AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ ಸಂಯೋಜಿತ ಇಲೆವೆನ್ ಹೆಸರಿಸಿದ ಮಾರ್ಷ್

Mitchell Marsh All Time ODI XI: ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಮಿಚೆಲ್ ಮಾರ್ಷ್ ಭಾರತ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಆಟಗಾರರನ್ನು ಒಳಗೊಂಡಿರುವ ಸಾರ್ವಕಾಲಿಕ  ಇಲೆವೆನ್ ಹೆಸರಿಸಿದ್ದಾರೆ. ಈ 11 ಪ್ಲೇಯರ್ಸ್​ಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾದ ನಾಲ್ವರು ಆಟಗಾರರು ಕಾಣಿಸಿಕೊಂಡಿದ್ದಾರೆ.

ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ ಸಂಯೋಜಿತ ಇಲೆವೆನ್ ಹೆಸರಿಸಿದ ಮಾರ್ಷ್
Mitchell Marsh
ಝಾಹಿರ್ ಯೂಸುಫ್
|

Updated on: Oct 09, 2025 | 11:53 AM

Share

ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ ಆಟಗಾರರನ್ನು ಒಳಗೊಂಡ ಸಂಯೋಜಿತ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್​ನಲ್ಲಿ ಟೀಮ್ ಇಂಡಿಯಾದ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್ ಧೋನಿ, ಆಸ್ಟ್ರೇಲಿಯಾದ ಯಶಸ್ವಿ ಕ್ಯಾಪ್ಟನ್ ರಿಕಿ ಪಾಂಟಿಂಗ್, ಸ್ಪಿನ್ ದಂತಕಥೆ ಶೇನ್ ವಾರ್ನ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

ಮಿಚೆಲ್ ಮಾರ್ಷ್ ಹೆಸರಿಸಿರುವ ಕಂಬೈನ್ಡ್ ಇಲೆವೆನ್​ನಲ್ಲಿ ಆರಂಭಿಕರಾಗಿ ಆಯ್ಕೆಯಾಗಿರುವುದು ಡೇವಿಡ್ ವಾರ್ನರ್ ಹಾಗೂ ಆ್ಯಡಂ ಗಿಲ್​ಕ್ರಿಸ್ಟ್​. ಇನ್ನು ಮೂರನೇ ಕ್ರಮಾಂಕಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಹೆಸರಿಸಿದ್ದಾರೆ.

ನಾಲ್ಕನೇ ಕ್ರಮಾಂಕಕ್ಕೆ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಐದನೇ ಕ್ರಮಾಂಕದಲ್ಲಿ ಇಂಗ್ಲೆಂಡ್​ನ ದಾಂಡಿಗ ಜೋ ರೂಟ್ ಕಾಣಿಸಿಕೊಂಡಿದ್ದಾರೆ. ಆರನೇ ಕ್ರಮಾಂಕದಲ್ಲಿ ಮಾರ್ಷ್ ಆಯ್ಕೆ ಮಾಡಿರುವುದು ಮೈಕೆಲ್ ಬೆವನ್ ಅವರನ್ನು.

ಇನ್ನು ಏಳನೇ ಕ್ರಮಾಂಕದಲ್ಲಿ ಆಲ್​ರೌಂಡರ್ ಆ್ಯಂಡ್ರ್ಯೂ ಸೈಮಂಡ್ಸ್ ಅವರನ್ನು ಆಯ್ಕೆ ಮಾಡಿದ್ದಾರೆ. ಸ್ಪಿನ್ನರ್ ಆಗಿ ಭಾರತದ ಅನಿಲ್ ಕುಂಬ್ಳೆ ಅವರನ್ನು ಆಯ್ಕೆ ಮಾಡಿರುವ ಮಾರ್ಷ್, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಡಾರೆನ್ ಗೌಫ್ ಹಾಗೂ ಜೇಮ್ಸ್ ಅ್ಯಂಡರ್ಸನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಅದರಂತೆ ಮಿಚೆಲ್ ಮಾರ್ಷ್ ಹೆಸರಿಸಿರುವ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ ಸಂಯೋಜಿತ ಸಾರ್ವಕಾಲಿಕ ಏಕದಿನ ಇಲೆವೆನ್ ಈ ಕೆಳಗಿನಂತಿದೆ…

  • ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)
  • ಆ್ಯಡಂ ಗಿಲ್​ಕ್ರಿಸ್ಟ್ (ಆಸ್ಟ್ರೇಲಿಯಾ)
  • ಸಚಿನ್ ತೆಂಡೂಲ್ಕರ್ (ಭಾರತ)
  • ವಿರಾಟ್ ಕೊಹ್ಲಿ (ಭಾರತ)
  • ಜೋ ರೂಟ್ (ಇಂಗ್ಲೆಂಡ್)
  • ಮೈಕಲ್ ಬೆವನ್ (ಆಸ್ಟ್ರೇಲಿಯಾ)
  • ಆ್ಯಂಡ್ರ್ಯೂ ಸೈಮಂಡ್ಸ್ (ಆಸ್ಟ್ರೇಲಿಯಾ)
  • ಅನಿಲ್ ಕುಂಬ್ಳೆ (ಭಾರತ)
  • ಜಸ್​ಪ್ರೀತ್ ಬುಮ್ರಾ (ಭಾರತ)
  • ಡಾರೆನ್ ಗೌಫ್ (ಇಂಗ್ಲೆಂಡ್)
  • ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)

ಇದನ್ನೂ ಓದಿ: ಅಭಿಷೇಕ್ ಅಬ್ಬರಕ್ಕೆ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ರ‍್ಯಾಂಕಿಂಗ್ ಷೇಕ್ ಷೇಕ್ 

ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಹೆಸರಿಸಿರುವ ಈ ಸಾರ್ವಕಾಲಿಕ ಏಕದಿನ ಇಲೆವೆನ್​ನಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಇದಾಗ್ಯೂ ಒಡಿಐ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗ್ಲೆನ್ ಮೆಕ್​ಗ್ರಾಥ್, ರಿಕಿ ಪಾಂಟಿಂಗ್, ರೋಹಿತ್ ಶರ್ಮಾ, ಶೇನ್ ವಾರ್ನ್​, ಕೆವಿನ್ ಪೀಟರ್ಸನ್ ಅವರಂತಹ ಹೆಸರುಗಳನ್ನು ಕೈ ಬಿಟ್ಟಿರುವುದು ಇದೀಗ ಸೋಷಿಯಲ್ ಮೀಡಿಯಾ ಚರ್ಚೆಗೆ ಕಾರಣವಾಗಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ