MI vs SRH Highlights, IPL 2024: ಗೆಲುವಿಗಾಗಿ ಹೋರಾಟ ನೀಡಿ ಸೋತ ಮುಂಬೈ
Mumbai Indians vs Sunrisers Hyderabad Highlights in Kannada: ಈ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಮೊದಲ ಗೆಲುವಿಗಾಗಿ ನೀಡಿದ ಹೋರಾಟ ಅಮೋಘವಾಗಿತ್ತು. ಅಂತಿಮವಾಗಿ ಹೈದರಾಬಾದ್ ತಂಡ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವ 31 ರನ್‌ಗಳಿಂದ ಸೋಲಿಸುವ ಮೂಲಕ ಲೀಗ್ನ ಮೊದಲ ಗೆಲುವು ದಾಖಲಿಸಿತು.

ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವನ್ನೇ ನೀಡಿದೆ. ಈ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಮೊದಲ ಗೆಲುವಿಗಾಗಿ ನೀಡಿದ ಹೋರಾಟ ಅಮೋಘವಾಗಿತ್ತು. ಅಂತಿಮವಾಗಿ ಹೈದರಾಬಾದ್ ತಂಡ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವ 31 ರನ್‌ಗಳಿಂದ ಸೋಲಿಸುವ ಮೂಲಕ ಲೀಗ್ನ ಮೊದಲ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 277 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 246 ರನ್ ಗಳಿಸಲಷ್ಟೇ ಶಕ್ತವಾಯಿತು.
LIVE NEWS & UPDATES
-
ಹೈದರಾಬಾದ್‌ಗೆ 31 ರನ್ ಗೆಲುವು
ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ 31 ರನ್‌ಗಳ ಜಯ ಸಾಧಿಸಿದೆ. ಐಪಿಎಲ್ 2024 ರಲ್ಲಿ ಹೈದರಾಬಾದ್‌ನ ಮೊದಲ ಗೆಲುವು ಇದಾಗಿದ್ದು, ಈ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು.
-
ಹಾರ್ದಿಕ್ ಪಾಂಡ್ಯ ಔಟ್
ಜಯದೇವ್ ಉನದ್ಕತ್ 18ನೇ ಓವರ್‌ನ ಕೊನೆಯ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಕ್ಯಾಚಿತ್ತು ಔಟಾದರು. ನಾಯಕ 20 ಎಸೆತಗಳಲ್ಲಿ 24 ರನ್ ಗಳಿಸಲಷ್ಟೇ ಶಕ್ತರಾದರು. ಸದ್ಯ ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಕ್ರೀಸ್‌ನಲ್ಲಿದ್ದಾರೆ. ತಂಡದ ಗೆಲುವಿಗೆ ಎಂಟು ಎಸೆತಗಳಲ್ಲಿ 50 ರನ್‌ಗಳ ಅಗತ್ಯವಿದೆ.
-
-
ನಾಲ್ಕನೇ ವಿಕೆಟ್ ಪತನ
34 ಎಸೆತಗಳಲ್ಲಿ 64 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದ ತಿಲಕ್ ವರ್ಮಾ ರೂಪದಲ್ಲಿ ಮುಂಬೈ ಇಂಡಿಯನ್ಸ್ ನಾಲ್ಕನೇ ವಿಕೆಟ್ ಕಳೆದುಕೊಂಡಿದೆ. 15ನೇ ಓವರ್‌ನ ಮೊದಲ ಎಸೆತದಲ್ಲಿ ಪ್ಯಾಟ್ ಕಮಿನ್ಸ್ ಅವರನ್ನು ಬಲಿಪಶು ಮಾಡಿದರು. 15 ಓವರ್‌ಗಳ ನಂತರ ತಂಡದ ಸ್ಕೋರ್ 185/4.
-
ನಮನ್ ಧೀರ್ ಔಟ್
ನಮನ್ ಧೀರ್ ವಿಕೆಟ್‌ನಿಂದ ಮುಂಬೈ ಇಂಡಿಯನ್ಸ್ ಆಘಾತ ಅನುಭವಿಸಿದೆ. ಇದು ತಂಡದ ಮೂರನೇ ವಿಕೆಟ್ ಆಗಿದೆ. ಈ ಪಂದ್ಯದಲ್ಲಿ ಅವರು 14 ಎಸೆತಗಳಲ್ಲಿ 30 ರನ್ ಗಳಿಸಿದರು.
-
ಶತಕ ಪೂರ್ಣ
ಮುಂಬೈ ಇಂಡಿಯನ್ಸ್ ತಂಡ 8ನೇ ಓವರ್‌ನಲ್ಲಿ 100 ರನ್ ಗಡಿ ದಾಟಿದೆ. ತಂಡ 278 ರನ್‌ಗಳ ಗುರಿ ಬೆನ್ನತ್ತಿದೆ. ಈ ವೇಳೆ ತಿಲಕ್ ವರ್ಮಾ ಮತ್ತು ನಮನ್ ಧೀರ್ ಮುಂಬೈ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
-
-
ರೋಹಿತ್ ಶರ್ಮಾ ಔಟ್
ರೋಹಿತ್ ಶರ್ಮಾ ವಿಕೆಟ್ ಕಳೆದುಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ರೋಹಿತ್ ಶರ್ಮಾ ಕೂಡ ವೇಗವಾಗಿ ಸ್ಕೋರ್ ಮಾಡುತ್ತಿದ್ದರು, ಅವರನ್ನು ಪ್ಯಾಟ್ ಕಮಿನ್ಸ್ ಔಟ್ ಮಾಡಿದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 12 ಎಸೆತಗಳಲ್ಲಿ 26 ರನ್ ಗಳಿಸಿದರು. ತಂಡದ ಸ್ಕೋರ್ 66/2
-
ಕಿಶನ್ ಔಟ್
ಮುಂಬೈ ಇಂಡಿಯನ್ಸ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಈ ರನ್ ಚೇಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದ ಇಶಾನ್ ಕಿಶನ್ ಔಟಾಗಿದ್ದಾರೆ. ಈ ಪಂದ್ಯದಲ್ಲಿ ಇಶಾನ್ ಕೇವಲ 13 ಎಸೆತಗಳಲ್ಲಿ 34 ರನ್ ಗಳಿಸಿದರು.
-
ಮುಂಬೈಗೆ 278 ರನ್ ಟಾರ್ಗೆಟ್
ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ಸ್ಕೋರ್ ಮಾಡಿದೆ. ಐಪಿಎಲ್‌ನ ಐದನೇ ಪಂದ್ಯದಲ್ಲಿ ಹೈದರಾಬಾದ್‌ನ ಬ್ಯಾಟ್ಸ್‌ಮನ್‌ಗಳು ಆಕ್ರಮಣಕಾರಿ ಪ್ರದರ್ಶನ ನೀಡಿ 20 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 277 ರನ್ ಗಳಿಸಿದರು. ಹೈದರಾಬಾದ್ ಪರ ಟ್ರಾವಿಸ್ ಹೆಡ್ 62, ಅಭಿಷೇಕ್ ಶರ್ಮಾ 63, ಏಡನ್ ಮಾರ್ಕ್ರಾಮ್ 42 ಮತ್ತು ಹೆನ್ರಿಚ್ ಕ್ಲಾಸೆನ್ 80 ರನ್ ಗಳಿಸಿದರು. ಈ ಪಂದ್ಯದಲ್ಲಿ ಮಾರ್ಕ್ರಾಮ್ ಮತ್ತು ಕ್ಲಾಸೆನ್ ಅಜೇಯರಾಗಿ ಉಳಿದರು.
-
ಕ್ಲಾಸೆನ್ ಅರ್ಧಶತಕ
ಹೆನ್ರಿಕ್ ಕ್ಲಾಸೆನ್ ಕೂಡ ಮುಂಬೈ ಇಂಡಿಯನ್ಸ್ ವಿರುದ್ಧ ವೇಗದ ಅರ್ಧಶತಕ ಪೂರೈಸಿದ್ದಾರೆ. ಈ ಇನ್ನಿಂಗ್ಸ್‌ನೊಂದಿಗೆ ಕ್ಲಾಸೆನ್ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಕ್ಲಾಸೆನ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 18 ಓವರ್‌ಗಳ ನಂತರ SRH ಸ್ಕೋರ್ 243/3
-
ಅಭಿಷೇಕ್ ಔಟ್
ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಅಭಿಷೇಕ್, ಪಿಯೂಷ್ ಚಾವ್ಲಾ ಎಸೆತದಲ್ಲಿ ಔಟಾದರು. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 23 ಎಸೆತಗಳಲ್ಲಿ 63 ರನ್ ಗಳಿಸಿದರು. 11 ಓವರ್‌ಗಳ ನಂತರ ತಂಡದ ಸ್ಕೋರ್ 161/3
-
ಅಭಿಷೇಕ್ ಅರ್ಧಶತಕ
ಅಭಿಷೇಕ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದು, ಟ್ರಾವಿಸ್ ಹೆಡ್ ಔಟಾದ ನಂತರ ತಂಡದ ಇನ್ನಿಂಗ್ಸ್ ಅನ್ನು ವಹಿಸಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ.
-
ಟ್ರಾವಿಸ್ ಹೆಡ್ ಔಟ್
ಟ್ರಾವಿಸ್ ಹೆಡ್ ರೂಪದಲ್ಲಿ ಹೈದರಾಬಾದ್‌ಗೆ ಎರಡನೇ ಹೊಡೆತ ಬಿದ್ದಿದೆ. ಎಂಟನೇ ಓವರ್‌ನ ಐದನೇ ಎಸೆತದಲ್ಲಿ ಆಸ್ಟ್ರೇಲಿಯದ ಬ್ಯಾಟ್ಸ್‌ಮನ್‌ಗೆ ನಮನ್ ಧೀರ್ ಕ್ಯಾಚ್ ನೀಡಿದರು. ಹೆಡ್ 24 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳ ನೆರವಿನಿಂದ 62 ರನ್ ಗಳಿಸಿದರು.
-
18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಟ್ರಾವಿಸ್ ಹೆಡ್
ಮುಂಬೈನ ಬೌಲಿಂಗ್ ದಾಳಿಯ ವಿರುದ್ಧ ಟ್ರಾವಿಸ್ ಹೆಡ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡುತ್ತಿದ್ದು, ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ.ಆರು ಓವರ್‌ಗಳ ನಂತರ ತಂಡದ ಸ್ಕೋರ್ 81/1.
-
ಟ್ರಾವಿಸ್ ಹೆಡ್ ಸಿಡಿಲಬ್ಬರ
ಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಟ್ರಾವಿಸ್ ಹೆಡ್ ಬಲಿಷ್ಠ ಆರಂಭ ನೀಡಿದ್ದಾರೆ. ಮೂರು ಓವರ್‌ಗಳ ನಂತರ ತಂಡದ ಸ್ಕೋರ್ 40/0. ಇನಿಂಗ್ಸ್‌ನ ನಾಲ್ಕನೇ ಓವರ್ ಬೌಲ್ ಮಾಡಲು ಜಸ್ಪ್ರೀತ್ ಬುಮ್ರಾ ಬಂದಿದ್ದಾರೆ.
-
ಹೈದರಾಬಾದ್ ಬ್ಯಾಟಿಂಗ್ ಆರಂಭ
ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಶುರುವಾಗಿದೆ. ತಂಡದ ಆರಂಭಿಕ ಜೋಡಿ ಮಯಾಂಕ್ ಅಗರ್ವಾಲ್ ಮತ್ತು ಟ್ರಾವಿಸ್ ಹೆಡ್ ಕ್ರೀಸ್‌ನಲ್ಲಿದ್ದಾರೆ.
-
ಮುಂಬೈ ಇಂಡಿಯನ್ಸ್
ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಜೆರಾಲ್ಡ್ ಕೋಟ್ಜಿ, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ಕ್ವೇನಾ ಮಫಕಾ.
ಇಂಪ್ಯಾಕ್ಟ್ ಪ್ಲೇಯರ್: ಡೆವಾಲ್ಡ್ ಬ್ರೂವಿಸ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ವಿಷ್ಣು ವಿನೋದ್, ನೆಹಾಲ್ ವಧೇರಾ.
-
ಸನ್‌ರೈಸರ್ಸ್ ಹೈದರಾಬಾದ್
ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್.
ಇಂಪ್ಯಾಕ್ಟ್ ಪ್ಲೇಯರ್: ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್.
-
ಟಾಸ್ ಗೆದ್ದ ಮುಂಬೈ
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
Published On - Mar 27,2024 7:01 PM
