AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್; ಎರಡು ತಂಡಗಳಲ್ಲೂ ಒಂದೊಂದು ಬದಲಾವಣೆ

Mumbai Indians vs Punjab Kings Qualifier 2: ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಸಜ್ಜಾಗಿವೆ. ಈ ಪಂದ್ಯ ಫೈನಲ್‌ಗೆ ಪ್ರವೇಶ ಪಡೆಯಲು ನಿರ್ಣಾಯಕವಾಗಿದೆ. ಪಂಜಾಬ್ ಕಿಂಗ್ಸ್ 11 ವರ್ಷಗಳ ನಂತರ ಫೈನಲ್ ತಲುಪಲು ಬಯಸಿದರೆ, ಮುಂಬೈ ಇಂಡಿಯನ್ಸ್ ತಮ್ಮ ಆರನೇ ಪ್ರಶಸ್ತಿಯತ್ತ ಸಾಗುತ್ತಿದೆ. ಪಂದ್ಯದ ಆಡುವ ತಂಡಗಳಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು.

IPL 2025:  ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್; ಎರಡು ತಂಡಗಳಲ್ಲೂ ಒಂದೊಂದು ಬದಲಾವಣೆ
Mi Vs Pbks
ಪೃಥ್ವಿಶಂಕರ
|

Updated on:Jun 01, 2025 | 7:20 PM

Share

ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ (MI vs PBKS) ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಸಜ್ಜಾಗಿವೆ. ಈ ಪಂದ್ಯವನ್ನು ಫೈನಲ್‌ಗೆ ಮುಂಚಿನ ಫೈನಲ್ ಎಂದು ಪರಿಗಣಿಸಲಾಗುತ್ತಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಪಂಜಾಬ್ ಕಿಂಗ್ಸ್ 11 ವರ್ಷಗಳ ನಂತರ ಫೈನಲ್​ಗೇರಲು ಉತ್ಸುಕವಾಗಿದ್ದರೆ, ಮುಂಬೈ ಇಂಡಿಯನ್ಸ್ ತಮ್ಮ ಆರನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಅವರಿಗೆ ಇತಿಹಾಸ ಸೃಷ್ಟಿಸುವ ಸುವರ್ಣಾವಕಾಶ ಸಿಕ್ಕಿದ್ದು, ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವತ್ತ ಒಂದು ಹೆಜ್ಜೆ ಹತ್ತಿರವಾಗುವ ವಿಶ್ವಾಸದಲ್ಲಿದ್ದಾರೆ.

ಟಾಸ್ ಗೆದ್ದ ಪಂಜಾಬ್

ಮುಂಬೈ ಇಂಡಿಯನ್ಸ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಮಹತ್ವದ ಪಂದ್ಯಕ್ಕಾಗಿ ಪಂಜಾಬ್ ಪ್ಲೇಯಿಂಗ್-11 ರಲ್ಲಿ ಒಂದು ಬದಲಾವಣೆ ಮಾಡಿದ್ದು, ಗಾಯದ ಕಾರಣದಿಂದಾಗಿ ಕಳೆದ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಂಡಕ್ಕೆ ಮರಳಿದ್ದಾರೆ. ಇತ್ತ ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಗ್ಲೀಸನ್ ಬದಲಿಗೆ ರೀಸ್ ಟಾಪ್ಲಿಗೆ ಪ್ಲೇಯಿಂಗ್-11 ರಲ್ಲಿ ಅವಕಾಶ ನೀಡಿದೆ. ಗಾಯದ ಕಾರಣದಿಂದಾಗಿ ಗ್ಲೀಸನ್ ಈ ಪಂದ್ಯದಲ್ಲಿ ಆಡುತ್ತಿಲ್ಲ.

ಎರಡೂ ತಂಡಗಳ ಪ್ಲೇಯಿಂಗ್-11

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಾನಿ ಬೈರ್ಸ್ಟೋವ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಜ್ ಬಾವಾ, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ರೀಸ್ ಟೋಪ್ಲಿ.

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜಾಯ್, ಕೈಲ್ ಜೇಮಿಸನ್, ವಿಜಯ್‌ಕುಮಾರ್ ವೈಶಾಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Sun, 1 June 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ