AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯಗೆ ಪ್ರತಿಸ್ಪರ್ಧಿ?

Team India: ಕೇವಲ 14 ರನ್​ಗಳಿಸಿ ಆದರ್ಶ್ ಔಟಾದರೆ, ಆ ಬಳಿಕ ಬಂದ ರುದ್ರ ಪಟೇಲ್ (5) ಹಾಗೂ ಉದಯ್ ಸಹರಾನ್ (20) ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಶಿನ್ ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯಗೆ ಪ್ರತಿಸ್ಪರ್ಧಿ?
Arshin Kulkarni-Hardik Pandya
TV9 Web
| Updated By: ಝಾಹಿರ್ ಯೂಸುಫ್|

Updated on: Dec 09, 2023 | 2:32 PM

Share

ಹಾರ್ದಿಕ್ ಪಾಂಡ್ಯ (Hardik Pandya) ಅಪರೂಪದ ಆಲ್​ರೌಂಡರ್​…ಅವರು ಮೈದಾನದಲ್ಲಿ ಕಾಣಿಸಿಕೊಳ್ಳುವುದೇ ಅಪರೂಪ…ಹೀಗೆ ಹಾರ್ದಿಕ್ ಪಾಂಡ್ಯ ಬಗ್ಗೆ ಇತ್ತೀಚೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಯ್ ಜಡೇಜಾ ವ್ಯಂಗ್ಯವಾಡಿದ್ದರು. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ಪ್ರಮುಖ ಟೂರ್ನಿಗಳಿಗೆ ಪಾಂಡ್ಯ ಕೈಕೊಡುತ್ತಾ ಬಂದಿರುವುದು. ಆದರೆ ಇತ್ತ ಅವರ ಸ್ಥಾನ ತುಂಬಬಲ್ಲ ಮತ್ತೋರ್ವ ಆಲ್​ರೌಂಡರ್ ಇಲ್ಲದಿರುವುದು ಪಾಂಡ್ಯ ಪಾಲಿಗೆ ವರವಾಗುತ್ತಾ ಬಂದಿದೆ.

ಆದರೀಗ ಹಾರ್ದಿಕ್ ಪಾಂಡ್ಯಗೆ ಸವಾಲೆಸೆಯಬಲ್ಲ ವೇಗದ ಬೌಲರ್​ರೊಬ್ಬನ ಎಂಟ್ರಿಯಾಗಿದೆ. ಅದು ಕೂಡ ಅಂಡರ್​-19 ಏಷ್ಯಾಕಪ್ ಮೂಲಕ ಎಂಬುದು ವಿಶೇಷ.

ಹೆಸರು ಅರ್ಶಿನ್ ಕುಲ್ಕರ್ಣಿ. ಮಧ್ಯಮ ವೇಗದ ಬೌಲಿಂಗ್ ಆಲ್​ರೌಂಡರ್. ಅಂಡರ್-14 ಮಹಾರಾಷ್ಟ್ರ ತಂಡದ ಪರ ಕಣಕ್ಕಿಳಿಯುವ ಮೂಲಕ ಕ್ರಿಕೆಟ್ ಕೆರಿಯರ್ ಆರಂಭಿಸಿರುವ ಅರ್ಶಿನ್ ಕುಲ್ಕರ್ಣಿ ಇದೀಗ ಟೀಮ್ ಇಂಡಿಯಾದಲ್ಲಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್​ನ ಮೊದಲ ಪಂದ್ಯದಲ್ಲೇ ಅರ್ಶಿನ್ ಎಲ್ಲರ ಗಮನ ಸೆಳೆದಿದ್ದಾರೆ. ಅದು ಕೂಡ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನದ ಮೂಲಕ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 173 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಲು ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ್ದು ಅರ್ಶಿನ್ ಕುಲ್ಕರ್ಣಿ ಹಾಗೂ ಆದರ್ಶ್ ಸಿಂಗ್.

ಕೇವಲ 14 ರನ್​ಗಳಿಸಿ ಆದರ್ಶ್ ಔಟಾದರೆ, ಆ ಬಳಿಕ ಬಂದ ರುದ್ರ ಪಟೇಲ್ (5) ಹಾಗೂ ಉದಯ್ ಸಹರಾನ್ (20) ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಶಿನ್ ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಅಷ್ಟೇ ಅಲ್ಲದೆ ಅಜೇಯ 70 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಜವಾಬ್ದಾರಿಯುತ ಬ್ಯಾಟಿಂಗ್​​ನಿಂದಾಗಿ ಇದೀಗ ಅರ್ಶಿನ್ ಎಲ್ಲರ ಗಮನ ಸೆಳೆದಿದ್ದಾರೆ.

ಅದರಲ್ಲೂ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿರುವ ಅರ್ಶಿನ್ ಆರಂಭಿಕನಾಗಿಯೂ ಮಿಂಚಿರುವುದು ಹೊಸ ಭರವಸೆ ಮೂಡಿಸಿದೆ. ಏಕೆಂದರೆ ಈ ಪಂದ್ಯದಲ್ಲಿ 8 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಅರ್ಶಿನ್ ಕೇವಲ 29 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ ಆರಂಭಿಕನಾಗಿ ಅರ್ಧಶತಕವನ್ನೂ ಬಾರಿಸಿ ಭಾರತ ತಂಡಕ್ಕೆ ಜಯ ತಂದುಕೊಟ್ಟರು.

ಇತ್ತ ಹಾರ್ದಿಕ್ ಪಾಂಡ್ಯಗೆ ಬದಲಿ ಆಟಗಾರನ ಹುಡುಕಾಟದಲ್ಲಿರುವ ಆಯ್ಕೆ ಸಮಿತಿ ಮುಂದೆ ಹೊಸ ಆಯ್ಕೆಯೊಂದು ತೆರೆದುಕೊಂಡಿದೆ. ಇತ್ತ ಅಂಡರ್-19 ಏಷ್ಯಾಕಪ್​ನಲ್ಲಿ ಮಿಂಚಿದರೆ ಅರ್ಶಿನ್ ಕುಲ್ಕರ್ಣಿಗೆ ಐಪಿಎಲ್ ಬಾಗಿಲು ತೆರೆದುಕೊಳ್ಳುವುದು ಖಚಿತ.

ಇದನ್ನೂ ಓದಿ: Virat Kohli: ಏಕದಿನದಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಕಿಂಗ್ ಕೊಹ್ಲಿ..!

ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ಅರ್ಶಿನ್ ಕುಲ್ಕರ್ಣಿಗೆ ಅವಕಾಶ ಸಿಕ್ಕರೆ, ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಹೊಸ ಪ್ರತಿಸ್ಪರ್ಧಿ ಹುಟ್ಟಿಕೊಳ್ಳುವುದಂತು ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಪಾಲಿಗೆ ಚಿಂತೆಯಾಗಿದ್ದ ವೇಗದ ಬೌಲಿಂಗ್ ಆಲ್​ರೌಂಡರ್ ಕೊರತೆಯನ್ನು ಅರ್ಶಿನ್ ಕುಲ್ಕರ್ಣಿ ನೀಗಿಸಲಿದ್ದಾರಾ ಕಾದು ನೋಡಬೇಕಿದೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ