IND vs AUS: ಎರಡನೇ ಏಕದಿನ ಪಂದ್ಯಕ್ಕೆ ಇಬ್ಬರು ಆಟಗಾರರು ಅಲಭ್ಯ..!

India vs Australia: ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ದ್ವಿತೀಯ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ ಆಸ್ಟ್ರೇಲಿಯಾ ತಂಡ.

IND vs AUS: ಎರಡನೇ ಏಕದಿನ ಪಂದ್ಯಕ್ಕೆ ಇಬ್ಬರು ಆಟಗಾರರು ಅಲಭ್ಯ..!
IND vs AUS
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 23, 2023 | 5:41 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎರಡನೇ ಏಕದಿನ ಪಂದ್ಯವು ಸೆಪ್ಟೆಂಬರ್ 24 ರಂದು ನಡೆಯಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರರಾದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮಿಚೆಲ್ ಸ್ಟಾರ್ಕ್ ಅಲಭ್ಯರಾಗಿದ್ದಾರೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲೂ ಈ ಇಬ್ಬರು ಆಟಗಾರರು ಕಣಕ್ಕಿಳಿದಿರಲಿಲ್ಲ.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಏಕದಿನ ವಿಶ್ವಕಪ್​ ಹಿನ್ನಲೆಯಲ್ಲಿ ಮುನ್ನಚ್ಚರಿಕೆವಹಿಸುವ ಸಲುವಾಗಿ ಮೊದಲೆರಡು ಪಂದ್ಯಗಳಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಗಾಯದಿಂದ ಚೇತರಿಸಿಕೊಂಡು ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಅವರಿಗೂ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಮ್ಯಾಕ್ಸಿ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗದ ಬೌಲರ್ ಜೋಶ್ ಹ್ಯಾಝಲ್​ವುಡ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ ಪಾಲಿಗೆ ನಿರ್ಣಾಯಕ ಪಂದ್ಯ:

ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ದ್ವಿತೀಯ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ ಆಸ್ಟ್ರೇಲಿಯಾ ತಂಡ.

ದ್ವಿತೀಯ ಪಂದ್ಯಕ್ಕಾಗಿ ಹೇಗಿರಲಿದೆ ಆಸ್ಟ್ರೇಲಿಯಾ ತಂಡ:

  • ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಆರಂಭಿಕರಾಗಿ ಆಡಲಿದ್ದಾರೆ.
  • ಇನ್-ಫಾರ್ಮ್ ಮಾರ್ನಸ್ ಲಾಬುಶೇನ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
  • ಮಧ್ಯಮ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಬಲ ತುಂಬಲಿದ್ದಾರೆ.
  • ಮಾರ್ಕಸ್ ಸ್ಟೊಯಿನಿಸ್ ಮತ್ತು ಕ್ಯಾಮರೋನ್ ಗ್ರೀನ್ ಆಲ್ ಆರೌಂಡರ್​ಗಳಾಗಿ ಕಣಕ್ಕಿಳಿಯಲಿದ್ದಾರೆ.
  • ಶಾನ್ ಅಬಾಟ್ ಬದಲಿಗೆ ದ್ವಿತೀಯ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11:

  1. ಡೇವಿಡ್ ವಾರ್ನರ್
  2. ಮಿಚೆಲ್ ಮಾರ್ಷ್
  3. ಮಾರ್ನಸ್ ಲಾಬುಶೇನ್
  4. ಸ್ಟೀವ್ ಸ್ಮಿತ್
  5. ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್)
  6. ಮಾರ್ಕಸ್ ಸ್ಟೊಯಿನಿಸ್
  7. ಕ್ಯಾಮರೋನ್ ಗ್ರೀನ್
  8. ಮ್ಯಾಥ್ಯೂ ಶಾರ್ಟ್
  9. ಪ್ಯಾಟ್ ಕಮ್ಮಿನ್ಸ್ (ನಾಯಕ)
  10. ಜೋಶ್ ಹ್ಯಾಝಲ್​ವುಡ್
  11. ಆ್ಯಡಂ ಝಂಪಾ

ಇದನ್ನೂ ಓದಿ: ನಂಬರ್ 1: ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ 2ನೇ ತಂಡ ಭಾರತ

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ