ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುಕ್ರವಾರದಿಂದ (ಸೆ.22) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ.
ಆ್ಯಶಸ್ ಸರಣಿಯ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮಿಚೆಲ್ ಸ್ಟಾರ್ಕ್ ಆ ಬಳಿಕ ಯಾವುದೇ ಪಂದ್ಯವಾಡಿಲ್ಲ. ಇದೀಗ ಸಂಪೂರ್ಣ ಫಿಟ್ ಆಗಿ ಭಾರತದ ವಿರುದ್ಧ ಸರಣಿ ಆಡಲು ಬಂದಿದ್ದಾರೆ. ಆದರೆ ತೊಡೆ ಸಂದು ನೋವಿನ ಸಮಸ್ಯೆ ಹೊಂದಿರುವ ಕಾರಣ ಮುನ್ನಚ್ಚರಿಕೆಯ ಸಲುವಾಗಿ ಮೊದಲ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಇನ್ನು ಗ್ಲೆನ್ ಮ್ಯಾಕ್ಸ್ವೆಲ್ ಕೂಡ ಇತ್ತೀಚೆಗಷ್ಟೇ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಸಂಪೂರ್ಣ ಫಿಟ್ನೆಸ್ನೊಂದಿಗೆ ಕಣಕ್ಕಿಳಿಯಲು ಮೊದಲ ಪಂದ್ಯದ ವೇಳೆ ವಿಶ್ರಾಂತಿ ಪಡೆಯಲು ಮ್ಯಾಕ್ಸ್ವೆಲ್ ನಿರ್ಧರಿಸಿದ್ದಾರೆ. ಮತ್ತೊಂದೆಡೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಸ್ಟೀವ್ ಸ್ಮಿತ್ ಹಾಗೂ ಪ್ಯಾಟ್ ಕಮಿನ್ಸ್ ಸಂಪೂರ್ಣ ಫಿಟ್ನೆಸ್ ಹೊಂದಿದ್ದು, ಹೀಗಾಗಿ ಭಾರತ ವಿರುದ್ಧದ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯಲಿದ್ದಾರೆ.
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.
ಇದನ್ನೂ ಓದಿ: ICC ODI Rankings: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್
ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.
Published On - 2:57 pm, Thu, 21 September 23