
ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ ಆಟಗಾರರನ್ನು ಒಳಗೊಂಡ ಸಂಯೋಜಿತ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್ನಲ್ಲಿ ಟೀಮ್ ಇಂಡಿಯಾದ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್ ಧೋನಿ, ಆಸ್ಟ್ರೇಲಿಯಾದ ಯಶಸ್ವಿ ಕ್ಯಾಪ್ಟನ್ ರಿಕಿ ಪಾಂಟಿಂಗ್, ಸ್ಪಿನ್ ದಂತಕಥೆ ಶೇನ್ ವಾರ್ನ್ಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.
ಮಿಚೆಲ್ ಮಾರ್ಷ್ ಹೆಸರಿಸಿರುವ ಕಂಬೈನ್ಡ್ ಇಲೆವೆನ್ನಲ್ಲಿ ಆರಂಭಿಕರಾಗಿ ಆಯ್ಕೆಯಾಗಿರುವುದು ಡೇವಿಡ್ ವಾರ್ನರ್ ಹಾಗೂ ಆ್ಯಡಂ ಗಿಲ್ಕ್ರಿಸ್ಟ್. ಇನ್ನು ಮೂರನೇ ಕ್ರಮಾಂಕಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಹೆಸರಿಸಿದ್ದಾರೆ.
ನಾಲ್ಕನೇ ಕ್ರಮಾಂಕಕ್ಕೆ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಐದನೇ ಕ್ರಮಾಂಕದಲ್ಲಿ ಇಂಗ್ಲೆಂಡ್ನ ದಾಂಡಿಗ ಜೋ ರೂಟ್ ಕಾಣಿಸಿಕೊಂಡಿದ್ದಾರೆ. ಆರನೇ ಕ್ರಮಾಂಕದಲ್ಲಿ ಮಾರ್ಷ್ ಆಯ್ಕೆ ಮಾಡಿರುವುದು ಮೈಕೆಲ್ ಬೆವನ್ ಅವರನ್ನು.
ಇನ್ನು ಏಳನೇ ಕ್ರಮಾಂಕದಲ್ಲಿ ಆಲ್ರೌಂಡರ್ ಆ್ಯಂಡ್ರ್ಯೂ ಸೈಮಂಡ್ಸ್ ಅವರನ್ನು ಆಯ್ಕೆ ಮಾಡಿದ್ದಾರೆ. ಸ್ಪಿನ್ನರ್ ಆಗಿ ಭಾರತದ ಅನಿಲ್ ಕುಂಬ್ಳೆ ಅವರನ್ನು ಆಯ್ಕೆ ಮಾಡಿರುವ ಮಾರ್ಷ್, ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಡಾರೆನ್ ಗೌಫ್ ಹಾಗೂ ಜೇಮ್ಸ್ ಅ್ಯಂಡರ್ಸನ್ ಅವರನ್ನು ಆಯ್ಕೆ ಮಾಡಿದ್ದಾರೆ.
ಅದರಂತೆ ಮಿಚೆಲ್ ಮಾರ್ಷ್ ಹೆಸರಿಸಿರುವ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ ಸಂಯೋಜಿತ ಸಾರ್ವಕಾಲಿಕ ಏಕದಿನ ಇಲೆವೆನ್ ಈ ಕೆಳಗಿನಂತಿದೆ…
ಇದನ್ನೂ ಓದಿ: ಅಭಿಷೇಕ್ ಅಬ್ಬರಕ್ಕೆ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ರ‍್ಯಾಂಕಿಂಗ್ ಷೇಕ್ ಷೇಕ್
ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಹೆಸರಿಸಿರುವ ಈ ಸಾರ್ವಕಾಲಿಕ ಏಕದಿನ ಇಲೆವೆನ್ನಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಇದಾಗ್ಯೂ ಒಡಿಐ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗ್ಲೆನ್ ಮೆಕ್ಗ್ರಾಥ್, ರಿಕಿ ಪಾಂಟಿಂಗ್, ರೋಹಿತ್ ಶರ್ಮಾ, ಶೇನ್ ವಾರ್ನ್, ಕೆವಿನ್ ಪೀಟರ್ಸನ್ ಅವರಂತಹ ಹೆಸರುಗಳನ್ನು ಕೈ ಬಿಟ್ಟಿರುವುದು ಇದೀಗ ಸೋಷಿಯಲ್ ಮೀಡಿಯಾ ಚರ್ಚೆಗೆ ಕಾರಣವಾಗಿದೆ.