ಭಾರತ ವಿರುದ್ಧದ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾದ ಇಬ್ಬರು ಆಟಗಾರರು ಅಲಭ್ಯ

Team India: ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಸ್ಟೀವ್ ಸ್ಮಿತ್ ಹಾಗೂ ಪ್ಯಾಟ್ ಕಮಿನ್ಸ್ ಸಂಪೂರ್ಣ ಫಿಟ್​ನೆಸ್ ಹೊಂದಿದ್ದು, ಹೀಗಾಗಿ ಭಾರತ ವಿರುದ್ಧದ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯಲಿದ್ದಾರೆ. ಈ ಸರಣಿಯ ವೇಳಾಪಟ್ಟಿ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಭಾರತ ವಿರುದ್ಧದ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾದ ಇಬ್ಬರು ಆಟಗಾರರು ಅಲಭ್ಯ
Australia Team
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 21, 2023 | 2:59 PM

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುಕ್ರವಾರದಿಂದ (ಸೆ.22) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್​ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ.

ಆ್ಯಶಸ್ ಸರಣಿಯ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮಿಚೆಲ್ ಸ್ಟಾರ್ಕ್ ಆ ಬಳಿಕ ಯಾವುದೇ ಪಂದ್ಯವಾಡಿಲ್ಲ. ಇದೀಗ ಸಂಪೂರ್ಣ ಫಿಟ್​ ಆಗಿ ಭಾರತದ ವಿರುದ್ಧ ಸರಣಿ ಆಡಲು ಬಂದಿದ್ದಾರೆ. ಆದರೆ ತೊಡೆ ಸಂದು ನೋವಿನ ಸಮಸ್ಯೆ ಹೊಂದಿರುವ ಕಾರಣ ಮುನ್ನಚ್ಚರಿಕೆಯ ಸಲುವಾಗಿ ಮೊದಲ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಇತ್ತೀಚೆಗಷ್ಟೇ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲು ಮೊದಲ ಪಂದ್ಯದ ವೇಳೆ ವಿಶ್ರಾಂತಿ ಪಡೆಯಲು ಮ್ಯಾಕ್ಸ್​ವೆಲ್ ನಿರ್ಧರಿಸಿದ್ದಾರೆ. ಮತ್ತೊಂದೆಡೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಸ್ಟೀವ್ ಸ್ಮಿತ್ ಹಾಗೂ ಪ್ಯಾಟ್ ಕಮಿನ್ಸ್ ಸಂಪೂರ್ಣ ಫಿಟ್​ನೆಸ್ ಹೊಂದಿದ್ದು, ಹೀಗಾಗಿ ಭಾರತ ವಿರುದ್ಧದ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  1. ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  2. ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  3. ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.

ಇದನ್ನೂ ಓದಿ: ICC ODI Rankings: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

Published On - 2:57 pm, Thu, 21 September 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ