AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2025: ಗ್ಲೆನ್ ಮ್ಯಾಕ್ಸ್​ವೆಲ್ ಕಳಪೆಯಾಟದಿಂದ ಕೈ ತಪ್ಪಿದ ಕಪ್..!

Washington Freedom vs MI New York, Final: ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ ತಂಡ 5 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ 20 ಓವರ್​ಗಳಲ್ಲಿ 180 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ವಾಷಿಂಗ್ಟನ್ ಫ್ರೀಡಂ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 175 ರನ್​ಗಳಿಸಲಷ್ಟೇ ಶಕ್ತರಾದರು.

MLC 2025: ಗ್ಲೆನ್ ಮ್ಯಾಕ್ಸ್​ವೆಲ್ ಕಳಪೆಯಾಟದಿಂದ ಕೈ ತಪ್ಪಿದ ಕಪ್..!
Mi Vs Wf
ಝಾಹಿರ್ ಯೂಸುಫ್
|

Updated on:Jul 14, 2025 | 11:29 AM

Share

ಅಮೆರಿಕದಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಎಂಐ ನ್ಯೂಯಾರ್ಕ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ ಹಾಗೂ ವಾಷಿಂಗ್ಟನ್ ಫ್ರೀಡಂ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವಾಷಿಂಗ್ಟನ್ ಫ್ರೀಡಂ ತಂಡದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ಪರ ಆರಂಭಿಕ ದಾಂಡಿಗ ಕ್ವಿಂಟನ್ ಡಿಕಾಕ್ 46 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಪೋರ್​ಗಳೊಂದಿಗೆ 77 ರನ್ ಚಚ್ಚಿದರು. ಇನ್ನು ಮೊನಾಂಕ್ ಪಟೇಲ್ 28 ರನ್​ಗಳ ಕೊಡುಗೆ ನೀಡಿದರು.

ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ನಿಕೋಲಸ್ ಪೂರನ್ 21 ರನ್ ಬಾರಿಸಿದರೆ, ಕುನ್ವರ್ಜಿತ್ ಸಿಂಗ್ 22 ರನ್​ಗಳಿಸಿದರು. ಈ ಮೂಲಕ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು.

181 ರನ್​ಗಳ ಕಠಿಣ ಗುರಿ ಪಡೆದ ವಾಷಿಂಗ್ಟನ್ ಫ್ರೀಡಂ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಮಿಚೆಲ್ ಓವನ್ (0) ಮೊದಲ ಎಸೆತದಲ್ಲೇ ಟ್ರೆಂಟ್ ಬೌಲ್ಟ್​ಗೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರಚಿನ್ ರವೀಂದ್ರ 41 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 70 ರನ್ ಬಾರಿಸಿದರು. ಇನ್ನು ಜ್ಯಾಕ್ ಎಡ್ವರ್ಡ್ಸ್ 33 ರನ್​ಗಳ ಕೊಡುಗೆ ನೀಡುವ ಮೂಲಕ ತಂಡದ ರನ್ ಗತಿಯನ್ನು ಹೆಚ್ಚಿಸಿದ್ದರು.

ಪರಿಣಾಮ ಕೊನೆಯ 5 ಓವರ್​ಗಳಲ್ಲಿ ವಾಷಿಂಗ್ಟನ್ ಫ್ರೀಡಂ ತಂಡಕ್ಕೆ ಕೇವಲ 52 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಗ್ಲೆನ್ ಫಿಲಿಪ್ಸ್ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು. ಆದರೆ ಮತ್ತೊಂದೆಡೆ ಗ್ಲೆನ್ ಮ್ಯಾಕ್ಸ್​ವೆಲ್ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದು ವಾಷಿಂಗ್ಟನ್ ಫ್ರೀಡಂ ಪಾಲಿಗೆ ಮುಳುವಾಯಿತು.

ಮ್ಯಾಕ್ಸ್​ವೆಲ್ ಕಳಪೆಯಾಟ:

ಕೊನೆಯ ಓವರ್​ಗಳ ವೇಳೆ 16 ಎಸೆತಗಳನ್ನು ಎದುರಿಸಿದ ಗ್ಲೆನ್ ಮ್ಯಾಕ್ಸ್​ವೆಲ್ ಕಲೆಹಾಕಿದ್ದು ಕೇವಲ 15 ರನ್​ಗಳು ಮಾತ್ರ. ಈ 15 ರನ್​ಗಳಲ್ಲಿ ಒಂದೇ ಒಂದು ಬೌಂಡರಿ ಮೂಡಿಬಂದಿರಲಿಲ್ಲ. ಅಂದರೆ ಮ್ಯಾಕ್ಸ್​ವೆಲ್​ ಪ್ರತಿ ಎಸೆತಗಳಿಗೆ ಒಂದೊಂದೇ ರನ್​ ಗಳಿಸುತ್ತಾ ಸಾಗಿದ್ದು ವಾಷಿಂಗ್ಟನ್ ಫ್ರೀಡಂ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.

ಪರಿಣಾಮ ಅಂತಿಮ ಓವರ್​ನಲ್ಲಿ 12 ರನ್​ಗಳ ಗುರಿ ಪಡೆದ ವಾಷಿಂಗ್ಟನ್ ಫ್ರೀಡಂ ತಂಡವು ಕೇವಲ 6 ರನ್​ಗಳಿಸಿ 5 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ರೋಚಕ ಗೆಲುವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಕ್ಕೂ ಮುನ್ನ 2023 ರಲ್ಲಿ ಎಂಐ ನ್ಯೂಯಾರ್ಕ್ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಎಂಐ ಪಡೆ ಯಶಸ್ವಿಯಾಗಿದೆ.

ವಾಷಿಂಗ್ಟನ್ ಫ್ರೀಡಂ ಪ್ಲೇಯಿಂಗ್ 11: ಮಿಚೆಲ್ ಓವನ್ , ರಚಿನ್ ರವೀಂದ್ರ , ಆಂಡ್ರೀಸ್ ಗೌಸ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಗ್ಲೆನ್ ಮ್ಯಾಕ್ಸ್‌ವೆಲ್ (ನಾಯಕ) , ಮುಖ್ತಾರ್ ಅಹ್ಮದ್ , ಓಬಸ್ ಪಿಯೆನಾರ್ , ಜ್ಯಾಕ್ ಎಡ್ವರ್ಡ್ಸ್ , ಇಯಾನ್ ಹಾಲೆಂಡ್ , ಲಾಕಿ ಫರ್ಗುಸನ್ , ಸೌರಭ್ ನೇತ್ರವಲ್ಕರ್.

ಇದನ್ನೂ ಓದಿ: T20 World Cup 2026: ಟಿ20 ವಿಶ್ವಕಪ್​ಗೆ 15 ತಂಡಗಳು ಎಂಟ್ರಿ

ಎಂಐ ನ್ಯೂಯಾರ್ಕ್​​ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) , ಮೊನಾಂಕ್ ಪಟೇಲ್ , ಮೈಕೆಲ್ ಬ್ರೇಸ್‌ವೆಲ್ , ನಿಕೋಲಸ್ ಪೂರನ್ (ನಾಯಕ) , ಕೀರನ್ ಪೊಲಾರ್ಡ್ , ಕುನ್ವರ್ಜೀತ್ ಸಿಂಗ್ , ತಜಿಂದರ್ ಧಿಲ್ಲೋನ್ , ಟ್ರಿಸ್ಟಾನ್ ಲೂಸ್ , ಟ್ರೆಂಟ್ ಬೌಲ್ಟ್ , ನೋಸ್ತೂಶ್ ಕೆಂಜಿಗೆ , ರುಶಿಲ್ ಉಗಾರ್ಕರ್.

Published On - 11:25 am, Mon, 14 July 25

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ