AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ತಂಡದ ಬಿಗ್ ಆಫರ್ ತಿರಸ್ಕರಿಸಿದ ಮೈಕಲ್ ಹಸ್ಸಿ!

ಇಂಗ್ಲೆಂಡ್ ಪುರುಷರ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಹುದ್ದೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ತಿರುವು ಎದುರಾಗಿದೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ಟೆಸ್ಟ್ ತಂಡದ ಜವಾಬ್ದಾರಿ ಹೊತ್ತಿರುವ ಮುಖ್ಯ ತರಬೇತುದಾರ ಸ್ಟೀಫನ್ ಫ್ಲೆಮಿಂಗ್ ಅವರ ತಂತ್ರಗಾರಿಕೆಗೆ ಆರಂಭದಲ್ಲೇ ಹಿನ್ನಡೆಯಾಗಿದ್ದು, ಆಸ್ಟ್ರೇಲಿಯಾದ ಮಾಜಿ ಅನುಭವಿ ಬ್ಯಾಟರ್ ಮೈಕಲ್ ಹಸ್ಸಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಆಫರ್ ಅನ್ನು ತಿರಸ್ಕರಿಸಿದ್ದಾರೆ.

ಇಂಗ್ಲೆಂಡ್ ತಂಡದ ಬಿಗ್ ಆಫರ್ ತಿರಸ್ಕರಿಸಿದ ಮೈಕಲ್ ಹಸ್ಸಿ!
Michael Hussey Image Credit source: GettyImages
ಝಾಹಿರ್ ಯೂಸುಫ್
|

Updated on: Sep 02, 2026 | 10:27 AM

Share

ಇಂಗ್ಲೆಂಡ್ ಪುರುಷರ ಟೆಸ್ಟ್ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗುವಂತೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ECB) ನೀಡಿದ್ದ ಬಿಗ್ ಆಫರ್ ಅನ್ನು ಆಸ್ಟ್ರೇಲಿಯಾದ ಮಾಜಿ ಆಟಗಾರ ಮೈಕಲ್ ಹಸ್ಸಿ ಅಧಿಕೃತವಾಗಿ ತಿರಸ್ಕರಿಸಿದ್ದಾರೆ. ಈ ಪೂರ್ಣಾವಧಿ ಹುದ್ದೆಯನ್ನು ಬೇಡವೆಂದಿರುವ ಅವರು, ಕ್ರಿಕೆಟ್ ಆಸ್ಟ್ರೇಲಿಯಾ ಜೊತೆ 2027ರ ಆ್ಯಶಸ್ ಸರಣಿಗಾಗಿ ಅಲ್ಪಾವಧಿಯ ಕನ್ಸಲ್ಟೆಂಟ್ (ಸಲಹೆಗಾರ) ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಫ್ಲೆಮಿಂಗ್ ಆಫರ್ ನೀಡಿದ್ದೇಕೆ?

ಇತ್ತೀಚೆಗಷ್ಟೇ ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ತರಬೇತುದಾರರಾಗಿ ನೇಮಕಗೊಂಡಿರುವ ನ್ಯೂಝಿಲೆಂಡ್‌ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್, ಮೈಕಲ್ ಹಸ್ಸಿ ಅವರಿಗೆ ಬ್ಯಾಟಿಂಗ್ ಕೋಚ್ ಹುದ್ದೆಯ ಆಫರ್ ನೀಡಿದ್ದರು. ಇದಕ್ಕೆ ಮುಖ್ಯ ಕಾರಣ ಇಬ್ಬರ ನಡುವಣ ಒಡನಾಟ.

ಐಪಿಎಲ್​ನಲ್ಲಿ ಸ್ಟೀಫನ್ ಫ್ಲೆಮಿಂಗ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ವೇಳೆ ಮೈಕಲ್ ಹಸ್ಸಿ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಲಾಗಿತ್ತು. ಈ ಮೂಲಕ ಇಬ್ಬರು ದೀರ್ಘಕಾಲದಿಂದ ಒಟ್ಟಿಗೆ ಕೆಲಸ ಮಾಡಿದ್ದಾರೆ. ಸಿಎಸ್‌ಕೆ ಫ್ರಾಂಚೈಸಿಯಲ್ಲಿನ ಈ ಸುದೀರ್ಘ ಒಡನಾಟ ಮತ್ತು ಪರಸ್ಪರ ಆತ್ಮೀಯತೆಯ ಕಾರಣದಿಂದಲೇ, ಫ್ಲೆಮಿಂಗ್ ಅವರು ಇಂಗ್ಲೆಂಡ್ ಟೆಸ್ಟ್ ತಂಡದ ಬ್ಯಾಟಿಂಗ್ ಜವಾಬ್ದಾರಿಯನ್ನೂ ಹಸ್ಸಿ ಹೆಗಲಿಗೇರಿಸಲು ಉತ್ಸುಕರಾಗಿದ್ದರು.

ಹುದ್ದೆ ನಿರಾಕರಿಸಲು ಪ್ರಮುಖ ಕಾರಣಗಳು?

51 ವರ್ಷದ ಮೈಕಲ್ ಹಸ್ಸಿ ಸದ್ಯ ವಿಶ್ವದಾದ್ಯಂತ ಹಲವು ಕ್ರಿಕೆಟ್ ಜವಾಬ್ದಾರಿಗಳನ್ನು ಹೊಂದಿದ್ದಾರೆ. ಇಂಗ್ಲೆಂಡ್‌ನ ಪೂರ್ಣಾವಧಿ ಕೋಚ್ ಹುದ್ದೆ ಒಪ್ಪಿಕೊಂಡರೆ ಅವರ ಉಳಿದ ಒಪ್ಪಂದಗಳಿಗೆ ತೊಂದರೆಯಾಗುತ್ತಿತ್ತು. ಹೀಗಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

  • ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿದ್ದಾರೆ.
  • ‘ದಿ ಹಂಡ್ರೆಡ್’ ಟೂರ್ನಿಯಲ್ಲಿ ವೆಲ್ಷ್ ಫೈರ್ ತಂಡದ ಮುಖ್ಯ ತರಬೇತುದಾರರಾಗಿದ್ದಾರೆ.
  • ಆಸ್ಟ್ರೇಲಿಯಾದ ಫಾಕ್ಸ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ರೋಹಿತ್ ಶರ್ಮಾ ಹೆಗಲಿಗೆ ಮುಂಬೈ ಇಂಡಿಯನ್ಸ್ ‘ನಾಯಕ’ನ ಆಯ್ಕೆ!

ಇಸಿಬಿಯ ಮುಂದಿನ ನಡೆ ಏನು?

ಮೈಕಲ್ ಹಸ್ಸಿ ಈ ಆಫರ್ ಅನ್ನು ತಿರಸ್ಕರಿಸಿದ ಬೆನ್ನಲ್ಲೇ, ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್, ಮಾಜಿ ಆರಂಭಿಕ ಆಟಗಾರ ಮಾರ್ಕಸ್ ಟ್ರೆಸ್ಕೋಥಿಕ್ ಅವರನ್ನು ಸಂಪರ್ಕಿಸಿದ್ದಾರೆ. ಸದ್ಯ ಇಂಗ್ಲೆಂಡ್ ತಂಡದ ಹಂಗಾಮಿ ಕೋಚ್ ಆಗಿ ಜವಾಬ್ದಾರಿ ನಿಭಾಯಿಸುತ್ತಿರುವ ಟ್ರೆಸ್ಕೋಥಿಕ್ ಅವರನ್ನೇ ಸ್ಟೀಫನ್ ಫ್ಲೆಮಿಂಗ್ ಅವರ ಅಡಿಯಲ್ಲಿ ಪೂರ್ಣಾವಧಿ ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಲು ಇಸಿಬಿ ಒಲವು ತೋರಿದೆ ಎಂದು ವರದಿಯಾಗಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ