ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎರಡನೇ ಏಕದಿನ ಪಂದ್ಯವು ಸೆಪ್ಟೆಂಬರ್ 24 ರಂದು ನಡೆಯಲಿದೆ. ಇಂದೋರ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರರಾದ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಮಿಚೆಲ್ ಸ್ಟಾರ್ಕ್ ಅಲಭ್ಯರಾಗಿದ್ದಾರೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲೂ ಈ ಇಬ್ಬರು ಆಟಗಾರರು ಕಣಕ್ಕಿಳಿದಿರಲಿಲ್ಲ.
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಮುನ್ನಚ್ಚರಿಕೆವಹಿಸುವ ಸಲುವಾಗಿ ಮೊದಲೆರಡು ಪಂದ್ಯಗಳಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಇನ್ನು ಗಾಯದಿಂದ ಚೇತರಿಸಿಕೊಂಡು ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿರುವ ಗ್ಲೆನ್ ಮ್ಯಾಕ್ಸ್ವೆಲ್ ಅವರಿಗೂ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಮ್ಯಾಕ್ಸಿ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗದ ಬೌಲರ್ ಜೋಶ್ ಹ್ಯಾಝಲ್ವುಡ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಇಂದೋರ್ನಲ್ಲಿ ನಡೆಯಲಿರುವ ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ದ್ವಿತೀಯ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ ಆಸ್ಟ್ರೇಲಿಯಾ ತಂಡ.
ಇದನ್ನೂ ಓದಿ: ನಂಬರ್ 1: ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ 2ನೇ ತಂಡ ಭಾರತ
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.