
ಐಪಿಎಲ್ನ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 24 ರನ್ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 169 ರನ್ ಗಳಿಸಿತು. ತಂಡದ ಪರ ವೆಂಕಟೇಶ್ ಅಯ್ಯರ್ ಗರಿಷ್ಠ 70 ರನ್ ಹಾಗೂ ಮನೀಶ್ ಪಾಂಡೆ 42 ರನ್ ಗಳಿಸಿದರು. ಗೆಲುವಿಗೆ 170 ರನ್‌ಗಳ ಗುರಿ ಪಡೆದ ಮುಂಬೈ ತಂಡ ನಿಗದಿತ 20 ಓವರ್‌ಗಳಲ್ಲಿ 145 ರನ್ ಗಳಿಸಲಷ್ಟೇ ಶಕ್ತವಾಗಿ 24 ರನ್ಗಳಿಂದ ಸೊಲೊಪ್ಪಿಕೊಂಡಿತು.
ಮುಂಬೈ 2ನೇ ವಿಕೆಟ್ ಕಳೆದುಕೊಂಡಿದೆ. ಮೂರನೇ ಕ್ರಮಾಂಕದಲ್ಲಿ ಬಂದ ನಮನ್ ಧೀರ್, ವರುಣ್ ಚಕ್ರವರ್ತಿಗೆ ಬಲಿಯಾಗಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡ 4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 38 ರನ್ ಗಳಿಸಿದೆ. ನಮನ್ ಧೀರ್ 11 ರನ್ ಮತ್ತು ರೋಹಿತ್ ಶರ್ಮಾ 10 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಆರಂಭಿಕ ಇಶಾನ್ ಕಿಶನ್ ಕೇವಲ 13 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ್ದಾರೆ.
ಮುಂಬೈ; 16/1
ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್ ಆರಂಭವಾಗಿದೆ. ತಂಡದ ಪರ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಕ್ರೀಸ್‌ನಲ್ಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 169 ರನ್ ಕಲೆಹಾಕಿದೆ. ತಂಡದ ಪರ ವೆಂಕಟೇಶ್ ಅಯ್ಯರ್ 70 ರನ್ ಮತ್ತು ಮನೀಶ್ ಪಾಂಡೆ 42 ರನ್ ಗಳಿಸಿ ತಂಡವನ್ನು ಗೌರವಾನ್ವಿತ ಮೊತ್ತಕ್ಕೆ ಕೊಂಡೊಯ್ದರು. ಮುಂಬೈ ಇಂಡಿಯನ್ಸ್ ತಂಡದ ಗೆಲುವಿಗೆ 120 ಎಸೆತಗಳಲ್ಲಿ 170 ರನ್‌ಗಳ ಅಗತ್ಯವಿದೆ.
ರಸೆಲ್ ಕೇವಲ 7 ರನ್ಗಳಿಗೆ ರನೌಟ್ಗೆ ಬಲಿಯಾದರು. ವೆಂಕಟೇಶ್ ಅಯ್ಯರ್ ಅವರೊಂದಿಗೆ ರಮಣದೀಪ್ ಸಿಂಗ್ ಕ್ರೀಸ್‌ನಲ್ಲಿದ್ದಾರೆ.
ಕನ್ನಡಿಗ ಮನೀಶ್ ಪಾಂಡೆ ಇನ್ನಿಂಗ್ಸ್ 42 ರನ್ಗಳಿಗೆ ಅಂತ್ಯಗೊಂಡಿದೆ. ತಂಡದ ಪರವಾಗಿ ಆಂಡ್ರೆ ರಸೆಲ್ ಕ್ರೀಸ್‌ಗೆ ಬಂದಿದ್ದಾರೆ. ತಂಡದ ಸ್ಕೋರ್ 6 ವಿಕೆಟ್ ನಷ್ಟಕ್ಕೆ 147 ರನ್ ಆಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ವೆಂಕಟೇಶ್ ಅಯ್ಯರ್ 16ನೇ ಓವರ್‌ನಲ್ಲಿ ತಮ್ಮ ಅರ್ಧಶತಕ ಪೂರ್ಣಗೊಳಿಸಿದ್ದಾರೆ. ಕನ್ನಡಿಗ ಮನೀಶ್ ಪಾಂಡೆ ಕೂಡ 36 ರನ್ ಗಳಿಸಿ ಆಡುತ್ತಿದ್ದಾರೆ. 16 ಓವರ್‌ಗಳಲ್ಲಿ ತಂಡ 5 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 14 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿದೆ. ತಂಡದ ಪರ ವೆಂಕಟೇಶ್ ಅಯ್ಯರ್ 47 ರನ್ ಹಾಗೂ ಮನೀಶ್ ಪಾಂಡೆ 31 ರನ್ ಗಳಿಸಿ ಆಡುತ್ತಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 12 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 100 ರನ್‌ಗಳ ಗಡಿ ದಾಟಿದೆ. ತಂಡದ ಪರ ವೆಂಕಟೇಶ್ ಅಯ್ಯರ್ 43 ರನ್ ಹಾಗೂ ಮನೀಶ್ ಪಾಂಡೆ 18 ರನ್ ಬಾರಿಸಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 10 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿದೆ. ಇಬ್ಬರೂ ಬ್ಯಾಟ್ಸ್‌ಮನ್‌ಗಳು 26 ರನ್‌ಗಳ ಜೊತೆಯಾಟ ನಡೆಸಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪವರ್‌ಪ್ಲೇ ಅಂತ್ಯಕ್ಕೆ ತನ್ನ 5ನೇ ವಿಕೆಟ್ ಕಳೆದುಕೊಂಡಿದೆ. ರಿಂಕು ಸಿಂಗ್ 9 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು.
ಕೆಕೆಆರ್ 58/5
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 5ನೇ ಓವರ್‌ನಲ್ಲಿ 4 ವಿಕೆಟ್ ಕಳೆದುಕೊಂಡಿದೆ. 5 ಓವರ್‌ಗಳಲ್ಲಿ ತಂಡದ ಸ್ಕೋರ್ 51 ರನ್ ಆಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್ ಕೇವಲ 6 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದ್ದಾರೆ. ವೆಂಕಟೇಶ್ ಅಯ್ಯರ್ ಕ್ರೀಸ್‌ನಲ್ಲಿದ್ದಾರೆ. ತಂಡ 4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 37 ರನ್ ಗಳಿಸಿದೆ.
ಅಂಗ್‌ಕ್ರಿಶ್ ರಘುವಂಶಿ 13 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದ್ದಾರೆ. ನಾಯಕ ಶ್ರೇಯಸ್ ಅಯ್ಯರ್ ಕ್ರೀಸ್‌ಗೆ ಬಂದಿದ್ದಾರೆ. ತಂಡದ ಸ್ಕೋರ್ 2 ವಿಕೆಟ್ ನಷ್ಟಕ್ಕೆ 28 ರನ್ ಆಗಿದೆ.
ಕೋಲ್ಕತ್ತಾಗೆ ಫಿಲ್ ಸಾಲ್ಟ್ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿದೆ. ಆಂಗ್ಕ್ರಿಶ್ ರಘುವಂಶಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಒಂದು ಓವರ್ ನಂತರ ತಂಡದ ಸ್ಕೋರ್ 12/1.
ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.
ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಟಿಮ್ ಡೇವಿಡ್, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Published On - 7:09 pm, Fri, 3 May 24