MI vs PBKS, IPL 2021: ಗೆಲ್ಲಲೇ ಬೇಕಾದ ಪಂದ್ಯಕ್ಕೆ ಮುಂಬೈ ತಂಡದಲ್ಲಿ ಬದಲಾವಣೆ ಖಚಿತ: ಯಾವ ಆಟಗಾರ ಹೊಸ ಸೇರ್ಪಡೆ?

Mumbai Indians Probable Playing 11: ಪ್ರಮುಖವಾಗಿ ಮಧ್ಯಮ ಕ್ರಮಾಂಕದ ವೈಫಲ್ಯ ರೋಹಿತ್ ಶರ್ಮ ಬಳಗಕ್ಕೆ ದೊಡ್ಡ ತಲೆನೋವಾಗಿದೆ. ಸೂರ್ಯಕುಮಾರ್, ಇಶಾನ್ ಕಿಶನ್, ಕ್ರುನಾಲ್-ಹಾರ್ದಿಕ್ ಪಾಂಡ್ಯ, ಕೀರೊನ್ ಪೊಲಾರ್ಡ್ ಮುಂಬೈ ಮಧ್ಯಮ ಕ್ರಮಾಂಕದಲ್ಲಿ ನಿರೀಕ್ಷಿತ ರನ್ ಗಳಿಸಿಲ್ಲ.

MI vs PBKS, IPL 2021: ಗೆಲ್ಲಲೇ ಬೇಕಾದ ಪಂದ್ಯಕ್ಕೆ ಮುಂಬೈ ತಂಡದಲ್ಲಿ ಬದಲಾವಣೆ ಖಚಿತ: ಯಾವ ಆಟಗಾರ ಹೊಸ ಸೇರ್ಪಡೆ?
MI vs PBKS
Follow us
TV9 Web
| Updated By: Vinay Bhat

Updated on: Sep 28, 2021 | 9:51 AM

ಇಂಡಿಯನ್ ಪ್ರೀಮಿಯರ್ ಲೀಗ್ 2021ರ (IPL 2021) ಇಂದಿನ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಕೆ. ಎಲ್ ರಾಹುಲ್ (KL Rahul) ನೇತೃತ್ವದ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿ ಆಗುತ್ತಿವೆ. ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟು ಕಳಪೆ ಪ್ರದರ್ಶನ ತೋರುತ್ತಿರುವ ಹಾಲಿ ಚಾಂಪಿಯನ್ನರಿಗೆ ಇಂದಿನ ಪಂದ್ಯ ಬಹುಮುಖ್ಯವಾಗಿದೆ. ಆರ್‌ಸಿಬಿ (RCB) ವಿರುದ್ಧ ರವಿವಾರ ರಾತ್ರಿ ಎಡವಿ, ಯುಎಇಯಲ್ಲಿ ಹ್ಯಾಟ್ರಿಕ್‌ ಸೋಲಿಗೆ ತುತ್ತಾದ ಬಳಿಕ ರೋಹಿತ್‌ ತಂಡ 7ನೇ ಸ್ಥಾನಕ್ಕೆ ಜಾರಿದೆ. ಮುಂಬೈ  (Mumbai Indians) ತಂಡದ ದೊಡ್ಡ ಸಮಸ್ಯೆಯೆಂದರೆ ಬ್ಯಾಟಿಂಗ್‌ ವಿಭಾಗದ್ದು. ಮುಖ್ಯವಾಗಿ ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌ ತೀವ್ರ ರನ್‌ ಬರಗಾಲದಲ್ಲಿದ್ದಾರೆ.

ಕಳೆದ ಎರಡೂ ಆವೃತ್ತಿಗಳಲ್ಲಿ ಪ್ರಾಬಲ್ಯ ಮೆರೆದ ಮುಂಬೈ ಇಂಡಿಯನ್ಸ್‌ ತಂಡ ಈ ಬಾರಿ 10 ಲೀಗ್‌ ಪಂದ್ಯಗಳ ಅಂತ್ಯಕ್ಕೆ ಕೇವಲ ನಾಲ್ಕು ಪಂದ್ಯಗಳನ್ನು ಮಾತ್ರವೇ ಗೆದ್ದಿರುವುದು ಬಹಳಾ ಅಚ್ಚರಿಯ ಸಂಗತಿ ಆದರೂ, ಈಗಲೂ ನಾಕ್‌ಔಟ್‌ ಹಂತಕ್ಕೇರುವ ಅತ್ಯುತ್ತಮ ಅವಕಾಶ ಹೊಂದಿದೆ. ಇದಕ್ಕಾಗಿ ಉಳಿದ ಎಲ್ಲ ಪಂದ್ಯ ಗೆಲ್ಲಲೇ ಬೇಕು. ಹೀಗಾಗಿ ಇಂದಿನಜ ಪಂಜಾಬ್ ವಿರುದ್ಧದ ಪಂದ್ಯಕ್ಕೆ ತಂಡದಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ.

ಮುಂಬೈ ತಂಡದಲ್ಲಿ ಸ್ಟಾರ್ ಅನುಭವಿ ಆಟಗಾರರ ದಂಡೇ ಇದ್ದರೂ ಯಾರೊಬ್ಬರೂ ಫಾರ್ಮ್​ನಲ್ಲಿಲ್ಲ. ಇದು ಕೇವಲ ಮುಂಬೈ ತಂಡಕ್ಕೆ ತಲೆನೋವಾಗಿರುವುದು ಮಾತ್ರವಲ್ಲದೆ ಮುಂಬರುವ ಟಿ-20 ವಿಶ್ವಕಪ್ ದೃಷ್ಟಿಯಿಂದ ಟೀಮ್ ಇಂಡಿಯಾಕ್ಕೂ ಹಿನ್ನಡೆಯಾಗಿದೆ. ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳ ಸ್ಕೋರ್ ಎರಡಂಕಿ ದಾಟಲಿಲ್ಲ.

ಪ್ರಮುಖವಾಗಿ ಮಧ್ಯಮ ಕ್ರಮಾಂಕದ ವೈಫಲ್ಯ ರೋಹಿತ್ ಶರ್ಮ ಬಳಗಕ್ಕೆ ದೊಡ್ಡ ತಲೆನೋವಾಗಿದೆ. ಸೂರ್ಯಕುಮಾರ್, ಇಶಾನ್ ಕಿಶನ್, ಕ್ರುನಾಲ್-ಹಾರ್ದಿಕ್ ಪಾಂಡ್ಯ, ಕೀರೊನ್ ಪೊಲಾರ್ಡ್ ಮುಂಬೈ ಮಧ್ಯಮ ಕ್ರಮಾಂಕದಲ್ಲಿ ನಿರೀಕ್ಷಿತ ರನ್ ಗಳಿಸಿಲ್ಲ. ವೇಗಿಗಳಾದ ಜಸ್​ಪ್ರಿತ್ ಬುಮ್ರಾ, ಬೌಲ್ಟ್, ಮಿಲ್ನೆ ಪರಿಣಾಮಕಾರಿ ಎನಿಸಿದ್ದರೂ, ಸ್ಪಿನ್ ಬೌಲಿಂಗ್‌ನಲ್ಲಿ ರಾಹುಲ್ ಚಹರ್-ಕ್ರುನಾಲ್ ಪಾಂಡ್ಯ ನಿರಾಸೆ ಮೂಡಿಸಿದ್ದಾರೆ.

ಓಪನರ್​ಗಳಾಗಿ ರೋಹಿತ್ ಶರ್ಮಾ ಹಾಗೂ ಡಿಕಾಕ್ ಕಣಕ್ಕಿಳಿಯುವುದು ಖಚಿತ. ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್​ಗೆ ಮತ್ತೊಂದು ಅವಕಾಶ ನೀಡಬಹುದು. ಕ್ರುನಾಲ್ ಪಾಂಡ್ಯ ಜಾಗಕ್ಕೆ ಸೌರಭ್ ತಿವಾರಿ ಕಮ್​ಬ್ಯಾಕ್ ಮಾಡುವ ಸಾಧ್ಯತೆ ಇದೆ. ಹಾರ್ದಿಕ್ ಪಾಂಡ್ಯ ಫಿಟ್ ಆಗಿದ್ದರೂ ಫಾರ್ಮ್​ನಲ್ಲಿಲ್ಲ. ಹೀಗಾಗಿ ಮತ್ತೊಬ್ಬ ಹೊಸ ಬ್ಯಾಟರ್ ಅಥವಾ ಬೌಲರ್ ತಂಡ ಸೇರಿಕೊಳ್ಳಬಹುದು. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯಲಿದ್ದಾರೆ.

ಇತ್ತ 2ನೇ ಚರಣದ ಮೊದಲ ಪಂದ್ಯದಲ್ಲಿ ಸೋತರೂ, ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧದ ಕಳೆದ ಪಂದ್ಯದಲ್ಲಿ ಸಾಧಾರಣ ಮೊತ್ತ ರಕ್ಷಿಸಿಕೊಂಡು ಗೆದ್ದ ವಿಶ್ವಾಸದಲ್ಲಿರುವ ಪಂಜಾಬ್ ತಂಡಕ್ಕೂ ಪ್ಲೇಆಫ್ ಅವಕಾಶ ಹೆಚ್ಚಿಸಿಕೊಳ್ಳಲು ಗೆಲುವಿನ ಲಯ ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ. ಹೀಗಾಗಿ ಅಬುಧಾಬಿಯ ಶೇಕ್ ಜಯೇದ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

Sanju Samson: ಧವನ್ ಹಿಂದಿಕ್ಕಿ ಆರೆಂಜ್ ಕ್ಯಾಪ್ ತೊಟ್ಟ ಸಂಜು ಸ್ಯಾಮ್ಸನ್: ಪರ್ಪಲ್ ಕ್ಯಾಪ್, ಪಾಯಿಂಟ್ ಟೇಬಲ್ ಪಟ್ಟಿ ಇಲ್ಲಿದೆ

IPL 2021, MI vs PBKS: ಮುಂಬೈ-ಪಂಜಾಬ್​ಗೆ ಮಾಡು ಇಲ್ಲವೇ ಮಡಿ ಪಂದ್ಯ: ಅಬುಧಾಬಿಯಲ್ಲಿ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷೆ

(MI vs PBKS Mumbai Indians Predicted Playing XI Against Punjab Kings PBKS IPL 2021 Match 42)

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!