ಐಪಿಎಲ್ 2024 ರ 25 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್‌ಗಳಿಂದ ಏಕಪಕ್ಷೀಯ ರೀತಿಯಲ್ಲಿ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 20 ಓವರ್‌ಗಳಲ್ಲಿ 196 ರನ್ ಗಳಿಸಿತು, ಉತ್ತರವಾಗಿ ಮುಂಬೈ ಇಂಡಿಯನ್ಸ್ ಕೇವಲ 15.3 ಓವರ್‌ಗಳಲ್ಲಿ ಅಂದರೆ ಬರೋಬ್ಬರಿ 27 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು. ಮುಂಬೈ ಪರ ಇಶಾನ್ ಕಿಶನ್ ಗರಿಷ್ಠ 69 ರನ್ ಗಳಿಸಿದರು. ಕಿಶನ್ ಅವರ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್ ಮತ್ತು 7 ಬೌಂಡರಿಗಳಿದ್ದವು. ಸೂರ್ಯಕುಮಾರ್ ಯಾದವ್ ಕೂಡ 19 ಎಸೆತಗಳಲ್ಲಿ 52 ರನ್ ಗಳಿಸಿದರು. ರೋಹಿತ್ ಶರ್ಮಾ 38 ರನ್ ಕೊಡುಗೆ ನೀಡಿದರೆ, ನಾಯಕ ಹಾರ್ದಿಕ್ ಪಾಂಡ್ಯ ಔಟಾಗದೆ 21 ಮತ್ತು ತಿಲಕ್ ವರ್ಮಾ 6 ಎಸೆತಗಳಲ್ಲಿ 16 ರನ್ ಗಳಿಸಿದರು.
ಆರ್ಸಿಬಿ ನೀಡಿದ 197 ರನ್‌ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ ಕೇವಲ 15.3 ಓವರ್‌ಗಳಲ್ಲಿ ಬೆನ್ನಟ್ಟಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಅದ್ಭುತ ಬ್ಯಾಟಿಂಗ್ ನಡೆಸಿದರು. ಹಾರ್ದಿಕ್ ಪಾಂಡ್ಯ ಸಿಕ್ಸರ್ ಬಾರಿಸುವ ಮೂಲಕ ಮುಂಬೈಗೆ ಜಯ ತಂದುಕೊಟ್ಟರು.
ಸೂರ್ಯಕುಮಾರ್ ಯಾದವ್ ಅರ್ಧಶತಕ ಗಳಿಸಿ ಪೆವಿಲಿಯನ್‌ಗೆ ಮರಳಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ 14 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದೆ. ತಂಡದ ಗೆಲುವಿಗೆ 31 ಎಸೆತಗಳಲ್ಲಿ 10 ರನ್‌ಗಳ ಅಗತ್ಯವಿದೆ.
ಸಿಡಿಲಬ್ಬರದ ಬ್ಯಾಟಿಂಗ್ ಮಾಡುತ್ತಿರುವ ಸೂರ್ಯ ಕೇವಲ 17 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಮುಂಬೈ ಗೆಲುವಿಗೆ 28 ರನ್ ಬೇಕು
ರೋಹಿತ್ ಶರ್ಮಾ ರೂಪದಲ್ಲಿ ಮುಂಬೈ ಎರಡನೇ ವಿಕೆಟ್ ಕಳೆದುಕೊಂಡಿದೆ. ಹಿಟ್‌ಮ್ಯಾನ್ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ನೆರವಿನಿಂದ 38 ರನ್ ಗಳಿಸಿದರು. ನಾಯಕ ಹಾರ್ದಿಕ್ ಪಾಂಡ್ಯ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಇದೇ ವೇಳೆ ಅವರಿಗೆ ಬೆಂಬಲ ನೀಡಲು ಸೂರ್ಯಕುಮಾರ್ ಯಾದವ್ ಮುಂದಾಗಿದ್ದಾರೆ. 12 ಓವರ್‌ಗಳ ನಂತರ ತಂಡದ ಸ್ಕೋರ್ 151/2.
101 ರನ್ ಗಳಿಸಿದ್ದಾಗ ಮುಂಬೈ ತನ್ನ ಮೊದಲ ವಿಕೆಟ್ ಕಳೆದುಕೊಂಡಿದೆ. ಇಶಾನ್ ಕಿಶನ್ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿ ಔಟಾಗಿದ್ದಾರೆ. ಕಿಶನ್ 34 ಎಸೆತಗಳಲ್ಲಿ 69 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಸದ್ಯ ರೋಹಿತ್ ಶರ್ಮಾ 19 ಎಸೆತಗಳಲ್ಲಿ 29 ರನ್ ಹಾಗೂ ಸೂರ್ಯಕುಮಾರ್ ಯಾದವ್ ಒಂದು ಎಸೆತದಲ್ಲಿ ಎರಡು ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಒಂಬತ್ತು ಓವರ್‌ಗಳ ನಂತರ ತಂಡದ ಸ್ಕೋರ್ 103/1.
ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ 98 ರನ್‌ಗಳ ಅತ್ಯುತ್ತಮ ಜೊತೆಯಾಟದೊಂದಿಗೆ ಆಡುತ್ತಿದ್ದಾರೆ. ಈ ಪಂದ್ಯದಲ್ಲಿ ಪುನರಾಗಮನ ಮಾಡಲು ಆರ್‌ಸಿಬಿ ವಿಕೆಟ್‌ಗಳ ನಿರೀಕ್ಷೆಯಲ್ಲಿದೆ. 8 ಓವರ್‌ಗಳ ನಂತರ ತಂಡದ ಸ್ಕೋರ್ 98 ರನ್ ಆಗಿದೆ.
ಮುಂಬೈ ಇಂಡಿಯನ್ಸ್‌ನ ಆರಂಭಿಕ ಜೋಡಿ ಉತ್ತಮ ಪ್ರದರ್ಶನ ತೋರುತ್ತಿದೆ. ಇಶಾನ್ ಕಿಶನ್ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಪವರ್‌ಪ್ಲೇ ಮುಗಿದಿದ್ದು, ತಂಡದ ಸ್ಕೋರ್ ಯಾವುದೇ ನಷ್ಟವಿಲ್ಲದೆ 72 ರನ್‌ಗಳಿಗೆ ತಲುಪಿದೆ.
ಮುಂಬೈ ಶುಭಾರಂಭ ಮಾಡಿದೆ. ನಾಲ್ಕು ಓವರ್‌ಗಳ ಅಂತ್ಯಕ್ಕೆ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ನಡುವೆ 32 ರನ್‌ಗಳ ಜೊತೆಯಾಟವಿದೆ. ಇಶಾನ್ ಕಿಶನ್ 16 ಎಸೆತಗಳಲ್ಲಿ 22 ರನ್ ಹಾಗೂ ರೋಹಿತ್ ಎಂಟು ಎಸೆತಗಳಲ್ಲಿ ಎಂಟು ರನ್ ಗಳಿಸಿ ಅಜೇಯರಾಗಿ ಆಡುತ್ತಿದ್ದಾರೆ.
ಮುಂಬೈ ವಿರುದ್ಧ ಆರ್‌ಸಿಬಿ 20 ಓವರ್‌ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 196 ರನ್ ಗಳಿಸಿ 197 ರನ್‌ಗಳ ಗುರಿ ನೀಡಿದೆ. ಆರ್ಸಿಬಿ ಪರ ಕೊನೆಯಲ್ಲಿ ಮಿಂಚಿದ ದಿನೇಶ್ ಕಾರ್ತಿಕ್ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.
ಈ ಪಂದ್ಯದಲ್ಲಿ ಬುಮ್ರಾ ವಿಧ್ವಂಸಕ ಪ್ರದರ್ಶನ ತೋರಿದ್ದು, ಆರ್ಸಿಬಿ ಪರ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಬುಮ್ರಾ ತಮ್ಮ ನಾಲ್ಕನೇ ಓವರ್‌ನ ನಾಲ್ಕನೇ ಎಸೆತದಲ್ಲಿ ವಿಜಯ್‌ಕುಮಾರ್ ವಿಶಾಕ್ ಅವರನ್ನು ಔಟ್ ಮಾಡುವ ಮೂಲಕ 5 ವಿಕೆಟ್‌ಗಳ ಗೊಂಚಲು ಪೂರ್ಣಗೊಳಿಸಿದರು.
ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ 61 ರನ್ ಗಳಿಸಿ ಔಟಾದರೆ, ಈ ಓವರ್‌ನ ಐದನೇ ಎಸೆತದಲ್ಲಿ ಬುಮ್ರಾ, ಮಹಿಪಾಲ್ ಲೊಮ್ರೋರ್ ಅವರನ್ನು ಎಲ್‌ಬಿಡಬ್ಲ್ಯೂ ಆಗಿ ಔಟ್ ಮಾಡಿದರು. ಲೊಮ್ರೋರ್ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು.
ಆರ್ಸಿಬಿ ತಂಡ 16 ಓವರ್‌ಗಳಲ್ಲಿ 149 ರನ್ ಗಳಿಸಿದೆ. ದಿನೇಶ್ ಕಾರ್ತಿಕ್ 22 ರನ್ ಮತ್ತು ಫಾಫ್ ಡು ಪ್ಲೆಸಿಸ್ 59 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ರಜತ್ ಪಾಟಿದಾರ್ ವಿಕೆಟ್ ಒಪ್ಪಿಸಿದ್ದಾರೆ. ಇದಾದ ಬಳಿಕ ಗ್ಲೆನ್ ಮ್ಯಾಕ್ಸ್ ವೆಲ್ ಕೂಡ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು.
ಎಂಟು ಓವರ್‌ಗಳ ಆಟ ಪೂರ್ಣಗೊಂಡಿದ್ದು, ತಂಡ ಎರಡು ವಿಕೆಟ್ ಕಳೆದುಕೊಂಡು 67 ರನ್ ಗಳಿಸಿದೆ. ಸದ್ಯ ಫಾಫ್ ಡುಪ್ಲೆಸಿಸ್ ಮತ್ತು ರಜತ್ ಪಾಟಿದಾರ್ ಕ್ರೀಸ್‌ನಲ್ಲಿದ್ದಾರೆ. ಇಬ್ಬರ ನಡುವೆ ಉತ್ತಮ ಪಾಲುದಾರಿಕೆ ಅರಳುತ್ತಿದೆ.
ಪವರ್‌ಪ್ಲೇ ಮುಗಿದಿದೆ. ಆರ್ಸಿಬಿ ಎರಡು ವಿಕೆಟ್ ಕಳೆದುಕೊಂಡು ಕೇವಲ 44 ರನ್ ಗಳಿಸಿದೆ. ಸದ್ಯ ನಾಯಕ ಡುಪ್ಲೆಸಿಸ್ ಮತ್ತು ರಜತ್ ಪಾಟಿದಾರ್ ಕ್ರೀಸ್‌ನಲ್ಲಿದ್ದಾರೆ.
ಆರ್ಸಿಬಿ ಪರ ಈ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ವಿಲ್ ಜಾಕ್ವೆಸ್ ಎಂಟು ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ನಾಲ್ಕನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಆಕಾಶ್ ಮಧ್ವಲ್ ಅವರನ್ನು ಬಲಿತೆಗೆದುಕೊಂಡರು. ಆರ್‌ಸಿಬಿಗೆ ಇದು ಎರಡನೇ ಹಿನ್ನಡೆಯಾಗಿದೆ.
ಮುಂಬೈನ ಮಾರಕ ಬೌಲರ್ ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ವಿರಾಟ್ ಕೊಹ್ಲಿ ಕೇವಲ ಮೂರು ರನ್ ಗಳಿಸಲಷ್ಟೇ ಶಕ್ತರಾಗಿ ಕೀಪರ್ ಕೈಗೆ ಕ್ಯಾಚಿತ್ತು ಔಟಾದರು. ವಿಲ್ ಜಾಕ್ವೆಸ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಮೂರು ಓವರ್‌ಗಳ ನಂತರ ತಂಡದ ಸ್ಕೋರ್ 18/1.
ಮುಂಬೈ ವಿರುದ್ಧ ಬೆಂಗಳೂರಿನ ಇನ್ನಿಂಗ್ಸ್ ಆರಂಭವಾಗಿದೆ. ಆರಂಭಿಕರಾಗಿ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಕ್ರೀಸ್‌ನಲ್ಲಿದ್ದಾರೆ. ಮೊಹಮ್ಮದ್ ನಬಿ ಇನಿಂಗ್ಸ್‌ನ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್‌ನಲ್ಲಿ ಆರ್‌ಸಿಬಿ ಏಳು ರನ್ ಗಳಿಸಿತು.
ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಟ್ಜಿ, ಆಕಾಶ್ ಮಧ್ವಾಲ್.
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ರೀಸ್ ಟೋಪ್ಲಿ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಎರಡು ತಂಡಗಳ ನಡುವೆ 32 ಪಂದ್ಯಗಳು ನಡೆದಿವೆ, ಅದರಲ್ಲಿ ಮುಂಬೈ 18 ಪಂದ್ಯಗಳನ್ನು ಗೆದ್ದಿದ್ದರೆ ಬೆಂಗಳೂರು 14 ಪಂದ್ಯಗಳನ್ನು ಗೆದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಇದುವರೆಗೆ ನಡೆದ ಪಂದ್ಯಗಳ ಬಗ್ಗೆ ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ 10 ಪಂದ್ಯಗಳು ನಡೆದಿದ್ದು, ಅದರಲ್ಲಿ 7 ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ಮತ್ತು 3 ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ.
Published On - 6:45 pm, Thu, 11 April 24