AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಚೆಲ್ ಮ್ಯಾಜಿಕ್: ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಸ್ಟಾರ್ಕ್​

Mitchell Starc Hat Trick: 167 ರನ್​ಗಳ ಗುರಿ ಪಡೆದ ನೆದರ್​ಲೆಂಡ್ಸ್ ತಂಡಕ್ಕೆ ಮೊದಲ ಓವರ್​ನಲ್ಲೇ ಮಿಚೆಲ್ ಸ್ಟಾರ್ಕ್ ಶಾಕ್ ನೀಡಿದರು. ಪ್ರಥಮ ಓವರ್​ನ 5ನೇ ಎಸೆತದಲ್ಲಿ ಮ್ಯಾಕ್ಸ್​ (0) ರನ್ನು ಎಲ್​ಬಿ ಬಲೆಗೆ ಬೀಳಿಸಿದ ಸ್ಟಾರ್ಕ್​, 6ನೇ ಎಸೆತದಲ್ಲಿ ವೆಸ್ಲಿ ಬ್ಯಾರೆಸಿ (0) ರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಮಿಚೆಲ್ ಮ್ಯಾಜಿಕ್: ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಸ್ಟಾರ್ಕ್​
Mitchell Starc
TV9 Web
| Edited By: |

Updated on: Sep 30, 2023 | 10:06 PM

Share

ಏಕದಿನ ವಿಶ್ವಕಪ್​ನ 5ನೇ ಅಭ್ಯಾಸ ಪಂದ್ಯದಲ್ಲಿ ನೆದರ್​ಲೆಂಡ್ಸ್​​ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್​ ಮಿಂಚಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

ಆದರೆ ಮಳೆಯ ಕಾರಣ ವಿಳಂಬವಾಗಿ ಶುರುವಾದ ಪಂದ್ಯವನ್ನು 23 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ 42 ಎಸೆತಗಳಲ್ಲಿ 55 ರನ್ ಬಾರಿಸಿದರೆ, ಕ್ಯಾಮರೋನ್ ಗ್ರೀನ್ 26 ಎಸೆತಗಳಲ್ಲಿ 34 ರನ್ ಚಚ್ಚಿದರು.

ಇನ್ನು ಮಿಚೆಲ್ ಸ್ಟಾರ್ಕ್​ 22 ಎಸೆತಗಳಲ್ಲಿ ಅಜೇಯ 24 ರನ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ನಿಗದಿತ 23 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಕಲೆಹಾಕಿದೆ.

ಮಿಚೆಲ್ ಮ್ಯಾಜಿಕ್:

167 ರನ್​ಗಳ ಗುರಿ ಪಡೆದ ನೆದರ್​ಲೆಂಡ್ಸ್ ತಂಡಕ್ಕೆ ಮೊದಲ ಓವರ್​ನಲ್ಲೇ ಮಿಚೆಲ್ ಸ್ಟಾರ್ಕ್ ಶಾಕ್ ನೀಡಿದರು. ಪ್ರಥಮ ಓವರ್​ನ 5ನೇ ಎಸೆತದಲ್ಲಿ ಮ್ಯಾಕ್ಸ್​ (0) ರನ್ನು ಎಲ್​ಬಿ ಬಲೆಗೆ ಬೀಳಿಸಿದ ಸ್ಟಾರ್ಕ್​, 6ನೇ ಎಸೆತದಲ್ಲಿ ವೆಸ್ಲಿ ಬ್ಯಾರೆಸಿ (0) ರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಇನ್ನು 3ನೇ ಓವರ್​ನ ಮೊದಲ ಎಸೆತದಲ್ಲೇ ಬಾಸ್ ಡಿ ಲೀಡೆ (0) ರನ್ನು ಕ್ಲೀನ್ ಬೌಲ್ಡ್​ ಮಾಡಿ ಮಿಚೆಲ್ ಸ್ಟಾರ್ಕ್​ ಹ್ಯಾಟ್ರಿಕ್ ಸಾಧನೆ ಮಾಡಿದರು. ಈ ಮೂಲಕ ಏಕದಿನ ವಿಶ್ವಕಪ್​ಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ.

ಮತ್ತೊಂದೆಡೆ ಮಿಚೆಲ್ ಮಾರ್ಷ್ ವಿಕ್ರಮಜಿತ್ (9) ವಿಕೆಟ್ ಪಡೆದರೆ, ಸೀಬ್ರಾಂಡ್​ (9) ರನ್ನು ಶಾನ್ ಅಬಾಟ್ ಬೌಲ್ಡ್ ಮಾಡಿದರು. ಪರಿಣಾಮ 9 ಓವರ್​ ಮುಕ್ತಾಯದ ವೇಳೆಗೆ ನೆದರ್​ಲೆಂಡ್ಸ್​ ತಂಡವು 46 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಇದನ್ನೂ ಓದಿ: ICC World Cup 2023: ಏಕದಿನ ಕ್ರಿಕೆಟ್​ನ ಏಳು ಅದ್ಭುತ ಆಟಗಾರರು..!

ನೆದರ್​ಲೆಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಕ್ವಿಬ್ ಬ್ಯಾರೆಸಿ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ