AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB, IPL 2025: ಟಾಸ್ ಗೆದ್ದ ಮುಂಬೈ: ಬುಮ್ರಾ ಕಣಕ್ಕೆ, ಆರ್​ಸಿಬಿ ಪ್ಲೇಯಿಂಗ್ XI ಇಲ್ಲಿದೆ

Mumbai Indians vs Royal Challengers Bengaluru IPL 2025: ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಉಭಯ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಿದೆ.

MI vs RCB, IPL 2025: ಟಾಸ್ ಗೆದ್ದ ಮುಂಬೈ: ಬುಮ್ರಾ ಕಣಕ್ಕೆ, ಆರ್​ಸಿಬಿ ಪ್ಲೇಯಿಂಗ್ XI ಇಲ್ಲಿದೆ
Mi Vs Rcb Playing Xi
Vinay Bhat
|

Updated on:Apr 07, 2025 | 7:12 PM

Share

ಬೆಂಗಳೂರು (ಏ. 07): ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಇಂದಿನ 10ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ರಜತ್ ಪಾಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Mumbai Indians vs Royal Challengers Bengaluru) ತಂಡ ಮುಖಾಮುಖಿ ಆಗುತ್ತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಜ್ಜಾಗಿದೆ. 2015 ರ ನಂತರ ಮೊದಲ ಬಾರಿಗೆ ಆರ್‌ಸಿಬಿ ಈ ಮೈದಾನದಲ್ಲಿ ಗೆಲ್ಲಲು ಎದುರು ನೋಡುತ್ತಿದೆ. ಬ್ಯಾಟ್ಸ್‌ಮನ್‌ಗಳ ಸ್ವರ್ಗವಾಗಿರುವ ಈ ಪಿಚ್​ನಲ್ಲಿ ರನ್ ಮಳೆ ಹರಿಯುವ ನಿರೀಕ್ಷೆ ಇದೆ.

ಈಗಾಗಲೇ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಉಭಯ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಿದೆ. ಐಪಿಎಲ್ 2025 ರ ಮೊದಲ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತು ಕಳಪೆ ಫಾರ್ಮ್‌ನಲ್ಲಿರುವ ಮುಂಬೈಗೆ ಜಸ್​ಪ್ರಿತ್ ಬುಮ್ರಾ ಬಂದಿರುವುದು ಬಲ ಹೆಚ್ಚಿಸಿದೆ.

ಹಾಗೆಯೆ ಕಳೆದ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಈ ಪಂದ್ಯಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ. ಉಳಿದಂತೆ ವಿಲ್ ಜ್ಯಾಕ್ಸ್, ವಿಕೆಟ್ ಕೀಪರ್ ರಯಾನ್ ರಿಕಲ್ಟನ್ ಸ್ಥಾನ ಪಡೆದಿದ್ದಾರೆ. ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನಮನ್ ಧೀರ್ ಕೂಡ ಆಡುವ ಬಳಗದಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ವಿಘ್ನೇಶ್ ಪುತ್ತೂರ್, ಟ್ರೆಂಟ್ ಬೌಲ್ಟ್ ಬೌಲಿಂಗ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಪಾಕ್ ತಂಡದ ಎಲ್ಲಾ ಆಟಗಾರರಿಗೆ ದಂಡ ವಿಧಿಸಿದ ಐಸಿಸಿ
Image
ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಆರ್​ಸಿಬಿ
Image
ಇಂಗ್ಲೆಂಡ್‌ ಏಕದಿನ ಮತ್ತು ಟಿ20 ತಂಡಕ್ಕೆ ನೂತನ ನಾಯಕನ ನೇಮಕ
Image
IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

ಇತ್ತ ಆರ್​ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಗುಜರಾತ್ ವಿರುದ್ಧ ಸೋತ ತಂಡವನ್ನೇ ಕಣಕ್ಕಿಳಿಸಲಾಗಿದೆ. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಓಪನರ್​ಗಳಾದರೆ ದೇವದತ್ ಪಡಿಕ್ಕಲ್ ಮೂರನೇ ಸ್ಥಾನದಲ್ಲಿ ಆಡಲಿದ್ದಾರೆ. ನಾಯಕ ರಜತ್ ಪಾಟಿದಾರ್ ನಂತರದ ಕ್ರಮಾಂಕದಲ್ಲಿ ಬರಲಿದ್ದಾರೆ. ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ ಕೂಡ ಇದ್ದಾರೆ. ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್ ಹಾಗೂ ಯಶ್ ದಯಾಲ್ ಪ್ರಮುಖ ವೇಗಿಗಳಾಗಿದ್ದಾರೆ.

MI vs RCB Live Score, IPL 2025: ಆರ್​ಸಿಬಿ- ಮುಂಬೈ ನಡುವೆ ಹೈವೋಲ್ಟೇಜ್ ಕದನ

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ವಿಲ್ ಜ್ಯಾಕ್ಸ್, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನಮನ್ ಧೀರ್, ಜಸ್ಪ್ರೀತ್ ಬುಮ್ರಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ವಿಘ್ನೇಶ್ ಪುತ್ತೂರ್, ಟ್ರೆಂಟ್ ಬೌಲ್ಟ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ರಜತ್ ಪಾಟಿದಾರ್ (ನಾಯಕ), ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Mon, 7 April 25

ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ