ಐಪಿಎಲ್ನ 14ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ. 3 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸಿದ್ದರೆ, ಒಂದರಲ್ಲಿ ಸೋಲನುಭವಿಸಬೇಕಾಯಿತು. ಸದ್ಯ ಕೆಕೆಆರ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಈ ಬಾರಿ ಇನ್ನೂ ತನ್ನ ಗೆಲುವಿನ ಖಾತೆಯನ್ನು ತೆರೆದಿಲ್ಲ. ಮುಂಬೈನಲ್ಲಿ ಆಡಿದ ಕೊನೆಯ ಎರಡೂ ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಇಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ ಹಿಟ್ಮ್ಯಾನ್ ಪಡೆ.
ಮತ್ತೊಂದೆಡೆ, ಕೆಕೆಆರ್ ನಂಬರ್ ಒನ್ ಸ್ಥಾನಕ್ಕೆ ಬರಲು ಪ್ರಯತ್ನಿಸಲಿದೆ. ಹೀಗಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕೆಕೆಆರ್ ತಂಡದಲ್ಲಿ ಆಸ್ಟ್ರೇಲಿಯಾ ಬೌಲರ್ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳುವುದು ಖಚಿತ. ಅದೇ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಪಂದ್ಯಕ್ಕೂ ಮುನ್ನವೇ ಸೂರ್ಯಕುಮಾರ್ ಆಯ್ಕೆಗೆ ಲಭ್ಯರಿದ್ದರೂ ಪಂದ್ಯ ಆಡಲು ಸಾಧ್ಯವಾಗಿರಲಿಲ್ಲ.
ಈ ಪಂದ್ಯದಲ್ಲಿ ಮುಂಬೈ ಸೂರ್ಯಕುಮಾರ್ ಯಾದವ್‌ಗೆ ಅವಕಾಶ ನೀಡಿದರೆ ಅನ್ಮೋಲ್‌ಪ್ರೀತ್ ಸಿಂಗ್ ಹೊರಗುಳಿಯಬೇಕಾಗಬಹುದು. ಹಾಗೆಯೇ ಬಾಸಿಲ್ ಥಂಪಿ ಬದಲು ಜಯದೇವ್ ಉನದ್ಕತ್ ಗೆ ಈ ಪಂದ್ಯದಲ್ಲಿ ಅವಕಾಶ ನೀಡಬಹುದು. ಇನ್ನು ಕೆಕೆಆರ್ ತಂಡದಲ್ಲಿ ಕಮಿನ್ಸ್ ಕಾಣಿಸಿಕೊಂಡರೆ ಸ್ಯಾಮ್ ಬಿಲ್ಲಿಂಗ್ಸ್ ಹೊರಗುಳಿಯಬಹುದು.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11:
ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಟಿಮ್ ಡೇವಿಡ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಜಯದೇವ್ ಉನದ್ಕತ್, ಟೈಮಲ್ ಮಿಲ್ಸ್
ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಪ್ಲೇಯಿಂಗ್ XI: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್