
ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ (MI vs PBKS) ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಸಜ್ಜಾಗಿವೆ. ಈ ಪಂದ್ಯವನ್ನು ಫೈನಲ್‌ಗೆ ಮುಂಚಿನ ಫೈನಲ್ ಎಂದು ಪರಿಗಣಿಸಲಾಗುತ್ತಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಪಂಜಾಬ್ ಕಿಂಗ್ಸ್ 11 ವರ್ಷಗಳ ನಂತರ ಫೈನಲ್ಗೇರಲು ಉತ್ಸುಕವಾಗಿದ್ದರೆ, ಮುಂಬೈ ಇಂಡಿಯನ್ಸ್ ತಮ್ಮ ಆರನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಅವರಿಗೆ ಇತಿಹಾಸ ಸೃಷ್ಟಿಸುವ ಸುವರ್ಣಾವಕಾಶ ಸಿಕ್ಕಿದ್ದು, ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವತ್ತ ಒಂದು ಹೆಜ್ಜೆ ಹತ್ತಿರವಾಗುವ ವಿಶ್ವಾಸದಲ್ಲಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಮಹತ್ವದ ಪಂದ್ಯಕ್ಕಾಗಿ ಪಂಜಾಬ್ ಪ್ಲೇಯಿಂಗ್-11 ರಲ್ಲಿ ಒಂದು ಬದಲಾವಣೆ ಮಾಡಿದ್ದು, ಗಾಯದ ಕಾರಣದಿಂದಾಗಿ ಕಳೆದ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಂಡಕ್ಕೆ ಮರಳಿದ್ದಾರೆ. ಇತ್ತ ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಗ್ಲೀಸನ್ ಬದಲಿಗೆ ರೀಸ್ ಟಾಪ್ಲಿಗೆ ಪ್ಲೇಯಿಂಗ್-11 ರಲ್ಲಿ ಅವಕಾಶ ನೀಡಿದೆ. ಗಾಯದ ಕಾರಣದಿಂದಾಗಿ ಗ್ಲೀಸನ್ ಈ ಪಂದ್ಯದಲ್ಲಿ ಆಡುತ್ತಿಲ್ಲ.
🚨 Toss 🚨@PunjabKingsIPL won the toss and elected to bowl first against @mipaltan in #Qualifier2
Updates ▶️ https://t.co/vIzPVlDqoC#TATAIPL | #PBKSvMI | #TheLastMile pic.twitter.com/l3PcmZvc9Y
— IndianPremierLeague (@IPL) June 1, 2025
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಾನಿ ಬೈರ್ಸ್ಟೋವ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಜ್ ಬಾವಾ, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ರೀಸ್ ಟೋಪ್ಲಿ.
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜಾಯ್, ಕೈಲ್ ಜೇಮಿಸನ್, ವಿಜಯ್‌ಕುಮಾರ್ ವೈಶಾಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:16 pm, Sun, 1 June 25