India vs Pakistan: ವಾರ್ನಿಂಗ್ ಕೊಟ್ಟ ಪಾಕ್ ವೇಗಿಯ ಚಳಿ ಬಿಡಿಸಿದ ಕಿಂಗ್ ಕೊಹ್ಲಿ

India vs Pakistan: ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ಆಟಗಾರನಾಗಿರುವ ನನಗೆ ಎಂಸಿಜಿ ತವರು ಮೈದಾನವಾಗಿದೆ. ಈ ಮೈದಾನದಲ್ಲಿನ ಪಿಚ್​ನ ಸ್ಥಿತಿಗತಿಗಳು ಹಾಗೂ ಪರಿಸ್ಥಿತಿಗಳು ಹೇಗೆ ಇರುತ್ತದೆ ಎಂಬುದರ ಕುರಿತು ನನಗೆ ಚೆನ್ನಾಗಿ ಗೊತ್ತಿದೆ.

India vs Pakistan: ವಾರ್ನಿಂಗ್ ಕೊಟ್ಟ ಪಾಕ್ ವೇಗಿಯ ಚಳಿ ಬಿಡಿಸಿದ ಕಿಂಗ್ ಕೊಹ್ಲಿ
Virat Kohli vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 24, 2022 | 9:55 PM

T20 World Cup 2022: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಪಂದ್ಯಕ್ಕೂ ಮುನ್ನ ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್ ನನ್ನ ತವರು ಮೈದಾನ…ಹೀಗೊಂದು ಹೇಳಿಕೆಯ ಮೂಲಕ ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ (Haris Rauf)​ ಟೀಮ್ ಇಂಡಿಯಾಗೆ (Team India) ಖಡಕ್ ಎಚ್ಚರಿಕೆ ರವಾನಿಸಿದ್ದರು. ಅಷ್ಟಕ್ಕೂ ಹ್ಯಾರಿಸ್ ರೌಫ್ ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್ ನನ್ನ ತವರು ಮೈದಾನ ಎನ್ನಲು ಮುಖ್ಯ ಕಾರಣ, ಬಿಗ್ ಬ್ಯಾಷ್​ ಲೀಗ್​ನಲ್ಲಿ ಆಡುತ್ತಿರುವುದು. ಆಸ್ಟ್ರೇಲಿಯಾದಲ್ಲಿ ಬಿಗ್ ಬ್ಯಾಷ್ ಲೀಗ್ ಮೂಲಕವೇ ರೌಫ್ ಪಾಕಿಸ್ತಾನ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು ಎಂದರೆ ತಪ್ಪಾಗಲಾರದು.

ಇಲ್ಲಿ ವಿಶೇಷತೆ ಏನೆಂದರೆ ಹ್ಯಾರಿಸ್ ರೌಫ್ ಬಿಬಿಎಲ್​​ನಲ್ಲಿ ಮೆಲ್ಬೋರ್ನ್​ ಸ್ಟಾರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಮೆಲ್ಬೋರ್ನ್​ ಮೈದಾನವು ನನ್ನ ತವರು ಸ್ಟೇಡಿಯಂ ಎಂದು ಪಾಕ್ ಆಟಗಾರ ಟೀಮ್ ಇಂಡಿಯಾಗೆ ಎಚ್ಚರಿ ರವಾನಿಸಿದ್ದರು. ಭಾರತ-ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್​ ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವುದರಿಂದ ನನಗೆ ತುಂಬಾ ಸಂತೋಷವಾಗಿದೆ.

ಏಕೆಂದರೆ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ಆಟಗಾರನಾಗಿರುವ ನನಗೆ ಎಂಸಿಜಿ ತವರು ಮೈದಾನವಾಗಿದೆ. ಈ ಮೈದಾನದಲ್ಲಿನ ಪಿಚ್​ನ ಸ್ಥಿತಿಗತಿಗಳು ಹಾಗೂ ಪರಿಸ್ಥಿತಿಗಳು ಹೇಗೆ ಇರುತ್ತದೆ ಎಂಬುದರ ಕುರಿತು ನನಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಭಾರತದ ವಿರುದ್ಧದ ಪಂದ್ಯದಲ್ಲಿ ಹೇಗೆ ಬೌಲಿಂಗ್ ಮಾಡಬೇಕು ಎಂಬುದರ ಬಗ್ಗೆ ಈಗಲೇ ಪ್ಲ್ಯಾನ್ ರೂಪಿಸಿದ್ದೇನೆ ಎಂದು ಹ್ಯಾರಿಸ್ ರೌಫ್ ತಿಳಿಸಿದ್ದರು.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಆದರೆ…ಹ್ಯಾರಿಸ್ ರೌಫ್ ಅವರ ಈ ಎಲ್ಲಾ ತಂತ್ರಗಳನ್ನು ವಿರಾಟ್ ಕೊಹ್ಲಿ 19ನೇ ಓವರ್​ನಲ್ಲಿ ಉಡೀಸ್ ಮಾಡಿದ್ದರು ಎಂದರೆ ತಪ್ಪಾಗಲಾರದು. ಟೀಮ್ ಇಂಡಿಯಾಗೆ ಗೆಲ್ಲಲು 12 ಎಸೆತಗಳಲ್ಲಿ 31 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ 19ನೇ ಓವರ್​ನಲ್ಲಿ ದಾಳಿಗಿಳಿದ ಹ್ಯಾರಿಸ್ ರೌಫ್ ಅವರ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಸಿಂಗಲ್ ತೆಗೆದರು. ಇದರ ಬೆನ್ನಲ್ಲೇ 2ನೇ ಎಸೆತದಲ್ಲಿ ಕೊಹ್ಲಿ ಕೂಡ 1 ರನ್ ಕಲೆಹಾಕಿದರು. ಮೂರನೇ ಎಸೆತದಲ್ಲಿ ಪಾಂಡ್ಯ ಯಾವುದೇ ರನ್ ಬಾರಿಸಿಲ್ಲ. ನಾಲ್ಕನೇ ಎಸೆತದಲ್ಲಿ 1 ರನ್ ಓಡಿದರು.

ಅದರಂತೆ ಅಂತಿಮ ಎರಡು ಎಸೆತಗಳು ಬಾಕಿಯಿತ್ತು. ಈ ಎರಡೂ ಬಾಲ್​ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿತ್ತು. ಕೊನೆಯ 8 ಎಸೆತಗಳಲ್ಲಿ 28 ರನ್​ಗಳು ಬೇಕಿತ್ತು. ಈ ವೇಳೆ ಹ್ಯಾರಿಸ್ ರೌಫ್ ಎಸೆದ ಚೆಂಡನ್ನು ವಿರಾಟ್ ಕೊಹ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದರು.

ಇನ್ನು ಕೊನೆಯ ಎಸೆತದಲ್ಲಿ ಲೆಗ್​ ಸೈಡ್​ನತ್ತ ಅತ್ಯಾಕರ್ಷಕವಾಗಿ ಫ್ಲಿಕ್ ಮಾಡುವ ಮೂಲಕ ಮತ್ತೊಂದು ಭರ್ಜರಿ ಸಿಕ್ಸ್ ಬಾರಿಸಿದರು. ಅಲ್ಲಿಗೆ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದ 19ನೇ ಓವರ್​ನಲ್ಲಿ 15 ರನ್​ಗಳನ್ನು ಮೂಡಿಬಂತು. ಇತ್ತ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳಿಗೆ ವಾರ್ನಿಂಗ್ ನೀಡಿದ್ದ ಹ್ಯಾರಿಸ್ ರೌಫ್​ ಅವರಿಗೆ ಎರಡು ಭರ್ಜರಿ ಸಿಕ್ಸರ್​ಗಳ ಮೂಲಕ ತಿರುಗೇಟು ನೀಡಿ ವಿರಾಟ್ ಕೊಹ್ಲಿ ಸಂಭ್ರಮಿಸಿದರು. ಇದನ್ನು ನೋಡಿ ಪೆಚ್ಚುಮೊರೆಯೊಂದಿಗೆ ಪಾಕ್ ವೇಗಿ ಪಿಚ್ ತೊರೆದರು.

ಅಂತಿಮ ಓವರ್​ನಲ್ಲಿ 16 ರನ್​ಗಳನ್ನು ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ 2021 ಟಿ20 ವಿಶ್ವಕಪ್​ನಲ್ಲಿನ ಹೀನಾಯ ಸೋಲಿನ ಸೇಡನ್ನು ತೀರಿಸಿ ಸಂಭ್ರಮಿಸಿತು.

Published On - 9:54 pm, Mon, 24 October 22

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ