AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಶ್ವಕಪ್ ಟ್ರೋಫಿಗೆ ಅಗೌರವ ತೋರಿಲ್ಲ, ಮುಂದೆಯೂ ಹೀಗೆ ಮಾಡುವೆ’; ಮತ್ತೆ ಉದ್ಧಟತನದ ಹೇಳಿಕೆ ನೀಡಿದ ಮಾರ್ಷ್

Mitchell Marsh: ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಡ್ರೆಸ್ಸಿಂಗ್ ರೂಂನಲ್ಲಿ ಕೈಯಲ್ಲಿ ಬಿಯರ್ ಹಿಡಿದು, ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದರು. ಮಿಚೆಲ್ ಮಾರ್ಷ್ ಅವರ ಈ ನಡವಳಿಕೆಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿತ್ತು. ಆ ಬಳಿಕ ಮಾರ್ಷ್​ ನಡೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದೀಗ ಮಿಚೆಲ್ ಮಾರ್ಷ್ ತಮ್ಮ ಆ ನಡವಳಿಕೆಯ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

‘ವಿಶ್ವಕಪ್ ಟ್ರೋಫಿಗೆ ಅಗೌರವ ತೋರಿಲ್ಲ, ಮುಂದೆಯೂ ಹೀಗೆ ಮಾಡುವೆ’; ಮತ್ತೆ ಉದ್ಧಟತನದ ಹೇಳಿಕೆ ನೀಡಿದ ಮಾರ್ಷ್
ಮಿಚೆಲ್ ಮಾರ್ಷ್​
ಪೃಥ್ವಿಶಂಕರ
|

Updated on:Dec 01, 2023 | 3:18 PM

Share

2023ರ ಏಕದಿನ ವಿಶ್ವಕಪ್‌ನ (ODI World Cup 2023) ಫೈನಲ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ (India vs Australia) ದಾಖಲೆಯ 6ನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದಿತ್ತು. ಟೀಂ ಇಂಡಿಯಾವನ್ನು ಅದರ ತಾಯ್ನಾಡಿನಲ್ಲೇ ಮಣಿಸಿದ್ದ ಕಾಂಗರೂಗಳು ಮೈದಾನದಲ್ಲಿ ಹುಚ್ಚೆದು ಕುಣಿದು ಸಂಭ್ರಮಿಸಿದ್ದರು. ಆ ಬಳಿಕ ತಂಡದ ಡ್ರೆಸ್ಸಿಂಗ್ ರೂಮ್​ನಲ್ಲೂ ಸಂಭ್ರಮಾಚರಣೆ ಮುಂದುವರೆದಿತ್ತು. ಈ ವೇಳೆ ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ (Mitchell Marsh) ಡ್ರೆಸ್ಸಿಂಗ್ ರೂಂನಲ್ಲಿ ಕೈಯಲ್ಲಿ ಬಿಯರ್ ಹಿಡಿದು, ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದರು. ಮಿಚೆಲ್ ಮಾರ್ಷ್ ಅವರ ಈ ನಡವಳಿಕೆಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿತ್ತು. ಆ ಬಳಿಕ ಮಾರ್ಷ್​ ನಡೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದೀಗ ಮಿಚೆಲ್ ಮಾರ್ಷ್ ತಮ್ಮ ಆ ನಡವಳಿಕೆಯ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಮತ್ತೆ ಉದ್ಧಟತನದ ಹೇಳಿಕೆ ನೀಡಿದ ಮಾರ್ಷ್

ಸಾಕಷ್ಟು ಪರ ವಿರೋದದ ಚರ್ಚೆಯ ನಡುವೆ ಇದೇ ಮೊದಲ ಬಾರಿಗೆ ತನ್ನ ನಡವಳಿಕೆಯ ಬಗ್ಗೆ ಮಾತನಾಡಿರುವ ಮಾರ್ಷ್​, ‘ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವ ಮೂಲಕ ತಾನು ಯಾವುದೇ ಅಗೌರವ ಎಸಗಿಲ್ಲ’ ಎಂದಿದ್ದಾರೆ. ಹಾಗೆಯೇ ಮುಂದೆಯೂ ಈ ರೀತಿಯ ಕೃತ್ಯವನ್ನು ಎಸಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮಾರ್ಷ್​, ‘ನಾನು ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಬಹುಶಃ ಹಾದು, ಮುಂದೆಯೂ ಹೀಗೆ ಮಾಡುತ್ತೇನೆ’ ಎಂದು ಉತ್ತರಿಸಿದ್ದಾರೆ.

IND vs AUS, World Cup Final: ಕೈಯಲ್ಲಿ ಬಿಯರ್ ಬಾಟಲ್ ಹಿಡಿದು, ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್ ಮಾರ್ಷ್: ಮೈಚಳಿ ಬಿಡಿಸಿದ ಭಾರತೀಯರು

ಆ ಫೋಟೋದಲ್ಲಿ ಅಂಥದ್ದೇನೂ ಇರಲಿಲ್ಲ

ಆಸ್ಟ್ರೇಲಿಯನ್ ಮಾಧ್ಯಮಗಳೊಂದಿಗೆ ಮಾತನಾಡಿದ ಮಾರ್ಷ್​, ‘ಆ ಫೋಟೋದಲ್ಲಿ ಯಾರನ್ನೂ ಅವಮಾನಿಸುವ ಉದ್ದೇಶ ಇರಲಿಲ್ಲ. ನಾನು ಅದರ ಬಗ್ಗೆ ಹೆಚ್ಚು ಯೋಚಿಸಿಲ್ಲ. ನಾನು ಸೋಶಿಯಲ್ ಮೀಡಿಯಾವನ್ನು ಹೆಚ್ಚಾಗಿ ಬಳಸುವುದಿಲ್ಲ. ಆದರೆ ಇದನ್ನು ಗಮನಿಸಿದವರು ನೀವು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟಿದ್ದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ ಎಂದು ನನಗೆ ಹೇಳಿದ್ದರು. ಅದು ಮುಗಿದು ಹೋದ ಅಧ್ಯಾಯ. ಆದರೆ, ಆ ಫೋಟೋದಲ್ಲಿ ಅಂಥದ್ದೇನೂ ಇರಲಿಲ್ಲ’ ಎಂದು ಮಾರ್ಷ್​ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಫೈನಲ್‌ ಪಂದ್ಯ ಹೀಗಿತ್ತು

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಈ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 50 ಓವರ್‌ಗಳಲ್ಲಿ ಭಾರತ 240 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತ್ತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಭರ್ಜರಿ ಶತಕ ಬಾರಿಸಿದರೆ, ಭಾರತದ ಪರ ಕೆಎಲ್ ರಾಹುಲ್ ಗರಿಷ್ಠ 66 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Fri, 1 December 23

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ