AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಠಾತ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಟಿ20 ನಾಯಕ ಮಿಚೆಲ್ ಮಾರ್ಷ್

Mitchell Marsh Quits Red-Ball State Cricket: ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ರಾಜ್ಯ ಮಟ್ಟದ ರೆಡ್-ಬಾಲ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ನಿರ್ಧಾರವು ಶೆಫೀಲ್ಡ್ ಶೀಲ್ಡ್ ಟೂರ್ನಮೆಂಟ್‌ನಲ್ಲಿ ಅವರ ಭಾಗವಹಿಸುವಿಕೆಗೆ ತೆರೆ ಎಳೆದಿದೆ. ಆಶಸ್ ಸರಣಿಯ ಸಂದರ್ಭದಲ್ಲಿ ಬಂದ ಈ ನಿರ್ಧಾರ, ಮಾರ್ಷ್ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೂ, ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದರೆ ಟೆಸ್ಟ್ ಆಡಲು ಸಿದ್ಧ ಎಂದು ಮಾರ್ಷ್ ಸ್ಪಷ್ಟಪಡಿಸಿದ್ದಾರೆ.

ಹಠಾತ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಟಿ20 ನಾಯಕ ಮಿಚೆಲ್ ಮಾರ್ಷ್
Mitchell Marsh
ಪೃಥ್ವಿಶಂಕರ
|

Updated on: Dec 08, 2025 | 4:18 PM

Share

ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಪ್ರಸ್ತುತ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಆಶಸ್ (Ashes) ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ನಡುವೆ, ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ (Mitchell Marsh) ರಾಜ್ಯ ಮಟ್ಟದ ರೆಡ್-ಬಾಲ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಪರಿಣಾಮವಾಗಿ, ಅವರು ಇನ್ನು ಮುಂದೆ ಶೆಫೀಲ್ಡ್ ಶೀಲ್ಡ್ ಟೂರ್ನಮೆಂಟ್‌ನಲ್ಲಿ ಪಶ್ಚಿಮ ಆಸ್ಟ್ರೇಲಿಯಾ ಪರ ಆಡುವುದಿಲ್ಲ. ಈ ನಿರ್ಧಾರವು ಮಾರ್ಷ್ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಏಕೆಂದರೆ ಆಶಸ್ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಲಿದ್ದ ಮಾರ್ಷ್​ ಈ ನಿರ್ಧಾರ ತೆಗೆದುಕೊಂಡಿರುವುದು ಸಾಕಷ್ಟು ಅನುಮಾನಗಳನ್ನು ಮೂಡಿಸಿದೆ.

ಅಚ್ಚರಿಯ ನಿರ್ಧಾರ ತೆಗೆದುಕೊಂಡ ಮಾರ್ಷ್​

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಇತ್ತೀಚಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮಾರ್ಷ್, ತಮ್ಮ ತಂಡದ ಆಟಗಾರರಿಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. 2019 ರಿಂದ, ಅವರು ಕಾರ್ಯನಿರತ ಅಂತರರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ ರಾಜ್ಯ ಮಟ್ಟದಲ್ಲಿ ಕೇವಲ ಒಂಬತ್ತು ಪಂದ್ಯಗಳನ್ನು ಆಡಿದ್ದಾರೆ. 2009 ರಲ್ಲಿ ಪಶ್ಚಿಮ ಆಸ್ಟ್ರೇಲಿಯಾ ಪರ ಪಾದಾರ್ಪಣೆ ಮಾಡಿದ ಮಾರ್ಷ್, ಈಗ ರೆಡ್-ಬಾಲ್ ಕ್ರಿಕೆಟ್‌ನಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಆದರೆ ರಾಷ್ಟ್ರೀಯ ತಂಡಕ್ಕಾಗಿ ಟೆಸ್ಟ್ ಪಂದ್ಯಗಳನ್ನು ಆಡುವ ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿಗಳ ಪ್ರಕಾರ, ಆಯ್ಕೆದಾರರು ಕರೆದರೆ ಆಶಸ್ ಸರಣಿಯಲ್ಲಿ ಭಾಗವಹಿಸಲು ಸಿದ್ಧನಿದ್ದೇನೆ ಎಂದು ಮಾರ್ಷ್ ಸ್ಪಷ್ಟಪಡಿಸಿದ್ದಾರೆ. ಆದರೆ ಶೀಲ್ಡ್ ಪಂದ್ಯಗಳಿಂದ ದೂರ ಸರಿದಿರುವ ಮಾರ್ಷ್​ಗೆ ಆಶಸ್ ಸರಣಿಯಲ್ಲಿ ಆಡುವ ಅವಕಾಶ ಸಿಗುವುದು ಅನುಮಾನವಾಗಿದೆ. ಇದಕ್ಕೂ ಮೊದಲು, ಆಸ್ಟ್ರೇಲಿಯಾದ ಮುಖ್ಯ ಆಯ್ಕೆದಾರ ಜಾರ್ಜ್ ಬೈಲಿ ನವೆಂಬರ್‌ನಲ್ಲಿ ಮಾರ್ಷ್ ಅವರ ಪ್ರದರ್ಶನವು ಆಶಸ್‌ಗೆ ಹೊಸ ಶಕ್ತಿಯನ್ನು ತರಬಹುದು ಎಂದು ಹೇಳಿದ್ದರು. ಸರಣಿಯ ಆರಂಭದಲ್ಲಿ ಮಾರ್ಷ್​ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಆದರೆ ಪರಿಸ್ಥಿತಿಯನ್ನು ಅವಲಂಬಿಸಿ ನಂತರ ಬದಲಾವಣೆಗಳನ್ನು ಮಾಡಲಿದ್ದೇವೆ ಎಂದಿದ್ದರು.

IPL 2025: ಐಪಿಎಲ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಮಿಚೆಲ್ ಮಾರ್ಷ್

ಮಿಚೆಲ್ ಮಾರ್ಷ್ ಟೆಸ್ಟ್ ವೃತ್ತಿಜೀವನ

2014 ರಲ್ಲಿ ಟೆಸ್ಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಮಾರ್ಷ್ ಇದುವರೆಗೆ 46 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ, ಅವರು 2083 ರನ್ ಮತ್ತು 51 ವಿಕೆಟ್‌ಗಳನ್ನು ಪಡೆದಿದ್ದಾರೆ. ಕಳೆದ ವರ್ಷ ಭಾರತದ ವಿರುದ್ಧ ಆಸ್ಟ್ರೇಲಿಯಾ ಪರ ಅವರು ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಪ್ರಸ್ತುತ ಆಸ್ಟ್ರೇಲಿಯಾದ ಟಿ20 ತಂಡದ ನಾಯಕರಾಗಿರುವ ಮಾರ್ಷ್​ ತಮ್ಮ ನಾಯಕತ್ವದಲ್ಲಿ ತಂಡವನ್ನು 2026 ರ ಟಿ20 ವಿಶ್ವಕಪ್‌ನಲ್ಲಿ ಮುನ್ನಡೆಸಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ