ಭಾರತ- ಪಾಕ್ ಪಂದ್ಯ ವೀಕ್ಷಿಸಲು ತೆರಳಿದ್ದ ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ನಿಧನ

MCA president Amol Kale: ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಲು ಅಮೋಲ್ ಕಾಳೆ ಭಾನುವಾರ ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ತಮ್ಮ ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸ್ಸಾಗುವ ವೇಳೆ ಅವರಿಗೆ ಹೃದಯ ಸ್ತಂಭನದಿಂದಾಗಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾರತ- ಪಾಕ್ ಪಂದ್ಯ ವೀಕ್ಷಿಸಲು ತೆರಳಿದ್ದ ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ನಿಧನ
ಅಮೋಲ್ ಕಾಳೆ
Follow us
|

Updated on:Jun 10, 2024 | 7:29 PM

ಭಾರತ ಕ್ರಿಕೆಟ್​ಗೆ ಆಘಾತ ಎದುರಾಗಿದೆ. ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ (MCA president Amol Kale) ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಮಾಹಿತಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ (T20 World Cup 2024) ಪಂದ್ಯವನ್ನು ವೀಕ್ಷಿಸಲು ಅಮೋಲ್ ಕಾಳೆ ಭಾನುವಾರ ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ತಮ್ಮ ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸ್ಸಾಗುವ ವೇಳೆ ಅವರಿಗೆ ಹೃದಯ ಸ್ತಂಭನವಾಗಿ (Cardiac Arrest) ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಖಚಿತಪಡಿಸಿದ ಜಿತೇಂದ್ರ ಅಹ್ವಾದ್

ಮಹಾರಾಷ್ಟ್ರದ ವಿರೋಧ ಪಕ್ಷದ ಉಪನಾಯಕ ಜಿತೇಂದ್ರ ಅಹ್ವಾದ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ಉತ್ತಮ ಸಂಘಟಕ ಮತ್ತು ಕ್ರಿಕೆಟ್ ಪ್ರೇಮಿಯಾಗಿದ್ದರು. ಜಗತ್ತಿಗೆ ವಿದಾಯ ಹೇಳುವ ವಯಸ್ಸು ನಿಮಗಾಗಿರಲಿಲ್ಲ. ಇದು ನನಗೆ ವೈಯಕ್ತಿಕ ನಷ್ಟವಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

2 ವರ್ಷಗಳ ಹಿಂದೆ ಎಂಸಿಎ ಅಧ್ಯಕ್ಷರಾಗಿ ಆಯ್ಕೆ

ಸಂದೀಪ್ ಪಾಟೀಲ್ ನಂತರ ಅಮೋಲ್ ಕಾಳೆ ಎಂಸಿಎ ಅಧ್ಯಕ್ಷರಾಗಿ ಅಕ್ಟೋಬರ್ 2022 ರಲ್ಲಿ ಆಯ್ಕೆಯಾಗಿದ್ದರು. ಅವರ ಆಡಳಿತಾವಧಿಯಲ್ಲಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತರಲಾಗಿತ್ತು. ಮುಂದಿನ ಅವಧಿಯಿಂದ ಮುಂಬೈ ಹಿರಿಯ ಪುರುಷರ ತಂಡದ ಆಟಗಾರರ ಪಂದ್ಯ ಶುಲ್ಕವನ್ನು ದ್ವಿಗುಣಗೊಳಿಸುವ ನಿರ್ಧಾರ ಕೂಡ ಇದರಲ್ಲಿ ಒಂದಾಂಗಿತ್ತು. ಇದರರ್ಥ, ಪುರುಷರ ತಂಡದ ಆಟಗಾರರಿಗೆ ಬಿಸಿಸಿಐ ನೀಡುವ ಪಂದ್ಯ ಶುಲ್ಕಕ್ಕೆ ಸಮನಾದ ಪಂದ್ಯ ಶುಲ್ಕವನ್ನು ಮುಂಬೈ ಆಟಗಾರರು ಪಡೆಯಲಿದ್ದಾರೆ. ಅಮೋಲ್ ಕಾಳೆ ಅವರ ಈ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.

ಅಮೋಲ್ ಕಾಳೆ ಒಬ್ಬ ವಾಣಿಜ್ಯೋದ್ಯಮಿ

ಅಮೋಲ್ ಕಾಳೆ ಹುಟ್ಟಿದ್ದು ನಾಗ್ಪುರದಲ್ಲಿ. ಅವರು ಸುಮಾರು ಒಂದು ದಶಕದಿಂದ ಮುಂಬೈನಲ್ಲಿ ವಾಸಿಸುತ್ತಿದ್ದರು. ಅಮೋಲ್ ಕಾಳೆ ತಿರುಪತಿಯ ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ನಲ್ಲಿ ಟ್ರಸ್ಟಿ ಕೂಡ ಆಗಿದ್ದರು. ಮುಂಬೈನಲ್ಲಿ ಹಲವು ಬಗೆಯ ಉದ್ಯಮಗಳನ್ನು ನಡೆಸುತ್ತಿದ್ದರು. ಅಮೋಲ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಿಕಟವರ್ತಿ ಕೂಡ. MCA ಅಧ್ಯಕ್ಷರ ಜೊತೆಗೆ, ಅಮೋಲ್ ಕಾಳೆ ಅವರು ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್‌ನ ಸಹ-ಪ್ರವರ್ತಕರಾಗಿದ್ದರು.

ದೇಶೀಯ ಸರ್ಕ್ಯೂಟ್ನಲ್ಲಿ ಯಶಸ್ಸಿಗೆ ಕ್ರೆಡಿಟ್

ಅಮೋಲ್ ಕಾಳೆ ಅವರ ಅಧಿಕಾರಾವಧಿಯಲ್ಲಿ ವಾಂಖೆಡೆ 2023 ರ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಿತ್ತು. ಇದರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯವೂ ಸೇರಿದೆ. ದೇಶೀಯ ಕ್ರಿಕೆಟ್ ಸರ್ಕ್ಯೂಟ್‌ನ ಯಶಸ್ಸು ಅವರ ನಾಯಕತ್ವಕ್ಕೆ ಒಂದು ಉದಾಹರಣೆಯಾಗಿತ್ತು. ಇವರ ಅಧಿಕಾರಾವಧಿಯಲ್ಲಿ ಮುಂಬೈ ಇತ್ತೀಚೆಗೆ 2023-24ರಲ್ಲಿ ರಣಜಿ ಟ್ರೋಫಿಯನ್ನು ವಶಪಡಿಸಿಕೊಂಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Mon, 10 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್