ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ವಿರುದ್ಧದ ಪಂದ್ಯವನ್ನು 7 ವಿಕೆಟ್ಗಳಿಂದ ಗೆದ್ದುಕೊಳ್ಳುವಲ್ಲಿ ಮುಂಬೈ ತಂಡ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ಮುಂಬೈ ಪಾಯಿಂಟ್ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿ 9ನೇ ಸ್ಥಾನಕ್ಕೆ ಬಂದು ಕುಳಿತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ಮುಂಬೈನ ಕರಾರುವಕ್ಕಾದ ದಾಳಿಗೆ ನಲುಗಿ 173 ರನ್ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿತು. ಈ ಗುರಿ ಬೆನ್ನಟ್ಟಿದ ಮುಂಬೈ ಆರಂಭದಲ್ಲೇ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಇಲ್ಲಿಂದ ಜೊತೆಯಾದ ತಿಲಕ್ ವರ್ಮಾ ಹಾಗೂ ಸೂರ್ಯಕುಮಾರ್ ಯಾದವ್ 143 ರನ್‌ಗಳ ಜೊತೆಯಾಟ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಹಂತದಲ್ಲಿ ಸೂರ್ಯಕುಮಾರ್ ಶತಕ ಸಿಡಿಸಿ ಮಿಂಚಿದರೆ, ತಿಲಕ್ 37 ರನ್‌ಗಳ ಕೊಡುಗೆ ನೀಡಿದರು.
ಹೈದರಾಬಾದ್ ನೀಡಿದ 173 ರನ್‌ಗಳ ಗುರಿಯನ್ನು ಮುಂಬೈ 17.2 ಓವರ್‌ಗಳಲ್ಲಿ ಬೆನ್ನಟ್ಟಿತು. ತಂಡದ ಪರ ಸೂರ್ಯ ಶತಕ ಸಿಡಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.
ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಮೂಲಕ ಇಲ್ಲಿಯವರೆಗೆ 76 ರನ್ ಗಳಿಸಿದ್ದಾರೆ. 15 ಓವರ್‌ಗಳಲ್ಲಿ ಮುಂಬೈ ತಂಡ 139 ರನ್ ಗಳಿಸಿದೆ.
ಸೂರ್ಯಕುಮಾರ್ ಯಾದವ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದು, ಅರ್ಧಶತಕ ಪೂರೈಸಿರುವ ಅವರು 52 ರನ್ ಗಳಿಸಿ ಆಡುತ್ತಿದ್ದಾರೆ.
31 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡಿದ್ದ ಮುಂಬೈಗೆ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಆಸರೆಯಾಗಿದ್ದಾರೆ. ಇವರಿಬ್ಬರ ನಡುವೆ 23 ಎಸೆತಗಳಲ್ಲಿ 48 ರನ್‌ಗಳ ಜೊತೆಯಾಟವಿದೆ. ಸೂರ್ಯ 32 ರನ್ ಹಾಗೂ ತಿಲಕ್ 15 ರನ್ ಗಳಿಸಿ ಅಜೇಯರಾಗಿ ಆಡುತ್ತಿದ್ದಾರೆ. ಎಂಟು ಓವರ್‌ಗಳ ನಂತರ ತಂಡದ ಸ್ಕೋರ್ 79/3. ತಂಡದ ಗೆಲುವಿಗೆ 72 ಎಸೆತಗಳಲ್ಲಿ 95 ರನ್‌ಗಳ ಅಗತ್ಯವಿದೆ.
6 ಓವರ್‌ಗಳಲ್ಲಿ ಮುಂಬೈ ಇಂಡಿಯನ್ಸ್ 3 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿದೆ. ತಿಲಕ್ ವರ್ಮಾ 9 ರನ್ ಮತ್ತು ಸೂರ್ಯಕುಮಾರ್ ಯಾದವ್ 11 ರನ್ ಗಳಿಸಿದ್ದಾರೆ.
ಭುವನೇಶ್ವರ್ ಕುಮಾರ್ ನಮನ್ ಧೀರ್ ಅವರ ವಿಕೆಟ್ ಉರುಳಿಸಿದ್ದಾರೆ. ನಮನ್ ಧೀರ್ ಅವರ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.
ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ರೋಹಿತ್ ಶರ್ಮಾ ಹೆನ್ರಿಚ್ ಕ್ಲಾಸೆನ್ಗೆ ಕ್ಯಾಚಿತ್ತು ನಿರ್ಗಮಿಸಿದರು.
ಇಶಾನ್ ಕಿಶನ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ 9 ರನ್ ಗಳಿಸಲಷ್ಟೇ ಶಕ್ತರಾದರು. ಮುಂಬೈ ಇಂಡಿಯನ್ಸ್ 3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 31 ರನ್ ಗಳಿಸಿದೆ. ರೋಹಿತ್ ಶರ್ಮಾ 4 ರನ್ ಮತ್ತು ನಮನ್ ಧೀರ್ ಕ್ರೀಸ್‌ನಲ್ಲಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು. ಮುಂಬೈ ಪರ ಹಾರ್ದಿಕ್ ಪಾಂಡ್ಯ ಮತ್ತು ಪಿಯೂಷ್ ಚಾವ್ಲಾ ತಲಾ ಮೂರು ವಿಕೆಟ್ ಪಡೆದರು. ಆದರೆ, ಅನ್ಶುಲ್ ಕಾಂಬೋಜ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದರು.
ಹಾರ್ದಿಕ್ ಪಾಂಡ್ಯ ಒಂದೇ ಓವರ್‌ನಲ್ಲಿ ಎರಡು ವಿಕೆಟ್ ಪಡೆದರು. ಅವರು ಶಹಬಾಜ್ ಅಹ್ಮದ್ ಮತ್ತು ಮಾರ್ಕೊ ಯಾನ್ಸನ್ ಅವರ ವಿಕೆಟ್ ಪಡೆದರು. ಹೈದರಾಬಾದ್ 16 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿದೆ.
ಸನ್ ರೈಸರ್ಸ್ ಹೈದರಾಬಾದ್ ಆರನೇ ವಿಕೆಟ್ ಕಳೆದುಕೊಂಡಿದೆ. ಶಹಬಾಜ್ ಅಹ್ಮದ್ ಕೇವಲ 10 ರನ್ಗಳಿಗೆ ವಿಕೆಟ್ ಮುಗಿಸಿದ್ದಾರೆ. ಅಬ್ದುಲ್ ಸಮದ್ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ.
12ನೇ ಓವರ್‌ನಲ್ಲಿ ಹೈದರಾಬಾದ್ ನಾಲ್ಕನೇ ವಿಕೆಟ್ ಕಳೆದುಕೊಂಡಿದೆ. ಹಾರ್ದಿಕ್ ಪಾಂಡ್ಯ ನಿತೀಶ್ ರೆಡ್ಡಿಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಮಾರ್ಕೊ ಜಾನ್ಸನ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. 12 ಓವರ್‌ಗಳ ನಂತರ ತಂಡದ ಸ್ಕೋರ್ 96/4.
ಹೈದರಾಬಾದ್ ಮೂರನೇ ವಿಕೆಟ್ ಕಳೆದುಕೊಂಡಿದೆ. ಅರ್ಧಶತಕದ ಸನಿಹದಲ್ಲಿದ್ದ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದ್ದಾರೆ. ಹೆನ್ರಿಕ್ ಕ್ಲಾಸೆನ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. 11 ಓವರ್‌ಗಳ ನಂತರ ತಂಡದ ಸ್ಕೋರ್ 92/3.
ಅನ್ಶುಲ್ ತಮ್ಮ ಮೂರನೇ ಓವರ್‌ನಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಬೌಲ್ಡ್ ಮಾಡಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಮಯಾಂಕ್ ಐದು ರನ್ ಗಳಿಸಲಷ್ಟೇ ಶಕ್ತರಾದರು. ನಿತೀಶ್ ಕುಮಾರ್ ರೆಡ್ಡಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಎಂಟು ಓವರ್‌ಗಳ ನಂತರ ತಂಡದ ಸ್ಕೋರ್ 71/2.
ಮುಂಬೈ ಇಂಡಿಯನ್ಸ್ ವಿರುದ್ಧ ಅಭಿಷೇಕ್ ಶರ್ಮಾ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದರೂ ಅವರಿಗೆ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಕೊನೆಗೆ ಬುಮ್ರಾಗೆ ಬಲಿಯಾಗಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಮೂರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿದೆ. ಟ್ರಾವಿಸ್ ಹೆಡ್ 14 ರನ್ ಮತ್ತು ಅಭಿಷೇಕ್ ಶರ್ಮಾ 9 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಹೈದರಾಬಾದ್ ಇನ್ನಿಂಗ್ಸ್ ಆರಂಭವಾಗಿದೆ. ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಯಾನ್ಸನ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್.
ಇಂಪ್ಯಾಕ್ಟ್ ಪ್ಲೇಯರ್: ಮಯಾಂಕ್ ಮಾರ್ಕಾಂಡೆ, ಗ್ಲೆನ್ ಫಿಲಿಪ್ಸ್, ಸನ್ವೀರ್ ಸಿಂಗ್, ಜಯದೇವ್ ಉನದ್ಕತ್, ಉಮ್ರಾನ್ ಮಲಿಕ್.
ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.
ಇಂಪ್ಯಾಕ್ಟ್ ಪ್ಲೇಯರ್: ನೆಹಾಲ್ ವಾಧೇರಾ, ಶಮ್ಸ್ ಮುಲಾನಿ, ಶಿವಾಲಿಕ್ ಶರ್ಮಾ, ಡೆವಾಲ್ಡ್ ಬ್ರೂಯಿಸ್, ರೊಮಾರಿಯೋ ಶೆಫರ್ಡ್.
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Published On - 7:00 pm, Mon, 6 May 24