲ್ಲಿ ಮಯಾಂಕ್ ರಾವತ್ ಐದು ಸಿಕ್ಸ್​ಗಳನ್ನು ಸಿಡಿಸುವ ಮೂಲಕ ತಂಡದ ಮೊತ್ತವನ್ನು 183 ಕ್ಕೇರಿಸಿದ್ದರು. ಈ ಭರ್ಜರಿ ಸಿಕ್ಸರ್​ಗಳ ನೆರವಿನಿಂದಲೇ ಅಂತಿಮವಾಗಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

Published On - 2:28 pm, Mon, 9 September 24

Follow us
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ