AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Michael Bracewell: T20 ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ಬರೆದ ಯುವ ಆಟಗಾರ

Michael Bracewell: ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪರ ಡೇನ್ ಕ್ಲೀವರ್ ಅಜೇಯ 78 ರನ್ ಗಳಿಸಿ ಮಿಂಚಿದ್ದರು. 55 ಎಸೆತಗಳನ್ನು ಎದುರಿಸಿದ್ದ ಕ್ಲೀವರ್​ 5 ಬೌಂಡರಿ ಹಾಗೂ 4 ಸಿಕ್ಸರ್ ಬಾರಿಸಿದ್ದರು.

Michael Bracewell: T20 ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ಬರೆದ ಯುವ ಆಟಗಾರ
Michael Bracewell
TV9 Web
| Edited By: |

Updated on: Jul 21, 2022 | 12:04 PM

Share

ಟಿ20 ಕ್ರಿಕೆಟ್​ನಲ್ಲಿ ಹಲವು ಬೌಲರ್​ಗಳು ಹ್ಯಾಟ್ರಿಕ್ ವಿಕೆಟ್​​ಗಳನ್ನು ಪಡೆದಿದ್ದಾರೆ. ಆದರೆ ಇದುವರೆಗೆ ಯಾವುದೇ ಬೌಲರ್​ ತನ್ನ ಮೊದಲ ಓವರ್​ನಲ್ಲೇ 3 ವಿಕೆಟ್​ ಉರುಳಿಸಿದ ನಿದರ್ಶನವಿಲ್ಲ. ಆದರೀಗ ತಾನೆಸೆದ ಮೊದಲ ಓವರ್​ನಲ್ಲೇ 3 ವಿಕೆಟ್​ ಪಡೆಯುವ ಮೂಲಕ ನ್ಯೂಜಿಲೆಂಡ್​ನ ಯುವ ಆಲ್​ರೌಂಡರ್ ಮೈಕೆಲ್ ಬ್ರೇಸ್​ವೆಲ್ ಹೊಸ ಇತಿಹಾಸ ಬರೆದಿದ್ದಾರೆ. ಐರ್ಲೆಂಡ್ ವಿರುದ್ದ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 179 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಐರ್ಲೆಂಡ್ ತಂಡವು ಹಂತದಲ್ಲಿ ಉತ್ತಮ ಸ್ಥಿತಿಯಲ್ಲೇ ಇತ್ತು.

ಆದರೆ ಯಾವಾಗ ಮೈಕೆಲ್ ಬ್ರೇಸ್​ವೆಲ್ ಚೆಂಡನ್ನು ಕೈಗೆತ್ತಿಕೊಂಡರೋ, ಇಡೀ ಪಂದ್ಯದ ಚಿತ್ರಣ ಬದಲಿಸಿದರು. ತಮ್ಮ ವೃತ್ತಿಜೀವನದ ಎರಡನೇ ಟಿ20 ಪಂದ್ಯವಾಡುತ್ತಿರುವ ಬ್ರೇಸ್​ವೆಲ್ 14ನೇ ಓವರ್​ ಎಸೆಯಲು ಬಂದರು. ತಮ್ಮ ವೃತ್ತಿಜೀವನ ಮೊದಲ ಓವರ್‌ನ ಮೊದಲ ಎಸೆತದಲ್ಲಿ ಬೌಂಡರಿ ನೀಡಿದರು. ನಂತರ ಎರಡನೇ ಎಸೆತದಲ್ಲಿ ರನ್ ಓಡಿದರು. ಮೂರನೇ ಎಸೆತದಲ್ಲಿ ಡೀಪ್ ಮಿಡ್‌ವಿಕೆಟ್‌ನಲ್ಲಿ ಫಿಲಿಪ್‌ಗೆ ಕ್ಯಾಚಿತ್ತು ಮಾರ್ಕ್ ಆಡೈರ್ ಹೊರನಡೆದರು. ಮುಂದಿನ ಎಸೆತದಲ್ಲಿ ಮ್ಯಾಗರ್ತಿ ಕೂಡ ಫಿಲಿಪ್ ಕೈಗೆ ಕ್ಯಾಚ್ ನೀಡಿದರು. ಇನ್ನು 5ನೇ ಎಸೆತದಲ್ಲಿ ಕ್ರೇಗ್ ಯಂಗ್ ಇಶ್ ಸೋಧಿಗೆ ಕ್ಯಾಚ್ ನೀಡುವ ಮೂಲಕ ಹೊರನಡೆದರು.

ಇದರೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ ಮೊದಲ ಓವರ್​ನಲ್ಲೇ ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಮೊದಲ ಬೌಲರ್​ ಎಂಬ ವಿಶ್ವ ದಾಖಲೆ ಮೈಕೆಲ್ ಬ್ರೇಸ್​ವೆಲ್ ಪಾಲಾಯಿತು. ಹಾಗೆಯೇ ಬ್ರೇಸ್‌ವೆಲ್ ಅವರು T20I ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ನ್ಯೂಜಿಲೆಂಡ್ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಜೇಕಬ್ ಓರಮ್ ಮತ್ತು ಟಿಮ್ ಸೌಥಿ ಈ ಸಾಧನೆ ಮಾಡಿದ್ದರು. ತಮ್ಮ ಮೊದಲ ಓವರ್​ನ 5 ಎಸೆತಗಳಲ್ಲಿ 3 ವಿಕೆಟ್‌ಗಳನ್ನು ಕಬಳಿಸುವ ಮೈಕೆಲ್ ಬ್ರೇಸ್​ವೆಲ್ ನ್ಯೂಜಿಲೆಂಡ್‌ ತಂಡಕ್ಕೆ 88 ರನ್‌ಗಳ ಬೃಹತ್ ಮೊತ್ತದ ಗೆಲುವನ್ನು ತಂದುಕೊಟ್ಟರು.

ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪರ ಡೇನ್ ಕ್ಲೀವರ್ ಅಜೇಯ 78 ರನ್ ಗಳಿಸಿ ಮಿಂಚಿದ್ದರು. 55 ಎಸೆತಗಳನ್ನು ಎದುರಿಸಿದ್ದ ಕ್ಲೀವರ್​ 5 ಬೌಂಡರಿ ಹಾಗೂ 4 ಸಿಕ್ಸರ್ ಬಾರಿಸಿದ್ದರು. ಇದಲ್ಲದೇ ಫಿನ್ ಅಲೆನ್ ಕೂಡ 20 ಎಸೆತಗಳಲ್ಲಿ 35 ರನ್ ಗಳಿಸಿದರು. ಪರಿಣಾಮ ನ್ಯೂಜಿಲೆಂಡ್ 4 ವಿಕೆಟ್​ ನಷ್ಟಕ್ಕೆ 179 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಐರ್ಲೆಂಡ್ ತಂಡವು ಕೇವಲ 91 ರನ್​ಗಳಿಗೆ ಆಲೌಟ್ ಆಗಿ ಹೀನಾಯವಾಗಿ ಸೋಲೊಪ್ಪಿಕೊಂಡಿತು.

Follow Us
TV9 Web
TV9 Web

TV9 Kannada

Read More
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?