AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs KKR Playing XI IPL 2022: ಗೆಲುವಿನ ನಿರೀಕ್ಷೆಯಲ್ಲಿ ರೋಹಿತ್ ಪಡೆ: ಉಭಯ ತಂಡಗಳಲ್ಲಿ ಒಂದು ಬದಲಾವಣೆ ಸಾಧ್ಯತೆ

MI vs KKR Playing XI IPL 2022: ಕೆಕೆಆರ್ ನಂಬರ್ ಒನ್ ಸ್ಥಾನಕ್ಕೆ ಬರಲು ಪ್ರಯತ್ನಿಸಲಿದೆ. ಹೀಗಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕೆಕೆಆರ್‌ ತಂಡದಲ್ಲಿ ಆಸ್ಟ್ರೇಲಿಯಾ ಬೌಲರ್ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳುವುದು ಖಚಿತ.

MI vs KKR Playing XI IPL 2022: ಗೆಲುವಿನ ನಿರೀಕ್ಷೆಯಲ್ಲಿ ರೋಹಿತ್ ಪಡೆ: ಉಭಯ ತಂಡಗಳಲ್ಲಿ ಒಂದು ಬದಲಾವಣೆ ಸಾಧ್ಯತೆ
MI vs KKR Playing XI IPL 2022
TV9 Web
| Edited By: |

Updated on: Apr 06, 2022 | 2:28 PM

Share

ಐಪಿಎಲ್​ನ 14ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ. 3 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸಿದ್ದರೆ, ಒಂದರಲ್ಲಿ ಸೋಲನುಭವಿಸಬೇಕಾಯಿತು. ಸದ್ಯ ಕೆಕೆಆರ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಈ ಬಾರಿ ಇನ್ನೂ ತನ್ನ ಗೆಲುವಿನ ಖಾತೆಯನ್ನು ತೆರೆದಿಲ್ಲ. ಮುಂಬೈನಲ್ಲಿ ಆಡಿದ ಕೊನೆಯ ಎರಡೂ ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಇಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ ಹಿಟ್​ಮ್ಯಾನ್ ಪಡೆ.

ಮತ್ತೊಂದೆಡೆ, ಕೆಕೆಆರ್ ನಂಬರ್ ಒನ್ ಸ್ಥಾನಕ್ಕೆ ಬರಲು ಪ್ರಯತ್ನಿಸಲಿದೆ. ಹೀಗಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕೆಕೆಆರ್‌ ತಂಡದಲ್ಲಿ ಆಸ್ಟ್ರೇಲಿಯಾ ಬೌಲರ್ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳುವುದು ಖಚಿತ. ಅದೇ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಪಂದ್ಯಕ್ಕೂ ಮುನ್ನವೇ ಸೂರ್ಯಕುಮಾರ್ ಆಯ್ಕೆಗೆ ಲಭ್ಯರಿದ್ದರೂ ಪಂದ್ಯ ಆಡಲು ಸಾಧ್ಯವಾಗಿರಲಿಲ್ಲ.

ಈ ಪಂದ್ಯದಲ್ಲಿ ಮುಂಬೈ ಸೂರ್ಯಕುಮಾರ್ ಯಾದವ್‌ಗೆ ಅವಕಾಶ ನೀಡಿದರೆ ಅನ್ಮೋಲ್‌ಪ್ರೀತ್ ಸಿಂಗ್ ಹೊರಗುಳಿಯಬೇಕಾಗಬಹುದು. ಹಾಗೆಯೇ ಬಾಸಿಲ್ ಥಂಪಿ ಬದಲು ಜಯದೇವ್ ಉನದ್ಕತ್ ಗೆ ಈ ಪಂದ್ಯದಲ್ಲಿ ಅವಕಾಶ ನೀಡಬಹುದು. ಇನ್ನು ಕೆಕೆಆರ್ ತಂಡದಲ್ಲಿ ಕಮಿನ್ಸ್ ಕಾಣಿಸಿಕೊಂಡರೆ ಸ್ಯಾಮ್ ಬಿಲ್ಲಿಂಗ್ಸ್ ಹೊರಗುಳಿಯಬಹುದು.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11:

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಟಿಮ್ ಡೇವಿಡ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಜಯದೇವ್ ಉನದ್ಕತ್, ಟೈಮಲ್ ಮಿಲ್ಸ್

ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಪ್ಲೇಯಿಂಗ್ XI: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

Follow Us
TV9 Web
TV9 Web

TV9 Kannada

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!