AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MCG ನನ್ನ ತವರು ಪಿಚ್: ಟೀಮ್ ಇಂಡಿಯಾಗೆ ಪಾಕ್ ವೇಗಿಯ ಖಡಕ್ ಎಚ್ಚರಿಕೆ..!

India vs Pakistan: ಅಕ್ಟೋಬರ್ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ 2022 ರ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

MCG ನನ್ನ ತವರು ಪಿಚ್: ಟೀಮ್ ಇಂಡಿಯಾಗೆ ಪಾಕ್ ವೇಗಿಯ ಖಡಕ್ ಎಚ್ಚರಿಕೆ..!
Haris Rauf - Team india
TV9 Web
| Edited By: |

Updated on: Oct 15, 2022 | 4:09 PM

Share

T20 World Cup 2022: ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್ ನನ್ನ ತವರು ಮೈದಾನ…ಹೀಗೊಂದು ಹೇಳಿಕೆಯ ಮೂಲಕ ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ (Haris Rauf)​ ಟೀಮ್ ಇಂಡಿಯಾಗೆ (Team India) ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಅಷ್ಟಕ್ಕೂ ಹ್ಯಾರಿಸ್ ರೌಫ್ ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್ ನನ್ನ ತವರು ಮೈದಾನ ಎನ್ನಲು ಕಾರಣವೇನು ಎಂದು ನೋಡುವುದಾದರೆ, ಅದೇ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಅಂದರೆ ಅಕ್ಟೋಬರ್ 23 ರಂದು ನಡೆಯಲಿರುವ ಐವೋಲ್ಟೇಜ್ ಪಂದ್ಯಕ್ಕೆ ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯವನ್ನು ಪಾಕ್ ವೇಗಿ ಹ್ಯಾರಿಸ್ ರೌಫ್ ಕಾತುರದಿಂದ ಎದುರು ನೋಡುತ್ತಿದ್ದಾರೆ.

ಏಕೆಂದರೆ ಹ್ಯಾರಿಸ್ ರೌಫ್ ಆಸ್ಟ್ರೇಲಿಯಾದಲ್ಲಿ ಬಿಗ್ ಬ್ಯಾಷ್ ಲೀಗ್ ಆಡುವ ಆಟಗಾರ. ಒಂದಾರ್ಥದಲ್ಲಿ ಬಿಬಿಎಲ್ ಮೂಲಕವೇ ರೌಫ್ ಪಾಕಿಸ್ತಾನ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು ಎಂದರೆ ತಪ್ಪಾಗಲಾರದು. ಇಲ್ಲಿ ವಿಶೇಷತೆ ಏನೆಂದರೆ ಹ್ಯಾರಿಸ್ ರೌಫ್ ಬಿಬಿಎಲ್​​ನಲ್ಲಿ ಮೆಲ್ಬೋರ್ನ್​ ಸ್ಟಾರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಮೆಲ್ಬೋರ್ನ್​ ಮೈದಾನವು ನನ್ನ ತವರು ಸ್ಟೇಡಿಯಂ ಎಂದು ಪಾಕ್ ಆಟಗಾರ ಟೀಮ್ ಇಂಡಿಯಾಗೆ ಎಚ್ಚರಿ ರವಾನಿಸಿದ್ದಾರೆ.

ನಾನು ನನ್ನ ಅತ್ಯುತ್ತಮ ಪ್ರದರ್ಶನ ನೀಡಿದರೆ, ಅವರು ನನ್ನ ವಿರುದ್ಧ ಸುಲಭವಾಗಿ ಆಡಲು ಸಾಧ್ಯವಾಗುವುದಿಲ್ಲ. ಇದೀಗ ಟಿ20 ವಿಶ್ವಕಪ್​ ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವುದರಿಂದ ನನಗೆ ತುಂಬಾ ಸಂತೋಷವಾಗಿದೆ. ಏಕೆಂದರೆ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ಆಟಗಾರನಾಗಿರುವ ನನಗೆ ಎಂಸಿಜಿ ತವರು ಮೈದಾನವಾಗಿದೆ. ಈ ಮೈದಾನದಲ್ಲಿನ ಪಿಚ್​ನ ಸ್ಥಿತಿಗತಿಗಳು ಹಾಗೂ ಪರಿಸ್ಥಿತಿಗಳು ಹೇಗೆ ಇರುತ್ತದೆ ಎಂಬುದರ ಕುರಿತು ನನಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಭಾರತದ ವಿರುದ್ಧದ ಪಂದ್ಯದಲ್ಲಿ ಹೇಗೆ ಬೌಲಿಂಗ್ ಮಾಡಬೇಕು ಎಂಬುದರ ಬಗ್ಗೆ ಈಗಲೇ ಪ್ಲ್ಯಾನ್ ರೂಪಿಸಿದ್ದೇನೆ ಎಂದು ಹ್ಯಾರಿಸ್ ರೌಫ್ ಹೇಳಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಚ್ಚರಿಯೆಂದರೆ ಕಳೆದ ಒಂದು ವರ್ಷದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವೇಗದ ಚೆಂಡೆಸೆತ ದಾಖಲೆ ಕೂಡ ಹ್ಯಾರಿಸ್ ರೌಫ್ ಹೆಸರಿನಲ್ಲಿದೆ. 2021 ರ ಟಿ20 ವಿಶ್ವಕಪ್ ಬಳಿಕ ರೌಫ್ 140+ ವೇಗದಲ್ಲಿ ಬರೋಬ್ಬರಿ 173 ಬಾರಿ ಬೌಲಿಂಗ್ ಮಾಡಿದ್ದಾರೆ. ಹೀಗಾಗಿಯೇ ಹ್ಯಾರಿಸ್ ರೌಫ್ ಅವರ ವಾರ್ನಿಂಗ್ ಟೀಮ್ ಇಂಡಿಯಾ ಪಾಲಿಗೆ ಖಡಕ್ ಎಚ್ಚರಿಕೆ ಎಂದೇ ಹೇಳಬಹುದು.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್

Follow Us
Web contact
Web contact

TV9 Kannada

Read More
ವರುಣಾರ್ಭಟಕ್ಕೆ ಮನೆಗಳಿಗೆ ನುಗ್ಗಿದ ನೀರು: ದವಸ ಧಾನ್ಯಗಳು ಜಲಾಹುತಿ
ವರುಣಾರ್ಭಟಕ್ಕೆ ಮನೆಗಳಿಗೆ ನುಗ್ಗಿದ ನೀರು: ದವಸ ಧಾನ್ಯಗಳು ಜಲಾಹುತಿ
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು